ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಪರಿಸರ ಸಂರಕ್ಷಣೆಯ ಸಂದೇಶ ಸಾರಲು ಹೊಸಪೇಟೆಯ ಕಾಳಘಟ್ಟ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು, ಶಾಲೆಯ ಚಿತ್ರಕಲಾ ಶಿಕ್ಷಕಿ ರಂಜಾನ್ ಬಿ. (ಹಂಪಿ) ಅವರ ಮಾರ್ಗದರ್ಶನದಲ್ಲಿ ಪರಿಸರ ಸ್ನೇಹಿ ಮಣ್ಣಿನ ಗಣಪತಿ ಮೂರ್ತಿಗಳನ್ನು ತಯಾರಿಸಿ ಗಮನ ಸೆಳೆದಿದ್ದಾರೆ.
ಶಾಲೆಯ ಚಿತ್ರಕಲಾ ಶಿಕ್ಷಕಿ ರಂಜಾನ್ ಬಿ. ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ನೈಸರ್ಗಿಕ ಮಣ್ಣನ್ನು ಬಳಸಿ ವಿವಿಧ ವಿನ್ಯಾಸಗಳ ಆಕರ್ಷಕ ಗಣಪತಿ ಮೂರ್ತಿಗಳನ್ನು ಸ್ವತಃ ತಯಾರಿಸಿದ್ದಾರೆ. ವಿದ್ಯಾರ್ಥಿಗಳ ಕಲಾತ್ಮಕ ಪ್ರತಿಭೆ, ಸೃಜನಶೀಲತೆ ಹಾಗೂ ಪರಿಸರದ ಮೇಲಿನ ಕಾಳಜಿ ಈ ಮಣ್ಣಿನ ಗಣಪತಿ ಮೂರ್ತಿಗಳಲ್ಲಿ ಅನಾವರಣಗೊಂಡಿದೆ.
ರಾಸಾಯನಿಕ ಬಣ್ಣಗಳು ಹಾಗೂ ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರಿಸುವ ಮೂರ್ತಿಗಳ ಬದಲಾಗಿ ಮಣ್ಣಿನ ಗಣಪತಿಯನ್ನು ಪ್ರತಿಷ್ಠಾಪಿಸುವ ಮೂಲಕ ವಿದ್ಯಾರ್ಥಿಗಳು ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಣೆಗೆ ಕರೆ ನೀಡಿದ್ದಾರೆ.
ವಿದ್ಯಾರ್ಥಿಗಳ ಈ ವಿನೂತನ ಕಲಾ ಚಟುವಟಿಕೆಗೆ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಸಿಬ್ಬಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪರಿಸರ ಸಂರಕ್ಷಣೆಯ ಜೊತೆಗೆ ಕಲಾ ಶಿಕ್ಷಣಕ್ಕೂ ಮಹತ್ವ ನೀಡುತ್ತಿರುವ ಶಾಲೆಯ ಪ್ರಯತ್ನ ಸಾರ್ವಜನಿಕರ ಗಮನ ಸೆಳೆದಿದೆ.





