ಹೊಸಪೇಟೆ | ಸರ್ಕಾರಿ ಆಸ್ಪತ್ರೆ ನೌಕರನಿಂದ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ

Date:

ವಿಜಯನಗರ ಜಿಲ್ಲೆಯ ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ತಾಯಿಯನ್ನು ಕರೆತಂದಿದ್ದ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಆಸ್ಪತ್ರೆಯ ಡಿ ಗ್ರೂಪ್ ನೌಕರ ಅಜಯ್ ಮದಕರಿ(37) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಹೊಸಪೇಟೆಯ 100 ಬೆಡ್ ಸರ್ಕಾರಿ ಆಸ್ಪತ್ರೆಗೆ ಮೇ 5ರಂದು ಸಂತ್ರಸ್ತ ಬಾಲಕಿ ತನ್ನ ತಾಯಿಯನ್ನು ಚಿಕಿತ್ಸೆಗೆ ಕರೆದುಕೊಂಡು ಬಂದಿದ್ದು, ಬಾಲಕಿ ಒಂಟಿಯಾಗಿರುವುದನ್ನು ಆರೋಪಿ ಅಜಯ್ ಗಮನಿಸಿದ್ದನು. ರಾತ್ರಿ ಬಾಲಕಿಯನ್ನು ಪುಸಲಾಯಿಸಿ ಆಸ್ಪತ್ರೆಯ ವಸತಿ ಗೃಹಕ್ಕೆ ಕರೆದೊಯ್ದ ದುಷ್ಕರ್ಮಿ, ಬಾಲಕಿಗೆ ಮತ್ತು ಬರುವ ಮದ್ದು ಸೇರಿಸಿದ ಜ್ಯೂಸ್ ನೀಡಿ ಅತ್ಯಾಚಾರ ಎಸಗಿರುವುದಾಗಿ ದೂರಿನಲ್ಲಿ ಉಲ್ಲೇಖವಾಗಿದೆ. ಮರುದಿನ ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಅನುಮಾನಗೊಂಡು ವಿಚಾರಿಸಿದ ತಾಯಿಯ ಬಳಿ ಬಾಲಕಿ ಘಟನೆಯ ಕುರಿತು ಹೇಳಿಕೊಂಡಿದ್ದಾಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಪೋಕ್ಸೊ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿದ್ದ ಆರೋಪಿ ಅಜಯ್ ಬೆಂಗಳೂರಿನಲ್ಲಿ ಸಿಕ್ಕಿಬಿದ್ದಿದ್ದಾನೆ. ಹೊಸಪೇಟೆ ಬಡಾವಣೆ ಠಾಣೆ ಪೊಲೀಸರು ಆರೋಪಿಯನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಸಂತ್ರಸ್ತ ಬಾಲಕಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಸಂಬಂಧಪಟ್ಟ ಇಲಾಖೆ ತನಿಖೆ ಮುಂದುವರೆಸಿದೆ.

ಈ ಸುದ್ದಿ ಓದಿದ್ದೀರಾ? ವಿಜಯನಗರ | ಆ್ಯಂಬುಲೆನ್ಸ್‌ನಲ್ಲಿ ಅವಳಿ ಮಕ್ಕಳಿಗೆ ಜನ್ಮ: ತಾಯಿ ಮಕ್ಕಳು ಸುರಕ್ಷಿತ

“ಇಂತಹ ಪ್ರಕರಣಗಳು ಆತಂಕಕಾರಿ. ಆಸ್ಪತ್ರೆಗೆ ಚಿಕಿತ್ಸೆಗೆ ಬರುವ ಹೆಣ್ಣು ಮಕ್ಕಳಿಗೆ ಇಂತಹ ಕಾಮುಕರ ಮಾನಗೇಡಿ ಕೆಲಸದಿಂದ ಭಯ ಮತ್ತು ಅಸುರಕ್ಷತೆ ಕಾಡುತ್ತದೆ. ಸರ್ಕಾರಿ ಆಸ್ಪತ್ರೆಗಳ ಮೇಲಿನ ನಂಬಿಕೆಗೆ ಧಕ್ಕೆ ಉಂಟಾಗುತ್ತದೆ. ಪ್ರಕರಣದ ಆರೋಪಿಗೆ ತಕ್ಕ ಶಿಕ್ಷೆಯಾಗಬೇಕು” ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...