ಹೊಸಪೇಟೆ: ಬೈಕ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೂವರೆ ವರ್ಷದ ಮಗು ಸೇರಿದಂತೆ ಮೂವರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೊಸಪೇಟೆ-ಬಳ್ಳಾರಿ ಹೆದ್ದಾರಿಯ ಗಾದಿಗನೂರು ಗ್ರಾಮದ ಧರ್ಮಸಾಗರ ಬಳಿ ಬುಧವಾರ ನಡೆದಿದೆ.
ಕಂಪ್ಲಿ ತಾಲ್ಲೂಕಿನ ಮೆಟ್ರಿ ಗ್ರಾಮದ ತಾಯಮ್ಮ (55), ಜ್ಯೋತಿ (28) ಮತ್ತು ಒಂದೂವರೆ ವರ್ಷದ ದಿವ್ಯಾ ಮೃತಪಟ್ಟವರು. ಬೈಕ್ ಚಾಲನೆ ಮಾಡುತ್ತಿದ್ದ ಲಕ್ಷ್ಮಣ (35) ಹಾಗೂ ಅವರ ಒಂದೂವರೆ ವರ್ಷದ ಪುತ್ರಿ ಸೃಷ್ಟಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಲಕ್ಷ್ಮಣ ಅವರು ಕುಟುಂಬದ ಸದಸ್ಯರೊಂದಿಗೆ ಕೊಟಗಿನಾಳ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮೆಟ್ರಿ ಗ್ರಾಮಕ್ಕೆ ಬೈಕ್ನಲ್ಲಿ ಮರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಮಾರ್ಗಮಧ್ಯೆ ಬೈಕ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ : ಅನುಭವ ಮಂಟಪ ಉತ್ಸವ | ಹಂಸಲೇಖ, ಸಿ.ಆರ್.ಚಂದ್ರಶೇಖರ್ ಸೇರಿ ನಾಲ್ವರಿಗೆ ಪ್ರಶಸ್ತಿ ಘೋಷಣೆ




