ವಿಜಯನಗರ | ಮಾಜಿ ಡಿಸಿಎಂ ಎಂ ಪಿ ಪ್ರಕಾಶ್ ಅವರ ಪುತ್ಥಳಿ ಅನಾವರಣ

Date:

ವಿಜಯನಗರ ಜಿಲ್ಲೆಯ ಹೂವಿನಹಡಗಲಿಯಲ್ಲಿ ಮಾಜಿ ಉಪಮುಖ್ಯಮಂತ್ರಿ, ದಿವಂಗತ ಎಂ ಪಿ ಪ್ರಕಾಶ್ ಅವರ 10 ಅಡಿ ಎತ್ತರದ ಕಂಚಿನ ಪುತ್ಥಳಿಯನ್ನು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಖ್ಯಾತ ಸಾಹಿತಿ ಟಿ ಎನ್ ಸೀತಾರಾಮನ್ ಅವರು ಅನಾವರಣಗೊಳಿಸಿದರು.

- Advertisement -

ಅಜಾತ ಶತ್ರು ಎಂದೇ ಖ್ಯಾತಿ ಪಡೆದಿದ್ದ ಎಂ ಪಿ ಪ್ರಕಾಶ್ ಅವರಿಗೆ ಗೌರವ ನಮನ ಮತ್ತು ಅವರ ಸಾರ್ವಜನಿಕ ಸೇವೆ ಹಾಗೂ ರಾಜಕೀಯ ಕೊಡುಗೆಯ ಸ್ಮರಣಾರ್ಥವಾಗಿ ಕಂಚಿನ ಪ್ರತಿಮೆ ನಿರ್ಮಿಸಲಾಗಿದೆ. ಹೂವಿನಹಡಗಲಿಯ ರಂಗಭಾರತಿ ಆವರಣದಲ್ಲಿ ಎಂ ಪಿ ಪ್ರಕಾಶ್ ಅವರ 86ನೇ ಜನ್ಮದಿನದ ಅಂಗವಾಗಿ ಅದ್ಧೂರಿ ಕಾರ್ಯಕ್ರಮ ನಡೆದಿದ್ದು, ಗಣ್ಯರು ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದರು. ಎಂ ಪಿ ಪ್ರಕಾಶ್ ಅಭಿಮಾನಿಗಳು, ಸ್ಥಳೀಯರು, ಕಾಂಗ್ರೆಸ್ ಕಾರ್ಯಕರ್ತರು ಪುಷ್ಪ ನಮನ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಈ ಸುದ್ದಿ ಓದಿದ್ದೀರಾ? ಪಿರಿಯಾಪಟ್ಟಣ | ವಚನ ಸಾಹಿತ್ಯ ಕನ್ನಡದ ಅಮೂಲ್ಯ ಧನ; ಫ.ಗು. ಹಳಕಟ್ಟಿ ಅವರ ಸೇವೆ ಅಪರೂಪದ ಸಾಧನೆ: ಮೋಕ್ಷಪತಿ ಸ್ವಾಮೀಜಿ

ಈ ಕಾರ್ಯಕ್ರಮದಲ್ಲಿ ಬಳ್ಳಾರಿ-ವಿಜಯನಗರ ಸಂಸದ ತುಕಾರಾಂ, ಹರಪನಹಳ್ಳಿ ಶಾಸಕಿ ಎಂ ಪಿ ಲತಾ, ಸಂಡೂರು ಶಾಸಕಿ ಅನ್ನಪೂರ್ಣ ತುಕಾರಾಂ, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಸೇರಿದಂತೆ ರಂಗಭೂಮಿ ಕಲಾವಿದರು, ಗಣ್ಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ರೈತರ ಸಾಲಮನ್ನಾ, ಕ್ಷೇಮಾಭಿವೃದ್ಧಿ ಮಂಡಳಿ ರಚನೆಗೆ ಕಿಸಾನ್ ಸಭಾ ಒತ್ತಾಯ

ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಸಮಸ್ಯೆಗಳಿಗೆ ತುರ್ತಾಗಿ ಪರಿಹಾರ ಕಲ್ಪಿಸಬೇಕು. ರೈತರ...

ಸಿಜೆಪಿ ಪ್ರತಿಭಟನೆ ವೇಳೆ ವಕೀಲರ ಬಂಧನ: ಮಧ್ಯಪ್ರವೇಶಿಸಿ ಬಿಡುಗಡೆಗೆ ಸೂಚಿಸಿದ ಸುಪ್ರೀಂ ಕೋರ್ಟ್

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ನ್ಯಾಯಮೂರ್ತಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ...

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಂದ ಹಣ ವಸೂಲಿ: ಆರೋಪಿ ಸಿಐಎಸ್‌ಎಫ್‌ ಬಲೆಗೆ

ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಂದ ಹಣ ವಸೂಲಿ ಮಾಡುತ್ತಿದ್ದ...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700 ಕೋಟಿ ನಾಮ!

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ...