ವಿಜಯನಗರ | ಕಲುಷಿತ ನೀರು ಸೇವಿಸಿ ವೃದ್ಧೆ ಸಾವು; ಅಧಿಕಾರಿಗಳ ಅಮಾನತಿಗೆ ಸಚಿವ ಸೂಚನೆ

Date:

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಾರಿಗನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಘಟನೆ ಸಂಬಂಧ ಮೂವರು ಅಧಿಕಾರಿಗಳನ್ನು ಅಮಾನತು ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಸೂಚನೆ ನೀಡಿದ್ದಾರೆ.

- Advertisement -

ಕಾರಿಗನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 30ಕ್ಕೂ ಅಧಿಕ ಮಂದಿ ವಾಂತಿ, ಭೇದಿಯಿಂದ ಅಸ್ವಸ್ಥರಾಗಿದ್ದರು. ಕಾರಿಗನೂರಿನ ಆರ್‌ಬಿಎಸ್‌ಎಸ್‌ಎನ್ ಕ್ಯಾಂಪ್ ನಿವಾಸಿ 66 ವರ್ಷದ ಸೀತಮ್ಮ ಮೃತ ವೃದ್ದೆ. ಶನಿವಾರ (ಜ. 6) ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ 30ಕ್ಕೂ ಹೆಚ್ಚು ಮಂದಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಪ್ರಕರಣ ಸಂಬಂಧ ನಗರಸಭೆ ಆಯುಕ್ತರಾದ ಬಂಡಿ ವಡ್ಡರ್, ಸಹಾಯಕ ಕಾರ್ಯಪಾಲಕ ಅಭಿಯಂತರ ಸತೀಶ್ ಹಾಗೂ ಕಿರಿಯ ಅಭಿಯಂತರ ಖಾಜಿ ಅವರನ್ನು ಅಮಾನತುಗೊಳಿಸಲು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ.

ಮೂವರು ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಿ ಇಲಾಖಾ ವಿಚಾರಣೆ ನಡೆಸಲು ನಿರ್ದೇಶನ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ದಿವಾಕರ್ ಅವರ ಜತೆ ನಿರಂತರ ಸಂಪರ್ಕದಲ್ಲಿದ್ದು, ಮಾಹಿತಿ ಪಡೆದು ಪ್ರಕರಣ ಮರುಕಳಿಸದಂತೆ ಎಲ್ಲ ರೀತಿಯ ಮುನ್ನಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದಾರೆ. ಜೊತೆಗೆ ಕುಡಿಯುವ ನೀರು ಪೊರೈಕೆ ಹಾಗೂ ಒಳಚರಂಡಿ ವ್ಯವಸ್ಥೆ, ಸ್ವಚ್ಛತೆ ಬಗ್ಗೆ ನಿಗಾ ವಹಿಸುವಂತೆಯೂ ಸಚಿವ ಜಮೀರ್ ಅಹಮದ್ ಖಾನ್ ಖಡಕ್​ ಎಚ್ಚರಿಕೆ ನೀಡಿದ್ದಾರೆ.

ಘಟನೆ ಬೆಳಕಿಗೆ ಬರುತ್ತಿದ್ದಂತೆ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಬಳಿಕ ಮಾತನಾಡಿದ ಅವರು, ಶುದ್ಧ ಕುಡಿಯುವ ನೀರು ಘಟಕದಿಂದ ಉಚಿತ ಕುಡಿಯುವ ನೀರನ್ನು ಗ್ರಾಮಸ್ಥರಿಗೆ ನೀಡುವಂತೆ ಸೂಚನೆ ನೀಡಲಾಗಿದೆ. ಪ್ರಕರಣ ಕುರಿತಂತೆ ಕಾರಿಗನೂರು, ಶಿಕಾರಿ ಕ್ಯಾಂಪ್‍ಗೆ ಕಲುಷಿತ ನೀರು ಸರಬರಾಜಾಗಿದೆ. ಕಲುಷಿತ ನೀರು ಪೂರೈಕೆಯಿಂದ ಘಟನೆ ನಡೆದಿದ್ದರೆ, ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್​ ನೀಡುತ್ತೇವೆ ಎಂದಿದ್ದಾರೆ.

ಅಲ್ಲದೆ, 27 ಜನರು ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಮೂವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಅಗಿದ್ದಾರೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಮಾದ್ಯಮಗಳಿಗೆ ಡಾ. ಶಂಕರ್ ನಾಯಕ್ ಮಾಹಿತಿ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...