ಹಂಪಿ | ಲಕ್ಷ್ಮೀ ಆನೆ ಸ್ಥಳಾಂತರಕ್ಕೆ ಸ್ಥಳೀಯರ, ಮಾವುತನ ವಿರೋಧ

Date:

ವಿಶ್ವವಿಖ್ಯಾತ ಹಂಪಿಯ ವಿರೂಪಾಕ್ಷೇಶ್ವರ ದೇವಾಲಯದ ಲಕ್ಷ್ಮೀ ಆನೆಯ ಸ್ಥಳಾಂತರಕ್ಕೆ ಅರಣ್ಯ ಇಲಾಖೆ ಮುಂದಾಗಿದ್ದು, ಸ್ಥಳೀಯರು, ಭಕ್ತರು, ಪ್ರವಾಸಿ ಮಾರ್ಗದರ್ಶಕರು ಭಾವುಕ ಪ್ರತಿಭಟನೆ ನಡೆಸಿದರು. ಹಂಪಿಯ ವಿರೂಪಾಕ್ಷೇಶ್ವರ ದೇಗುಲದ ಮಂದೆ ಪ್ರತಿಭಟನೆ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಆನೆ ಮಾವುತನ ಆಕ್ರಂದನ ಎಲ್ಲರ ಕಣ್ಣಾಲಿಗಳು ಒದ್ದೆಯಾಗಿಸಿತ್ತು.

- Advertisement -

ಅನಾರೋಗ್ಯದ ಕಾರಣ ನೀಡಿ ಲಕ್ಷ್ಮೀ ಆನೆಯನ್ನು ಹಂಪಿಯಿಂದ ಕೋಲಾರಕ್ಕೆ ಕಳಿಸಲು ಸರ್ಕಾರ ನಿರ್ಧಾರ ಮಾಡಲಾಗಿದೆ. ಅರಣ್ಯಾಧಿಕಾರಿಗಳು ಆನೆಯನ್ನು ಕೊಂಡೊಯ್ಯಲು ಸಿದ್ದವಾಗುತ್ತಿದ್ದಂತೆ, ವರ್ಷಗಳಿಂದ ಮಗುವಿನಂತೆ ಆನೆಯನ್ನು ಸಾಕಿದ್ದ ಮಾವುತ ಮತ್ತು ಕುಟುಂಬಸ್ಥರ ರೋದನ ಮುಗಿಲು ಮುಟ್ಟಿತ್ತು. ಆನೆಯ ಸೊಂಡಿಲು ಬಿಗಿದಪ್ಪಿಕೊಂಡು ಬಿಕ್ಕಿ ಬಿಕ್ಕಿ ಅತ್ತರು. ಈ ದೃಶ್ಯಗಳು ಎಲ್ಲರ ಕರುಳು ಹಿಂಡುವಂತಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ವಿಷಯ ಹಬ್ಬುತ್ತಿದ್ದಂತೆ ಹಂಪಿ, ಕಮಲಾಪುರ, ಕಡ್ಡಿರಾಂಪುರ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳ ನೂರಾರು ಜನರು ಜಮಾಯಿಸಿ, ದೇವಸ್ಥಾನದ ಮುಂದೆ ಮೌನ ಪ್ರತಿಭಟನೆ ನಡೆಸಿದರು. “ಲಕ್ಷ್ಮಿ ಆನೆ ಹಂಪಿ ಜನರ ಭಾವನಾತ್ಮಕ ಆಸ್ತಿ. ಆಕೆಗೆ ಅನಾರೋಗ್ಯ ಇದ್ದರೆ ತುಂಗಭದ್ರಾ ನದಿ ತಟದ ಮ್ಯಾಂಗೋ ಟ್ರೀ ಪ್ರದೇಶ ಆನೆಗೆ ಚಿಕಿತ್ಸೆ ನೀಡಲು ಅತ್ಯಂತ ಸೂಕ್ತ ಜಾಗವಾಗಿದೆ. ಅಲ್ಲಿಯೇ ವೈದ್ಯರನ್ನು ಕರೆಸಿ ಚಿಕಿತ್ಸೆ ಕೊಡಿಸಿ. ಯಾವುದೇ ಕಾರಣಕ್ಕೂ ಬೇರೆಡೆ ಕಳುಹಿಸಿದಿರಿ” ಎಂದು ಪಟ್ಟು ಹಿಡಿದರು. ಈ ವೇಳೆ ಸ್ಥಳದಲ್ಲೇ ಇದ್ದು ಎಸ್.ಪಿ. ಜಾಹ್ನವಿ ಅವರು ಬಿಗಿ ಬಂದೋಬಸ್ತ್ ಒದಗಿಸಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಂಡರು.

ಮತ್ತೊಂದೆಡೆ ಆನೆಯನ್ನು ಹಂಪಿಯಲ್ಲೇ ಉಳಿಸುವಂತೆ ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ಜೋರಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರು ಆನೆ ಲಕ್ಷ್ಮೀಯ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ಸೂಕ್ತ ಚಿಕಿತ್ಸೆಗೆ ಕೋಲಾರದ ಆನೆ ಚಿಕಿತ್ಸಾ ಕೇಂದ್ರಕ್ಕೆ ಕಳುಹಿಸಲಾಗುತ್ತಿದೆ. ಸುಮಾರು ಮೂರು ತಿಂಗಳುಗಳ ಕಾಲ ವಿಶೇಷ ಆರೈಕೆ ಹಾಗೂ ಚಿಕಿತ್ಸೆ ಅಗತ್ಯವಿದೆ. ಆರೋಗ್ಯದಲ್ಲಿ ಸುಧಾರಣೆ ಕಂಡ ನಂತರ ಪುನಃ ಹಂಪಿಗೆ ಕರೆತರಲಾಗುತ್ತದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟನೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...