ವಿಜಯನಗರ | ಎಸ್ಐಆರ್ ಆರಂಭ: ಬಾಯಿಗೆ ಕಪ್ಪುಪಟ್ಟಿ ಕಟ್ಟಿ ಪ್ರತಿಭಟನೆ

Date:

ರಾಜ್ಯಾದ್ಯಂತ ಏಕಕಾಲಕ್ಕೆ ಎಸ್ಐಆರ್ ಪಕ್ರಿಯೆಗೆ ಚಾಲನೆ ಸಿಕ್ಕಿದ್ದು, ವಿಜಯನಗರದಲ್ಲಿ ಬಾಯಿಗೆ ಕಪ್ಪುಪಟ್ಟಿ ಕಟ್ಟಿಕೊಂಡು ಎಸ್ಐಆರ್ ವಿರೋಧಿ ಒಕ್ಕೂಟ ಪ್ರತಿರೋಧ ವ್ಯಕ್ತಪಡಿಸಿದೆ.‌

- Advertisement -

ಜೂನ್ 20ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಹೋರಾಟದಲ್ಲಿ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಸಂಘಟನೆಗಳು ಆಗ್ರಹಿಸಿದ್ದವು. ಆದರೆ, ಆ ಎಲ್ಲಾ ಹಕ್ಕೊತ್ತಾಯ ಮತ್ತು ಮನವಿ ಪತ್ರಗಳಿಗೆ ರಾಜ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಉತ್ತರಿಸಿಲ್ಲ. ಇದು ಸಂವಿಧಾನ ವಿರೋಧಿ ನಡೆಯಾಗಿದ್ದು, ಇದನ್ನು ಖಂಡಿಸಿ ಎಸ್ಐಆರ್ ವಿರೋಧಿ ಒಕ್ಕೂಟ ತಹಶೀಲ್ದಾರ್ ಶ್ರುತಿ ಅವರಿಗೆ ಮನವಿ ಸಲ್ಲಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಪ್ರತಿ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಕಾರ್ಯಕರ್ತರು ಬಾಯಿಗೆ ಕಪ್ಪುಪಟ್ಟಿ ಕಟ್ಟಿಕೊಳ್ಳುವ ಮೂಲಕ ಚುನಾವಣಾ ಆಯೋಗದ ಸರ್ವಾಧಿಕಾರಿ ನಡೆಯನ್ನು ಖಂಡಿಸುತ್ತಾ, ಸಂವಿಧಾನ ವಿರೋಧಿ ಎಸ್ಐಆರ್ ಪ್ರಕ್ರಿಯೆ ಧಿಕ್ಕರಿಸಿ ಪ್ರತಿಭಟನೆ ನಡೆಸಿದರು.

ಎಸ್ಐಆರ್ ವಿರೋಧಿ ಒಕ್ಕೂಟದ ಜಂಬಯ್ಯ ಮಾತನಾಡಿ, “ಚುನಾವಣಾ ಆಯೋಗ ಇದೇ ಸರ್ವಾಧಿಕಾರಿ ನಡೆಯನ್ನು ಮುಂದುವರಿಸಿದ್ದೇ ಆದಲ್ಲಿ, ಲಾಜಿಕಲ್‌ ಡಿಸ್ಕ್ರಪೆನ್ಸಿ (ತಾರ್ಕಿಕ ವ್ಯತ್ಯಾಸ) ಬಳಸಿ ಲಕ್ಷಾಂತರ ಜನರ ಹೆಸರನ್ನು ಅಳಿಸಿ, ರಾಜ್ಯದ ಮತದಾರರಿಗೆ ಅಪೀಲು ಹಾಕಲು ಸೂಕ್ತ ಸಮಯಾವಕಾಶ ನೀಡದಿದ್ದಲ್ಲಿ ಕರ್ನಾಟಕದಲ್ಲಿ ಈ ಪ್ರಕ್ರಿಯೆ ವಿರುದ್ಧ ಬೃಹತ್ ಜನಾಂದೋಲನ ರೂಪುಗೊಳ್ಳುವುದು ಖಚಿತ” ಎಂದು ಎಚ್ಚರಿಕೆ ನೀಡಿದರು.

ಈ ವೇಳೆ, ಎಸ್ಐಆರ್ ವಿರೋಧಿ ಒಕ್ಕೂಟದ ಸೋಮಶೇಖರ್ ಬಣ್ಣದಮನೆ, ವಿಶಾಲ್ ಮ್ಯಾಸರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಿರೋಧದ ನಡುವೆಯೂ ವಿಜಯನಗರದಲ್ಲಿ ಎಸ್ಐಆರ್ ಪ್ರಕ್ರಿಯೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಹೊಸಪೇಟೆ ತಾಲೂಕಿನ ಕಮಲಾಪುರ ಪಟ್ಟಣದ ಸ್ವಾತಂತ್ರ ಹೋರಾಟಗಾರ ದೇಸಾಯಿ ಗುಂಡೂರಾವ್ ಅವರ ಮನೆಯಿಂದ ಎಸ್ಐಆರ್ ಪ್ರಕ್ರಿಯೆಗೆ ಡಿಸಿ ಕವಿತಾ ಎಸ್. ಮನ್ನಿಕೇರಿ ಚಾಲನೆ ನೀಡಿದರು.‌

ಕಮಲಾಪುರ ಬಳಿಯ ಹಳೆ ಮಲಪನಗುಡಿಯಲ್ಲಿ ಡೊಳ್ಳು ಕುಣಿತದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪಡೆದ ಕಾರ್ ಮಂಜಪ್ಪ ಮನೆಯಿಂದ ಎಸ್ಐಆರ್ ಆರಂಭಿಸಲಾಯಿತು.

ಈ ವೇಳೆ ತಹಶೀಲ್ದಾರ್ ಶ್ರುತಿ ಗೌಡ, ಎಸಿ ವಿವೇಕಾನಂದ ಸೇರಿದಂತೆ ಬಿಎಲ್ಒಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...