ಗಣೇಶ ಮೂರ್ತಿಗೆ ವಿದ್ಯುತ್ ತಂತಿ ತಗುಲಿ ಶಾರ್ಟ್ ಸರ್ಕೀಟ್‌: ಇಬ್ಬರಿಗೆ ಗಾಯ

Date:

ವಿಜಯನಗರ ಜಿಲ್ಲೆಯ ಹೊಸಪೇಟೆ ಬಳಿಯ ಅನಂತಶಯನಗುಡಿ ಹೊರವಲಯದಲ್ಲಿ ಗಣೇಶ ಮೂರ್ತಿ ಸಾಗಿಸುವ ವೇಳೆ ವಿದ್ಯುತ್ ಅವಘಡ ಸಂಭವಿಸಿ ಇಬ್ಬರು ಗಾಯಗೊಂಡಿದ್ದಾರೆ.

- Advertisement -

ಹೊಸಪೇಟೆಯಿಂದ ಕಮಲಾಪುರಕ್ಕೆ ಬೃಹತ್ ಗಣೇಶ ಮೂರ್ತಿಯನ್ನು ಟ್ರಾಕ್ಟರ್‌ನಲ್ಲಿ ಸಾಗಿಸಲಾಗುತ್ತಿತ್ತು. ಈ ವೇಳೆ ಮೂರ್ತಿಗೆ ಕಟ್ಟಿದ್ದ ಬಿದಿರುಗಳಿಗೆ ವಿದ್ಯುತ್ ತಂತಿ ತಗುಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿದೆ. ಕಮಲಾಪುರದ ಹುಲುಗಪ್ಪ ಮತ್ತು ದೀಪಕ್ ಇಬ್ಬರಿಗೆ ವಿದ್ಯುತ್ ಶಾಕ್ ತಗುಲಿದ್ದು, ಮೈಮೇಲಿನ ಬಟ್ಟೆಗಳೆಲ್ಲ ಸುಟ್ಟು ಚರ್ಮವೂ ಸುಟ್ಟಂತಾಗಿದೆ. ತಕ್ಷಣ ಸ್ಥಳೀಯರು ಇಬ್ಬರು ಯುವಕರನ್ನು ಬೈಕ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ವಿದ್ಯುತ್ ತಂತಿ ತಗುಲಿದ್ದರಿಂದ ಗಣೇಶ ಮೂರ್ತಿ ಉರುಳಿ ಬಿದ್ದು ವಿಘ್ನಗೊಂಡಿದೆ. ಸ್ಥಳಕ್ಕೆ ವಿಜಯನಗರ ಎಸ್‌ಪಿ ಜಾಹ್ನವಿ ಎಸ್, ಹೊಸಪೇಟೆ ಡಿವೈಎಸ್‌ಪಿ ಮುರಳಿಧರ್ ಹಾಗೂ ಪಿಐಗಳಾದ ಹುಲುಗಪ್ಪ, ಗುರುರಾಜ್ ಕಟ್ಟಿಮನಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗಾಯಾಳುಗಳಿಗೆ ಹೊಸಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿ, ನಂತರ ಬಳ್ಳಾರಿಯ ವಿಮ್ಸ್‌ಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ. ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಕಲ್ಯಾಣ ಕರ್ನಾಟಕದಲ್ಲಿ 16.23 ಲಕ್ಷ ಮತದಾರರು ಔಟ್!

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡಿದ್ದು,...

ಕ್ಯಾಮೆರಾ ಆಫ್ ಆಗಿದೆ ಎಂದುಕೊಂಡು ಇಸ್ರೇಲ್ ನೀತಿ ಟೀಕೆ; ಲೈವ್ ಪ್ರಸಾರ ತಿಳಿದು ದಂಗಾದ ನಟಿ!

ದೇಶದ ನೀತಿಗಳ ಬಗ್ಗೆ ಸ್ವತಃ ಇಸ್ರೇಲ್‌ನಲ್ಲೇ ವಿರೋಧಿ ಧ್ವನಿಗಳು ಕೇಳಿಬರುತ್ತಿರುವುದು ತಿಳಿದೇ...

ಚಿಕ್ಕಮಗಳೂರು | ತಮ್ಮದೇ ಸಮುದಾಯದರಿಂದ ಬಹಿಷ್ಕಾರಗೊಂಡ ಐದು ಕುಟುಂಬ! 

ಗ್ರಾಮಗಳಲ್ಲಿ ಎಲ್ಲಾ ಗ್ರಾಮಸ್ಥರು ಅಣ್ಣ ತಮ್ಮಂದಿರು ಹಾಗೂ ಅಕ್ಕ ತಂಗಿಯರ ಹಾಗಿರುತ್ತಾರೆ....