ವಿಜಯನಗರ | ಎಫ್ಐಡಿ ರದ್ದು, ಸಾಲಮನ್ನಾಕ್ಕೆ ರೈತರ ಆಗ್ರಹ

Date:

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಡಿಎಪಿ ಮತ್ತು ರಸಗೊಬ್ಬರ ಬೆಲೆ ಏರಿಕೆ ವಿರುದ್ಧ ಪಾದಯಾತ್ರೆ ನಡೆಸಲಾಯಿತು. ಕರ್ನಾಟಕ‌ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜೆ. ಕಾರ್ತಿಕ್ ಬಣದಿಂದ ಸಾಯಿಬಾಬಾ ಸರ್ಕಲ್‌ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರೈತರು ಮೆರವಣಿಗೆ ನಡೆಸಿದರು.

- Advertisement -

“ಮುಂಬರುವ ದಿನಗಳಲ್ಲಿ ಎಫ್ಐಡಿ ಗೊಂದಲ ಮತ್ತು ಯೂರಿಯಾ ಡಿಎಪಿ ಗೊಬ್ಬರವನ್ನು ಮಾರುಕಟ್ಟೆಗಳಲ್ಲಿ ಮತ್ತು ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ ನಿಯಮಿತ ಇಲಾಖೆಯಲ್ಲಿ ಎಫ್ಐಡಿ ಮೂಲಕ ಗೊಬ್ಬರ ಕೊಡುವುದನ್ನು ತಕ್ಷಣ ಕೈಬಿಡಬೇಕು ಆಗ್ರಹಿಸಿದರು. ಅಲ್ಲದೇ, ಮುಂಬರುವ ದಿನಗಳಲ್ಲಿ ಎಫ್ಐಡಿ ಲಿಂಕ್ ಆಧಾರಿತ ಔಷಧಿ ಕೊಡುವುದನ್ನು ರದ್ದು ಮಾಡಬೇಕು” ಎಂದು ಆಗ್ರಹಿಸಿದರು.

ರೈತ ಹೋರಾಟಗಾರ ದಿವಂಗತ ಜೆ. ಕಾರ್ತಿಕ್ ಅವರ ಸಹೋದರಿ ಉಮಾದೇವಿ ಮಾತನಾಡಿ, “ಎಫ್ಐಡಿಯಿಂದ ಗ್ರಾಮೀಣ ಭಾಗದ ರೈತರಿಗೆ ತೊಂದರೆ ಆಗುತ್ತಿದೆ. ಮೊದಲೆಲ್ಲ ರೈತರು ಕೆಮಿಕಲ್ ಗೊಬ್ಬರ ಬಳಸುತ್ತಿರಲಿಲ್ಲ.‌ ರೈತರಿಗೆ ಈ ಗೊಬ್ಬರದ ರುಚಿ ಹಚ್ಚಿದ್ದೇ ಸರ್ಕಾರ. ಈಗ ಗೊಬ್ಬರ ವಿತರಣೆ ಮಿತಿಯನ್ನು ಕಡಿತಗೊಳಿಸಿದ್ದು ತುಂಬಾ ಬೇಸರದ ವಿಷಯ. ಅಲ್ಲದೇ, ಜಿಲ್ಲೆಯಲ್ಲಿ ಗೊಬ್ಬರದ ಕೊರತೆ ಇದ್ದರೂ ಯಾವ ತೊಂದರೆಯೂ ಇಲ್ಲವೆಂದು ಸಮಸ್ಯೆಯನ್ನು ಮರೆಮಾಚುತ್ತಿದ್ದಾರೆ” ಎಂದು ಆರೋಪಿಸಿದರು.

“ವಿದ್ಯುತ್ ಖಾಸಗೀಕರಣ ಮಾಡುವುದು ಖಂಡನೀಯ. ಖಾಸಗಿಯವರು ಇದನ್ನು ಆಕ್ರಮಣ ಮಾಡಿದರೆ ರೈತರಿಗೆ ಉಚಿತ ವಿದ್ಯುತ್ ದೊರಕುವುದಿಲ್ಲ. ಹೀಗಾಗಿ, ಸಿಎಂ ಡಿಕೆಶಿಯವರು ರೈತರಿಗೆ 24*7 ವಿದ್ಯುತ್ ಪೂರೈಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಮತ್ತೊಬ್ಬ ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಮಾತನಾಡಿ, “ಸರ್ಕಾರ ಕೂಡಲೇ ಎಫ್ಐಡಿ ಕೈಬಿಡಬೇಕು. ಖಾಸಗಿ ಅಂಗಡಿಗಳಲ್ಲಿ ಗೊಬ್ಬರ ಯಥೇಚ್ಛವಾಗಿ ಸಿಗುತ್ತಿದೆ. ಆದರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಗಳಲ್ಲಿ ಸಮರ್ಪಕವಾಗಿ ಗೊಬ್ಬರ ಸಿಗುತ್ತಿಲ್ಲ. ಈಗಾಗಲೇ ಮುಂಗಾರು ಕೈಕೊಟ್ಟಿದೆ. ಮುಖ್ಯಮಂತ್ರಿ ಡಿಕೆಶಿಯವರು, ರೈತರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ರೈತರ ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಕವಿತಾ ಎಸ್.‌ಮನ್ನಿಕೇರಿ, “ಸಂಬಂಧಪಟ್ಟವರ ಜೊತೆ ಮಾತನಾಡಿ ರೈತರಿಗೆ ಅನುಕೂಲ ಮಾಡಿ ಕೊಡುಲಾಗುವುದು” ಎಂದು ಭರವಸೆ ನೀಡಿದರು.

ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ನಾಗರಾಜ್ ಮಾತನಾಡಿ, “ಕೂಡಲೇ ಸರ್ಕಾರ ರೈತರ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ, ಪೊಲೀಸರು, ಕಟ್ಟಡ ಕಾರ್ಮಿಕರಿಗೂ ಆಘಾತ!

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್,...

ವಿಜಯಪುರ | ಅಂತಿಮ ಮತದಾರರ ಪಟ್ಟಿ ಪ್ರಕಟ: ನಾಗಠಾಣದಲ್ಲಿ ಅತಿ ಹೆಚ್ಚು ಮತದಾರರು

ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 27ರಂದು...

ಉತ್ತರ ಕನ್ನಡ | ಅಂತಿಮ ಮತದಾರರ ಪಟ್ಟಿ ಪ್ರಕಟ: ಜಿಲ್ಲೆಯಲ್ಲಿ 11.39 ಲಕ್ಷ ಮತದಾರರು

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2026ರ ಅಕ್ಟೋಬರ್ 1 ಅನ್ನು ಅರ್ಹತಾ...