ವಿಜಯನಗರ | ಕೆರೆ ತುಂಬಿಸುವ ಯೋಜನೆಯ ಪೈಪ್‌ಲೈನ್ ಒಡೆದು 10 ಎಕರೆ ಬೆಳೆನಾಶ: ಪರಿಹಾರಕ್ಕೆ ರೈತರ ಪಟ್ಟು

Date:

ಕೆರೆ ತುಂಬಿಸುವ ಯೋಜನೆಯ ಪೈಪ್‌ಲೈನ್ ಒಡೆದು ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ತಿಪ್ಪಾಪುರ ಗ್ರಾಮದ ಬಳಿ ಬೆಳೆಗಳು ಕೊಚ್ಚಿಹೋಗಿದ್ದು, ರೈತರು ಆಕ್ರೋಶ ಹೊರಹಾಕಿದ್ದಾರೆ.

- Advertisement -

ಕೂಡ್ಲಿಗಿ ತಾಲೂಕಿನ 74 ಕೆರೆಗಳನ್ನು ತುಂಬಿಸುವ ಯೋಜನೆಗೆ ಚಾಲನೆ ನೀಡಲಾಗಿದೆ. ಸಿಂಗಟಾಲೂರು ಏತ ನೀರಾವರಿ ಯೋಜನೆಯಿಂದ ಹೂವಿನಹಡಗಲಿ ತಾಲೂಕಿನ ಮೂಲಕ ಕೂಡ್ಲಿಗಿ ತಾಲೂಕಿನ ವಿವಿಧ ಹಳ್ಳಿಗಳ ಕೆರೆಗಳಿಗೆ ಪೈಪ್‌ಲೈನ್ ಮೂಲಕ ನೀರು ಹರಿಸಲಾಗುತ್ತಿದೆ. ಆದರೆ ಹೂವಿನ ಹಡಗಲಿ ತಾಲೂಕಿನ ತಿಪ್ಪಾಪುರ ಬಳಿ ಪೈಪ್ ಲೈನ್ ಒಡೆದಿದೆ. ರೈತ ಗಂಟಿ ರಬಿಯಾ ಅವರ ಹೊಲದಲ್ಲಿ ಹಾದು ಹೋಗಿರುವ ಪೈಪ್‌ಲೈನ್‌ನಲ್ಲಿ ದೊಡ್ಡ ರಂಧ್ರ ಬಿದ್ದು, ಜಮೀನುಗಳಿಗೆ ನೀರು ನುಗ್ಗಿ, ಮುಗಿಲೆತ್ತರಕ್ಕೆ ನೀರು ಚಿಮ್ಮಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...
ಜೋಳದ ಬೆಳೆಹಾನಿ

ಪೈಪ್ ಒಡೆದಿದ್ದರಿಂದ ಅಕ್ಕಪಕ್ಕದ ರೈತರ ಜಮೀನುಗಳಿಗೆ ನೀರು ನುಗ್ಗಿದೆ. ಈರುಳ್ಳಿ ಬೆಳೆ ಕೊಚ್ಚಿಕೊಂಡು ಹೋಗಿದ್ದರೆ, ಮೆಕ್ಕೆಜೋಳದ ಬೆಳೆ ನೆಲಕಚ್ಚಿದೆ. ನೂರಾರು ಅಡಕೆ ಮರ, 20ಕ್ಕೂ ಹೆಚ್ಚು ತೆಂಗಿನ ಮರಗಳು ಧರೆಗುರುಳಿವೆ. ಕಬ್ಬು, ಬಾಳೆ ಸೇರಿದಂತೆ 10 ಎಕರೆಗೂ ಹೆಚ್ಚು ಬೆಳೆ ಹಾನಿಯಾಗಿದ್ದು, ರೈತರಿಗೆ ದಿಕ್ಕೇ ತೋಚದಂತಾಗಿದೆ.

ಇದನ್ನೂ ಓದಿದ್ದೀರಾ? ವಿಜಯಪುರ | ಆ.25ರಂದು ಈದ್ ಮಿಲಾದ್: ಸೌಹಾರ್ದಯುತ ಮೆರವಣಿಗೆಗೆ ಮುಂಜಾಗ್ರತಾ ಕ್ರಮ

ಈ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ರೈತರಾದ ಗಂಟಿ ರಬಿಯಾ, ಕರಣಂ ಗುರುರಾಜ್ ಅವರು, ಮಳೆ ಕೊರತೆ ನಡುವೆಯೂ ಕಷ್ಟಪಟ್ಟು ಬೆಳೆಸಿದ್ದ ಬೆಳೆಗಳು ಕೊಚ್ಚಿಹೋಗಿವೆ. ಗುತ್ತಿಗೆದಾರರು ಪೈಪ್ ಲೈನ್‌ಗಾಗಿ ಹೊಲವನ್ನು ಅಗೆದು ಕಲ್ಲು, ಬಂಡೆಗಳನ್ನು ಹಾಗೆಯೇ ಬಿಟ್ಟು ಹೋಗಿದ್ದಾರೆ. ಹಾನಿಗೀಡಾಗಿರುವ ಬೆಳೆಗಳಿಗೆ ತಕ್ಷಣವೇ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ‘ಬೆಂಕಿ ಹಚ್ಚುತ್ತೇನೆ’ ಹೇಳಿಕೆ ಶಾಸಕರ ಘನತೆಗೆ ತಕ್ಕುದಲ್ಲ: ಮಂಜುನಾಥ ಮೇತ್ರಿ

ಅಕ್ರಮ ಮರಳು ಸಾಗಾಟ ಹಾಗೂ ಓವರ್‌ಲೋಡ್ ಟಿಪ್ಪರ್‌ಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸುವುದು...

ಯಾದಗಿರಿ | ಯುವಜನರಲ್ಲಿ ಸಂವಿಧಾನ ಪ್ರಜ್ಞೆ ಬೆಳೆಸಲು ಅ.17ರಿಂದ ತರಬೇತಿ ಶಿಬಿರ

ಯುವಜನರಲ್ಲಿ ಸಂವಿಧಾನಾತ್ಮಕ ಅರಿವು, ಸಾಮಾಜಿಕ ಪ್ರಜ್ಞೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ...

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...