ವಿಜಯನಗರ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಹೆಚ್.ಎನ್ ಮೊಹಮ್ಮದ್ ಇಮಾಮ್ ನಿಯಾಜಿ ಮನವಿ

Date:

ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಜಿಲ್ಲಾಧ್ಯಕ್ಷರ ನೇಮಕಾತಿ ಮಾಡುವಂತೆ ಒತ್ತಾಯ ಮಾಡಲಾಗಿದೆ. ವಿಜಯನಗರದ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎನ್ ಮೊಹಮ್ಮದ್ ಇಮಾಮ್ ನಿಯಾಜಿ ಅವರು ತಮ್ಮನ್ನು ಜಿಲ್ಲಾಧ್ಯಕ್ಷರಾಗಿ ನೇಮಕ ಮಾಡುವಂತೆ ಮನವಿ ಸಲ್ಲಿಸಿದರು.

- Advertisement -

ತೆಲಂಗಾಣ ಸರ್ಕಾರದ ಸಲಹೆಗಾರ ಹಾಗೂ ಎಐಸಿಸಿ ವೀಕ್ಷಕ ಶ್ರೀ ಹರಕಾರ್ ವೇಣುಗೋಪಾಲ್ ರಾವ್ ಹೊಸಪೇಟೆ ನಗರದ ಕೊಂಡನಾಯಕನಹಳ್ಳಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಗೆ‌ ಆಗಮಿಸಿದ್ದ ಸಂದರ್ಭದಲ್ಲಿ, “ಪಕ್ಷದ ಸಂಘಟನೆಗೆ ತಾವು ಸುಮಾರು 20 ವರ್ಷಗಳಿಂದ ನಿಷ್ಠೆಯಿಂದ ಸೇವೆ ಸಲ್ಲಿಸಿರುವುದಾಗಿ, ಜಿಲ್ಲೆಯಾದ್ಯಂತ ಪಕ್ಷವನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಕಾರ್ಯನಿರ್ವಹಿಸಲು ಅವಕಾಶ ನೀಡಬೇಕು” ಎಂದು ಕೋರಿದರು.

“ಪಕ್ಷದ ಹಿರಿಯರು, ಕಾರ್ಯಕರ್ತರು ಹಾಗೂ ವಿವಿಧ ಮುಖಂಡರೊಂದಿಗೆ ಸಮನ್ವಯ ಸಾಧಿಸಿ ಕಾಂಗ್ರೆಸ್ ಸಂಘಟನೆಯನ್ನು ಬಲಿಷ್ಠಗೊಳಿಸುವ ಸಂಕಲ್ಪ ಹೊಂದಿದ್ದೇನೆ” ಎಂದು ಇಮಾಮ್ ನಿಯಾಜಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಪ್ರಜಾಪ್ರಭುತ್ವದ ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಕಾಂಗ್ರೆಸ್ ವೀಕ್ಷಕರು ಜಿಲ್ಲೆಯ ವಿವಿಧ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಅಭಿಪ್ರಾಯಗಳನ್ನು ಆಲಿಸಿ ಜಿಲ್ಲಾಧ್ಯಕ್ಷರ ನೇಮಕಾತಿಗೆ ಸಂಬಂಧಿಸಿದ ವರದಿಯನ್ನು ಪಕ್ಷದ ಹೈಕಮಾಂಡ್‌ಗೆ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.

ಇದೇ ವೇಳೆ ಹೂವಿನಹಡಗಲಿ ಕ್ಷೇತ್ರದ ಶಾಸಕರಾದ ಶ್ರೀಮತಿ ಲತಾ ಮಲ್ಲಿಕಾರ್ಜುನ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರೆಜಿಲ್ ಗಡಿ ದಾಟಿದ ಗೆಲುವು: ಜನತಂತ್ರಕ್ಕೆ ಆಶಾಕಿರಣವಾದ ಲುಲಾ, ಆದರೆ ಅಳಿಸಿಲ್ಲ ಬಲಪಂಥದ ಹೆಜ್ಜೆಗುರುತು

ಲ್ಯಾಟಿನ್ ಅಮೆರಿಕದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಬ್ರೆಜಿಲ್‌ನಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯು...