ಜಮೀನುಗಳಿಗೆ ನುಗ್ಗಿದ ಕರಡಿಗಳು ಅಪಾರವಾದ ಜೋಳದ ಬೆಳೆ ನಾಶಪಡಿಸಿರುವ ಘಟನೆ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹುಲಿಕುಂಟೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಇಂದ್ರಮ್ಮ ಮಲ್ಲಿಯಪ್ಪ ಎಂಬುವವರ ಜಮೀನಿನಲ್ಲಿ ಬೆಳೆದಿದ್ದ ಜೋಳದ ಬೆಳೆ ಹಾನಿಯಾಗಿರುವುದರಿಂದ, ದಂಪತಿ “ಬೆಳೆಯು ಕಾಳುಕಟ್ಟುವ ಹಂತದಲ್ಲಿತ್ತು. ಈ ಸಂದರ್ಭದಲ್ಲಿ ಶನಿವಾರ ರಾತ್ರಿ ಕರಡಿಗಳ ಗುಂಪು ದಾಳಿ ಮಾಡಿ ಸಂಪೂರ್ಣ ಬೆಳೆ ಹಾಳು ಮಾಡಿದ್ದು, ಅಪಾರ ನಷ್ಟವಾಗಿದೆ” ಎಂದು ಅಳಲು ತೋಡಿಕೊಂಡರು.
“ಗ್ರಾಮದ ಹಲವು ರೈತರ ಜಮೀನುಗಳಿಗೆ ಕರಡಿಗಳು ಮತ್ತು ಕಾಡು ಹಂದಿಗಳು ದಾಳಿ ಮಾಡಿ ಬೆಳೆಯನ್ನು ನಾಶ ಪಡಿಸುತ್ತಿವೆ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಲ್ಲದೆ ಬೆಳೆ ರಕ್ಷಣೆಗೆ ರಾತ್ರಿ ಹೊತ್ತು ಕಾವಲಿಗೆ ತೆರಳುವ ಸ್ಥಿತಿ ನಿರ್ಮಾಣವಾಗಿದೆ” ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ನಾಲೆಗಳಿಗೆ ನೀರು ಹರಿಸುವಂತೆ ರೈತ ಸಂಘ ಆಗ್ರಹ
ಬೆಳೆನಷ್ಟ ಪರಿಹಾರ ಹಾಗೂ ಕಾಡುಪ್ರಾಣಿಗಳ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳಬೇಕು. ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡಬೇಕು” ಎಂದು ರೈತರು ಅಧಿಕಾರಿಗಳಿಗೆ ಮನವಿ ಮಾಡಿದರು.