ವಿಜಯನಗರ | ತುಂಗಭದ್ರಾ ಕಾಲುವೆ ದುರಸ್ಥಿಗೆ ರೈತ ಸಂಘ ಒತ್ತಾಯ

Date:

ವಿಜಯನಗರ ಜಿಲ್ಲೆಯ ತುಂಗಭದ್ರಾ ಕಾಲುವೆ ದುರಸ್ಥಿ ಮಾಡುವಂತೆ ರೈತರು ಆಗ್ರಹಿಸಿದ್ದಾರೆ. ಈ ಕುರಿತು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜೆ. ಕಾರ್ತಿಕ್ ಬಣದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

“ತುರ್ತು ಕಾಲುವೆ ವಿಭಾಗದ 3.5 ಕಿ.ಮೀ ಇಂದ 8.5 ಕಿ.ಮೀ ವಾಪ್ತಿಯು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ ) ಸಂರಕ್ಷಿತ ಪ್ರದೇಶದ ಅಡಿಯಲ್ಲಿ ಬರುತ್ತದೆ. ಈ ವ್ಯಾಪ್ತಿಯಲ್ಲಿ ಕಾಲುವೆಯು ಹಾನಿಗೊಳಗಾಗಿದ್ದು, ದುರಸ್ಥಿ ಕಾಣದ ಕಾರಣ 4 ಕ್ರಸ್ಟ್ ಗೇಟ್‌ಗಳು ಹಾಳಾಗಿವೆ. ಗಿಡಗಂಟಿ ಬೆಳೆದು ಕಾಲುವೆ ಮುಚ್ಚಿಹೋಗಿದೆ ಪರಿಣಾಮ ರೈತರ ಕೃಷಿ ಭೂಮಿಗೆ ಸಕಾಲಕ್ಕೆ ನೀರೊದಗಿಸಲು ಅಸಾಧ್ಯವಾಗಿದ್ದು, ನೀರು ಪೋಲಾಗಿ ಕೃಷಿ ಚಟುವಟಿಕೆಗಳಿಗೆ ತೊಡಕಾಗುತ್ತಿದೆ. ಈ ಭಾಗದಲ್ಲಿ ತುರ್ತು ಕಾಲುವೆ ಕಾಮಗಾರಿಯನ್ನು ಕೈಗೊಳ್ಳುವುದು ಅನಿವಾರ್ಯ” ಎಂದು ರೈತ ಸಂಘಟನೆ ಆಗ್ರಹಿಸಿದೆ.

- Advertisement -

ರೈತರ ಹಿತದೃಷ್ಟಿಯಿಂದ ಈ ಕಾಲುವೆಯು ಆಧುನೀಕರಣ ಅಥವಾ ದುರಸ್ಥಿ ಕಾಮಗಾರಿ ತಕ್ಷಣವೇ ಆರಂಭವಾಗಬೇಕಾಗಿದೆ. ಎಎಸ್‌ಐ ವ್ಯಾಪ್ತಿಯಲ್ಲಿ ಬರುವುದರಿಂದ ಕಾಮಗಾರಿ ಪ್ರಗತಿಗೆ ತಾಂತ್ರಿಕ ಅನುಮತಿಯ ಅಗತ್ಯ ಇರುತ್ತದೆ.

“ಜಿಲ್ಲಾಧಿಕಾರಿಗಳು ಈ ವಿಷಯದಲ್ಲಿ ವಿಶೇಷ ಆಸಕ್ತಿ ವಹಿಸಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ನಿಯಮಾವಳಿಗಳಿಗೆ ಧಕ್ಕೆ ಯಾಗದಂತೆ ಕಾಲುವೆ ಕಾಮಗಾರಿ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕಾಗಿ ರೈತರು ಮನವಿ ಮಾಡಿದ್ದು, ಇಲ್ಲವಾದಲ್ಲಿ ಕಮಲಾಪುರ ನೀರಾವರಿ ಇಲಾಖೆಗೆ ಮುತ್ತಿಗೆ ಹಾಕಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಈ ಕುರಿತು ಈದಿನ.ಕಾಮ್ ಗೆ ಪ್ರತಿಕ್ರಿಯೆ ನೀಡಿರುವ ರೈತ ಸಂಘದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಉಮಾದೇವಿ, “ಕಾಲುವೆ ದುರಸ್ಥಿ ಮಾಡುವುದರಿಂದ ಕಮಲಾಪುರ, ವೆಂಕಟಾಪುರ, ಬುಕ್ಕಸಾಗರ ಸೇರಿದಂತೆ ಹಲವು ಗ್ರಾಮಗಳ ರೈತರ ಜಮೀನುಗಳಿಗೆ ನೀರು ಸಿಗಲಿದೆ. ಹೀಗಾಗಿ, ಜಿಲ್ಲಾಡಳಿತ ತ್ವರಿತ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಈ ವೇಳೆ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಎಲ್.ಎಸ್.ರುದ್ರಪ್ಪ ಸೇರಿದಂತೆ ಹಲವು ರೈತ ಮುಖಂಡರು ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ |‘ನಾಸ್ತಿಕತೆ ಎಂದರೆ ಧರ್ಮವಿರೋಧವಲ್ಲ’; ಸಿಪಿಐಎಂ ಧರ್ಮೇಶ್ 

ಹಾಸನ ಜಿಲ್ಲೆಯ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರೊಬ್ಬರು ‘ಆಸ್ತಿಕತೆ ಮತ್ತು ನಾಸ್ತಿಕತೆ ವೈಯಕ್ತಿಕ ವಿಚಾರವೇ...

ಮತದಾರರ ಹೆಸರು ಡಿಲೀಟ್ ಮಾಡಲು ಬಿಜೆಪಿ ಶಾಸಕ ಅಭಯ್ ಪಾಟೀಲ್ ಪತ್ರ: ಬಿ.ಕೆ ಹರಿಪ್ರಸಾದ್ ಗಂಭೀರ ಆರೋಪ

“ಬಿಜೆಪಿ ಶಾಸಕ ಅಭಯ್ ಪಾಟೀಲ್ ಬೆಳಗಾವಿಯಲ್ಲಿ 2,500 ಮತದಾರರ ಹೆಸರು ಡಿಲೀಟ್...

ವಿಜಯಪುರ | ಕಬ್ಬಿಗೆ ರೂ. 5,500 ಘೋಷಣೆ ಆಗುವವರೆಗೂ ಸಕ್ಕರೆ ಕಾರ್ಖಾನೆ ಆರಂಭಿಸಬೇಡಿ: ರೈತ ಸಂಘ ಕರೆ

ಪ್ರಸಕ್ತ ಸಾಲಿನ ಕಬ್ಬಿಗೆ ಪ್ರತಿ ಟನ್‌ಗೆ ರೂ.5,500 ದರ ಘೋಷಿಸುವವರೆಗೆ ಹಾಗೂ...

ECINetನಲ್ಲಿ ಅಧಿಕಾರ ಕೇಂದ್ರೀಕರಣದ ಆರೋಪ; ಕ್ಯಾಬಿನೆಟ್‌ ಕಾರ್ಯದರ್ಶಿಗೆ ಚುನಾವಣಾ ಆಯುಕ್ತರ ದೂರು

ಚುನಾವಣಾ ಆಯೋಗದ ಮತದಾರರ ಪಟ್ಟಿ ನಿರ್ವಹಣಾ ಸಾಫ್ಟ್‌ವೇರ್‌ ವ್ಯವಸ್ಥೆಯ ಕಾರ್ಯವೈಖರಿ ಹಾಗೂ...