ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಬಿಜೆಪಿ ಸಂಸದ ಅನಂತ್‌ಕುಮಾರ್ ಹೆಗಡೆ ವಿರುದ್ದ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದರು.
ನಗರದ ವಡಕರಾಯ ದೇವಸ್ಥಾನದಿಂದ ತಾಲೂಕು ಆಫೀಸಿನವರಿಗೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಸೇರಿ ಮೆರವಣಿಗೆಯನ್ನು ನಡೆಸಿ ಹೆಗಡೆ ಅವರ ಪ್ಲೆಕ್ಸ್‌ನ ಶವವನ್ನಾಗಿ ಮಾಡಿ ಅವರಿಗೆ ಚಪ್ಪಲಿ ಹಾರ ಮತ್ತು ಮೊಟ್ಟೆಯಿಂದ ಆ ಶವಕ್ಕೆ ಹೊಡೆದು ಒತ್ತಾಯಿಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಶಾಸಕ ಸಿರಾಜ್ ಶೇಖ್ ಮಾತನಾಡಿ, “ಸಂಸದ ಅನಂತ್ ಕುಮಾರ್ ಹೆಗಡೆ ಏಕವಚನ ಬಳಸಿದ್ದು, ಈ ರಾಜ್ಯದ ಮುಖ್ಯಮಂತ್ರಿ ಅವರಿಗೆ ಎಲ್ಲರೂ ಗೌರವ ಕೊಡಬೇಕೆಂದು ಕಾನೂನು ಹೇಳುತ್ತದೆ. ಯಾರೇ ಆಗಲಿ ಏಕವಚನದಲ್ಲಿ ಮಾತನಾಡಬಾರದು” ಎಂದು ಹೇಳಿದರು.
ಮುಂದೆ ಚುನಾವಣೆ ಇರುವ ಕಾರಣಕ್ಕೆ ಪ್ರಚೋದನೆ ಮಾತುಗಳು ಕೇಳಿಬರುತ್ತಿವೆ. ಮುಖ್ಯಮಂತ್ರಿ ವಿರುದ್ಧ ಮಾತನಾಡಿ, “ಸಮಾಜದಲ್ಲಿ ಅಶಾಂತಿ ಉಂಟುಮಾಡಲು ಯತ್ನಿಸುತ್ತಿರುವ ಅನಂತ್ ಕುಮಾರ್ ಹೆಗಡೆ ಅವರು ಮುಖ್ಯಮಂತ್ರಿ ಅವರ ಬಹಿರಂಗ ಕ್ಷಮೆ ಕೇಳಬೇಕು. ಸಂಸದ ಸ್ಥಾನದಿಂದ ವಜಾಮಾಡಿ ರಾಜ್ಯದಿಂದ ಗಡಿಪಾರು ಮಾಡಬೇಕು” ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ಮೈಸೂರು | ಅಕ್ರಮವಾಗಿ ಸಾಗಿಸುತ್ತಿದ್ದ 12 ಟನ್ ಅನ್ನಭಾಗ್ಯ ಅಕ್ಕಿ ವಶ
ಈ ವೇಳೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸೋಮಶೇಖರ್ ಬಣ್ಣದ ಮನೆ ರಾಮಕೃಷ್ಣ ನಿಂಬಗಲ್, ಎಚ್ ಮಹೇಶ್, ಬಿ ತಾಯಪ್ಪ, ಮಂಜುಳಾ ಸೇರಿದಂತೆ ಇತರರು ಇದ್ದರು.