ವಿಜಯನಗರ | FID ರದ್ದುಗೊಳಿಸುವಂತೆ ರೈತರ ಮನವಿ

Date:

ವಿಜಯನಗರ ಜಿಲ್ಲೆಯ ಹೂವಿನ ಹಡಗಲಿಯಲ್ಲಿ ಶಾಸಕ ಕೃಷ್ಣಾ ನಾಯಕ್ ಅವರ ನೇತೃತ್ವದಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಿತು. ಈ. ವೇಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತರು ಅಲ್ಲಿನ ಶಾಸಕರಿಗೆ ಮನವಿ ಸಲ್ಲಿಸಿದರು.

- Advertisement -

ರೈತರ ಹಕ್ಕೊತ್ತಾಯಗಳು :

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

“ರಸಗೊಬ್ಬರಗಳ ರೇಟ್ ಪಾಯಿಂಟ್ ಜಿಲ್ಲೆಯಿಂದ 200-300 ಕಿಲೋಮೀಟರ್ ದೂರ ಇರುವ ಕಾರಣ ಕೊಟ್ಟೂರು ಪಟ್ಟಣದಲ್ಲಿ ಸ್ಥಾಪನೆ ಮಾಡಿ ಜಿಲ್ಲೆಯ ರೈತರಿಗೆ ಅನುಕೂಲ ಮಾಡಿಕೊಡುವುದರ ಜೊತೆಗೆ ಕೃಷಿ ವಿಶ್ವವಿದ್ಯಾಲಯ ರಾಯಚೂರು ಹೂವಿನ ಹಡಗಲಿಯಿಂದ 200ರಿಂದ 300 ಕಿಲೋಮೀಟರ್ ದೂರದಲ್ಲಿದೆ, ಆದಕಾರಣ ತಾಲ್ಲೂಕಿನ ಕೊಯಿಲಾರಗಟ್ಟಿ ಗ್ರಾಮದಲ್ಲಿ ಕೃಷಿ ಸಂಶೋಧನ ಕೇಂದ್ರ ಸ್ಥಾಪನೆ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.

“ಸರ್ಕಾರ ಯೂರಿಯಾ ಗೊಬ್ಬರಕ್ಕೆ FID (ಫಾರ್ಮರ್ ಐಡಿ) ಜಾರಿ ಮಾಡಿದೆ. ಕಂಪನಿಯವರು ಯೂರಿಯಾ ಗೊಬ್ಬರಕ್ಕೆ ಲಿಂಕ್ (ಬೈಪ್ರಾಡೆಕ್ಟ್ ಉಪ ಉತ್ಪನ್ನ)ಗಳನ್ನು ಜಾರಿ ಮಾಡಿದೆ. ಈ ಎರಡನ್ನು ರದ್ದು ಗೊಳಿಸಿ ರೈತರಿಗೆ ನೆರವಾಗಬೇಕು ಮತ್ತು ಕೃಷಿ ಇಲಾಖೆಯಲ್ಲಿ ರೈತ ವಂತಿಕೆಯಿಂದ ನೀಡುವ ಕೃಷಿ ಯಂತ್ರೋಪಕರಣಗಳ ಅನುದಾನದ ಕೊರತೆ ನೀಗಿಸಬೇಕು” ಎಂದು ಮನವಿ ಮಾಡಲಾಗಿದೆ.

“ಗದಗ ಹರಪನಹಳ್ಳಿ ಮಾರ್ಗವಾಗಿ ರೈಲ್ವೆ ಕಾರ್ಯವನ್ನು ಬೇಗ ಪೂರ್ಣ ಗೊಳಿಸಬೇಕು. ಹೂವಿನ ಹಡಗಲಿ ಪಟ್ಟಣದಲ್ಲಿ ಅಂಚೆ ಕಛೇರಿಯ ಖಾಸಗಿ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಸಕಾಲದ ಸರ್ಕಾರಿ ಸ್ವಂತ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಲು ಅನುಮತಿಸುವ ಜೊತೆಗೆ ಪೊಲೀಸ್ ತರಬೇತಿ ಕೇಂದ್ರ ಹುಲಿಗುಡ್ಡದ ಎಂಜಿನಿಯರ್ ಕಾಲೇಜ್ ಹಿಂಭಾಗದಲ್ಲಿ 100 ಎಕರೆ ಪ್ರದೇಶ ಪೊಲೀಸ್ ಇಲಾಖೆಯ ಹೆಸರಿನಲ್ಲಿ ಇದ್ದು ತರಬೇತಿ ಕೇಂದ್ರ ಸ್ಥಾಪನೆ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.

“ಜೆಸ್ಕಾಂ ಇಲಾಖೆಯು ಅಕ್ರಮ ಸಕ್ರಮ ಯೋಜನೆಯನ್ನು ದಿನಾಂಕ 29-9-23 ನೇ ಸಾಲಿನಲ್ಲಿ ರದ್ದು ಗೊಳಿಸಿದ್ದು ಈ ಯೋಜನೆಯನ್ನೂ ಮರು ಜಾರಿಗೊಳಿಸಬೇಕು. ಜೆಸ್ಕಾಂ ಇಲಾಖೆ ಪ್ರೀ ಪೆಯ್ಡ್ ಮೀಟರ್ ಗೃಹ ಬಳಕೆ ಅಳವಡಿಸುವಂತೆ ಹಾಗೂ ಹೊಸದಾಗಿ ವಿದ್ಯುತ್ ಪಡೆಯುವವರಿಗೆ ಪ್ರೀ ಪೇಯ್ಡ್ ಮೀಟರ್ ಕಡ್ಡಾಯಗೊಳಿಸಿದ್ದು ಈ ನಿಯಮವನ್ನು ರದ್ದುಗೊಳಿಸಬೇಕು” ಎಂದು ಮನವಿ ಮಾಡಲಾಗಿದೆ.

“ಕೇಂದ್ರ ಸರ್ಕಾರ ವಿವಿಧ ಬೆಳೆಗಳಿಗೆ ಬೆಂಬಲ ಬೆಲೆ ಘೋಷಣೆ ಮಾಡಿದ್ದು, ರೈತರ ಬೆಳೆ ಬಂದಾಗ ಸಕಾಲಕ್ಕೆ ಖರೀದಿ ಕೇಂದ್ರ ತೆರೆಯದೆ ಇರುವುದರಿಂದ ರೈತರಿಗೆ ಅನ್ಯಾಯವಾಗುತ್ತಿದ್ದು, ಪ್ರತಿ 12 ತಿಂಗಳಿಗೊಮ್ಮೆ ಖರೀದಿ ಕೇಂದ್ರವನ್ನು ತೆರೆಯಬೇಕು” ಎಂದು ರೈತರು ಒತ್ತಾಯಿಸಿದ್ದಾರೆ.

“ಸಿಂಗಟಾಲೂರು ಏತ ನೀರಾವರಿ ಯೋಜನೆ 13 ವರ್ಷ ಕಳೆದರು ಇನ್ನೂ ರೈತರಿಗೆ ಭೂ ಪರಿಹಾರ ಬಾಕಿ 850 ಎಕರೆ 83 ಸೆಂಟ್ಸ್ ಗೆ ಭೂ ಸ್ವಾಧೀನ ಮೊತ್ತ 5.633ಕೋಟಿ ಪರಿಹಾರ ನೀಡಿಲ್ಲ, ಪಿಎಂ ಕಿಸಾನ್ ಯೋಜನೆಯಡಿ ರೈತರಿಗೆ ಹಣ ಖಾತೆಗೆ ಜಮಾ ಆಗುತ್ತಿಲ್ಲ ಬಳ್ಳಾರಿಯಿಂದ ವಿಜಯನಗರ ವಿಭಜನೆಗೊಂಡು ಹೊಸ ಜಿಲ್ಲೆಯಾಗಿರುವುದರಿಂದ ಹಲವು ಸಮಸ್ಯೆಗಳು ಉಂಟಾಗಿವೆ, ಆದ್ದರಿಂದ ಸಕಾಲದಲ್ಲಿ ಜಿಲ್ಲಾಡಳಿತ ಪರಿಹಾರ ಕಂಡುಕೊಳ್ಳಬೇಕು” ಎಂದು ಆಗ್ರಹಿಸಲಾಗಿದೆ.

ಇಂತಹ ಹಲವು ಬೇಡಿಕೆಗಳುಳ್ಳ ಮನವಿ ಪತ್ರವನ್ನು ಶಾಸಕರು, ಡಿಸಿ‌ ಕವಿತಾ ಮನ್ನಿಕೇರಿ ಅವರಿಗೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ತಾಲ್ಲೂಕು ಅಧ್ಯಕ್ಷ ಸಿದ್ದಪ್ಪ ಹೊಸಮನಿ, ಉಪಾಧ್ಯಕ್ಷರು ವಿಠಲ್ ನಾಯ್ಕ್ , ಚನ್ನಬಸಪ್ಪ, ಪ್ರಧಾನ ಕಾರ್ಯದರ್ಶಿ ಶಿವರಾಜ ಎಂ ಹೊಳಗುಂದಿ, ಜಿಲ್ಲಾ ಉಪಾಧ್ಯಕ್ಷರು ಗನಿಸಾಬ್ ‌ಮಂಜುನಾಥ್ ಕೆ. ಭೋಜ ನಾಯ್ಕ್ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಲು ಭಾರತೀಯ ಕಿಸಾನ ಸಂಘ ಆಗ್ರಹ

ಬರಗಾಲ, ಅಂತರ್ಜಲ ಕುಸಿತ, ಸುಡುಬಿಸಿಲು ಹಾಗೂ ಕೃಷಿ ವೆಚ್ಚ ಹೆಚ್ಚಳದಿಂದ ಸಂಕಷ್ಟದಲ್ಲಿರುವ...

ಮಂಗಳೂರು | ಕಾಂತಪುರಂ ಶೇಖ್ ಅಬೂಬಕರ್ ಅಹ್ಮದ್ ಅವರಿಗೆ ಯೆನೆಪೋಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್

ಪ್ರಸಿದ್ದ ಮುಸ್ಲಿಂ ಧಾರ್ಮಿಕ ಪಂಡಿತ, ಕಲ್ಲಿಕೋಟೆಯ ಮರ್ಕಝ್ ಸಂಸ್ಥೆಗಳ ರೂವಾರಿ ಮುಸ್ಲಿಂ...

ಬಾಗಲಕೋಟೆ | ಪೋಲಿಯೋ ಮುಕ್ತ ಸಮಾಜದ ಸಂಕಲ್ಪ: ಬಾಗಲಕೋಟೆಯಿಂದ ವಿಜಯಪುರದವರೆಗೆ 190 ಕಿ.ಮೀ ಜಾಗೃತಿ ರ್ಯಾಲಿ

ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ರೋಟರಿ ಕ್ಲಬ್ ಬಾಗಲಕೋಟೆ ವತಿಯಿಂದ...

ಉಡುಪಿ | ಅಗ್ರಿಗೋಲ್ಡ್ ಹಗರಣ: ದಾಖಲೆ ಪರಿಶೀಲನಾ ಕೇಂದ್ರದಲ್ಲಿ ಸಂತ್ರಸ್ತರ ಪರದಾಟ

ಬಹುಕೋಟಿ ರೂ.ಗಳ ಅಗ್ರಿಗೋಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರ ದಾಖಲೆ ಪರಿಶೀಲನೆ ಕಾರ್ಯ...