ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಖಾನಾಹೊಸಹಳ್ಳಿಯಲ್ಲಿ ಪರವಾನಗಿ ಇಲ್ಲದೇ ಸಿಲಿಂಡರ್ ಮಾರಾಟ ಮಾಡುತ್ತಿದ್ದ ಮನೆ ಮೇಲೆ ದಾಳಿ ಮಾಡಿದ ಆಹಾರ ಇಲಾಖೆ ಮತ್ತು ಪೊಲೀಸ್ ಅಧಿಕಾರಿಗಳು 216 ಸಿಲಿಂಡರ್ ಜಪ್ತಿ ಮಾಡಿದ್ದಾರೆ.
ಹೊಸಹಳ್ಳಿ ಗ್ರಾಮದ ಕೃಷ್ಣ ಮೂರ್ತಿ ಎಂಬಾತ ಲೈಸೆನ್ಸ್ ಪಡೆಯದೇ ನೂರಾರು ಸಿಲಿಂಡರ್‌ಗಳನ್ನು ಮನೆಯಲ್ಲಿ ಇಟ್ಟುಕೊಂಡಿದ್ದರು. ಬಳಿಕ ಗ್ರಾಹಕರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು. ಅಲ್ಲದೆ ಅಕ್ರಮವಾಗಿ ಸಿಲಿಂಡರ್‌ಗಳನ್ನು ಸಂಗ್ರಹಿಸಿಟ್ಟಿದ್ದ ಬಗ್ಗೆ ಬಂದ ದೂರುಗಳನ್ವಯ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ಯಾದಗಿರಿ | ಜೈಲ್ ಭರೋ ಚಳವಳಿ: ರೈತ, ಕಾರ್ಮಿಕರು ಸೇರಿ ಹಲವರ ಬಂಧನ
ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಆಹಾರ ಇಲಾಖೆ ಹಾಗೂ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಕೃಷ್ಣಪ್ಪ ಅವರ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 216 ಸಿಲಿಂಡರ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.




