ವಿಜಯನಗರ | ವಿದ್ಯಾರ್ಥಿನಿ ಸಾವು; ಡೆಂಗಿ ಶಂಕೆ

Date:

ವಿಜಯನಗರದ ವಿಜ್ಞಾನ ಇ ಟೆಕ್ನೊ ಸ್ಕೂಲ್‌ನಲ್ಲಿ 7ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಜಾಹ್ನವಿ ಎನ್‌ (12) ತೀವ್ರ ಅಸೌಖ್ಯದಿಂದ ಮಂಗಳವಾರ ದಾವಣಗೆರೆಯ ಬಾಪೂಜಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಆಕೆಗೆ ಡೆಂಗಿ ಬಾಧಿಸಿರುವ ಶಂಕೆ ವ್ಯಕ್ತವಾಗಿದೆ.

- Advertisement -

“ಬಾಲಕಿ ಡೆಂಗಿಯಿಂದಲೇ ಮೃತಪಟ್ಟಿದ್ದಾಳೆ ಎಂಬುದು ಇನ್ನೂ ದೃಢಪಟ್ಟಿಲ್ಲ. ಆಕೆಯ ಮನೆಯ ಸುತ್ತಮುತ್ತಲಿನ ಪರಿಸರವನ್ನು ಅಧ್ಯಯನ ಮಾಡಿ, ಡೆಂಗಿಗೆ ಕಾರಣವಾಗುವ ಸೊಳ್ಳೆಗಳು ಇವೆಯೇ ಎಂಬುದನ್ನು ದೃಢಪಡಿಸಲು ತಂಡವನ್ನು ಕಳುಹಿಸಲಾಗಿದೆ. ಶೀಘ್ರದಲ್ಲಿಯೇ ಸಾವಿಗೆ ನಿಖರ ಕಾರಣವನ್ನು ತಿಳಿಯುವ ವಿಶ್ವಾಸವಿದೆ” ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಂಕರ್ ನಾಯ್ಕ್‌ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ವಿದ್ಯಾರ್ಥಿನಿಯ ತಂದೆ ಲ್ಯಾಬ್‌ ಟೆಕ್ನಿಶಿಯನ್‌. ಮನೆಯಲ್ಲಿ ಮೊದಲಿಗೆ ಚಿಕಿತ್ಸೆ ಮಾಡಿಕೊಂಡಿದ್ದಾರೋ ಎಂಬ ಬಗ್ಗೆ ತಿಳಿಯಬೇಕಿದೆ. ವಿದ್ಯಾರ್ಥಿನಿಗೆ ಇದ್ದಕ್ಕಿದ್ದಂತೆಯೇ ತೀವ್ರ ಅಸೌಖ್ಯ ಕಾಡಿದೆ. ಆಕೆಯ ಕಾಯಿಲೆಯ ಲಕ್ಷಣ ತಿಳಿದುಬಂದರೆ ಮುಂದಿನ ಎಚ್ಚರಿಕೆ ಕ್ರಮ ಕೈಗೊಳ್ಳಲು ಅನುಕೂಲವಾಗುತ್ತದೆ. ಹೀಗಾಗಿ ಯಾವ ಕಾಯಿಲೆಯಿಂದ ಮೃತಪಟ್ಟಳು ಎಂಬುದನ್ನು ತಿಳಿಯುವ ಪ್ರಯತ್ನ ಮುಂದುವರೆದಿದೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ಅರಣ್ಯ ಇಲಾಖೆ ಕಾರ್ಯಾಚರಣೆ; ಬಾಲಕನನ್ನು ಕೊಂದಿದ್ದ ಹುಲಿ ಸೆರೆ

ನಗರದ ಟಿ ಟಿ ಡ್ಯಾಂ ಪ್ರದೇಶದಲ್ಲಿ ವಾಸವಿರುವ ತಿರುಮಲೇಶ್‌–ರೇಣುಕಾ ದಂಪತಿಯ ಪುತ್ರಿ ಜಾಹ್ನವಿ ಅವರು ಶಾಲೆಯ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದರು. ಇದೇ 18ರಂದು ಏಕಾಏಕಿ ಅನಾರೋಗ್ಯಕ್ಕೀಡಾದ ಆಕೆಯನ್ನು ಮೊದಲಿಗೆ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತುರ್ತಾಗಿ ಹೆಚ್ಚಿನ ಚಿಕಿತ್ಸೆಯ ಅಗತ್ಯ ಇದೆ ಎಂದು ವೈದ್ಯರು ತಿಳಿಸಿದ್ದರಿಂದ ದಾವಣಗೆರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ.

ಪ್ರತಭಾನ್ವಿತಳಾಗಿದ್ದ ಜಾಹ್ನವಿ ಅವರು ತರಗತಿಗೆ ಟಾಪರ್‌ ಆಗಿದ್ದರು. ಇದೀಗ ಅವರ ಸಾವಿಗೆ ಶಾಲೆ ಕಂಬನಿ ಮಿಡಿದಿದ್ದು, ಬುಧವಾರ ಮಧ್ಯಾಹ್ನದವರೆಗೆ ಶಾಲೆಗೆ ರಜೆ ನೀಡಲಾಗಿತ್ತು ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | VNC ಕಾಲೇಜು ಬಳಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ: ಸದುಪಯೋಗಕ್ಕೆ ತುಕಾರಾಂ ಕರೆ

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಕಳೆದ ನಾಲ್ಕೈದು ತಿಂಗಳಿಂದ ಪಾಳು ಬಿದ್ದಿದ್ದ ಇಂದಿರಾ...

ವಿಜಯನಗರ | ಲಾಕಪ್ ಡೆತ್ ಪ್ರಕರಣ: ಸಂತ್ರಸ್ತ ಕುಟುಂಬಕ್ಕೆ 50 ಲಕ್ಷ ಪರಿಹಾರ ಆಗ್ರಹಿಸಿದ SDPI

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಆಗಸ್ಟ್ 1ರಂದು ನಡೆದ ಲಾಕಪ್‌...

ಕೂಡ್ಲಿಗಿ | ಬರಪೀಡಿತ ತಾಲೂಕು ಘೋಷಣೆಗೆ ಆಗ್ರಹ; ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸಿ, ಬರಪೀಡಿತ...

ವಿಜಯನಗರ | ಗಂಡನಷ್ಟೇ ಹೆಂಡತಿಗೂ ಗೌರವ, ಘನತೆ ಇದೆ: ಬಲವಂತದ ಮನೆಗೆಲಸ ಸಲ್ಲದು: ರೈತ ಮಹಿಳೆ

ಮನೆಗೆಲಸವು ಮಹಿಳೆಯೊಬ್ಬಳ ಹೊಣೆಗಾರಿಕೆ ಮಾತ್ರವಲ್ಲ; ಕುಟುಂಬದ ಎಲ್ಲ ಜವಾಬ್ದಾರಿಗಳಂತೆಯೇ ಅದನ್ನೂ ಗಂಡ–ಹೆಂಡತಿ...