ವಿಜಯನಗರ | ವಿದ್ಯಾರ್ಥಿನಿ ಸಾವು; ಡೆಂಗಿ ಶಂಕೆ

Date:

ವಿಜಯನಗರದ ವಿಜ್ಞಾನ ಇ ಟೆಕ್ನೊ ಸ್ಕೂಲ್‌ನಲ್ಲಿ 7ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಜಾಹ್ನವಿ ಎನ್‌ (12) ತೀವ್ರ ಅಸೌಖ್ಯದಿಂದ ಮಂಗಳವಾರ ದಾವಣಗೆರೆಯ ಬಾಪೂಜಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಆಕೆಗೆ ಡೆಂಗಿ ಬಾಧಿಸಿರುವ ಶಂಕೆ ವ್ಯಕ್ತವಾಗಿದೆ.

“ಬಾಲಕಿ ಡೆಂಗಿಯಿಂದಲೇ ಮೃತಪಟ್ಟಿದ್ದಾಳೆ ಎಂಬುದು ಇನ್ನೂ ದೃಢಪಟ್ಟಿಲ್ಲ. ಆಕೆಯ ಮನೆಯ ಸುತ್ತಮುತ್ತಲಿನ ಪರಿಸರವನ್ನು ಅಧ್ಯಯನ ಮಾಡಿ, ಡೆಂಗಿಗೆ ಕಾರಣವಾಗುವ ಸೊಳ್ಳೆಗಳು ಇವೆಯೇ ಎಂಬುದನ್ನು ದೃಢಪಡಿಸಲು ತಂಡವನ್ನು ಕಳುಹಿಸಲಾಗಿದೆ. ಶೀಘ್ರದಲ್ಲಿಯೇ ಸಾವಿಗೆ ನಿಖರ ಕಾರಣವನ್ನು ತಿಳಿಯುವ ವಿಶ್ವಾಸವಿದೆ” ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಂಕರ್ ನಾಯ್ಕ್‌ ತಿಳಿಸಿದ್ದಾರೆ.

“ವಿದ್ಯಾರ್ಥಿನಿಯ ತಂದೆ ಲ್ಯಾಬ್‌ ಟೆಕ್ನಿಶಿಯನ್‌. ಮನೆಯಲ್ಲಿ ಮೊದಲಿಗೆ ಚಿಕಿತ್ಸೆ ಮಾಡಿಕೊಂಡಿದ್ದಾರೋ ಎಂಬ ಬಗ್ಗೆ ತಿಳಿಯಬೇಕಿದೆ. ವಿದ್ಯಾರ್ಥಿನಿಗೆ ಇದ್ದಕ್ಕಿದ್ದಂತೆಯೇ ತೀವ್ರ ಅಸೌಖ್ಯ ಕಾಡಿದೆ. ಆಕೆಯ ಕಾಯಿಲೆಯ ಲಕ್ಷಣ ತಿಳಿದುಬಂದರೆ ಮುಂದಿನ ಎಚ್ಚರಿಕೆ ಕ್ರಮ ಕೈಗೊಳ್ಳಲು ಅನುಕೂಲವಾಗುತ್ತದೆ. ಹೀಗಾಗಿ ಯಾವ ಕಾಯಿಲೆಯಿಂದ ಮೃತಪಟ್ಟಳು ಎಂಬುದನ್ನು ತಿಳಿಯುವ ಪ್ರಯತ್ನ ಮುಂದುವರೆದಿದೆ” ಎಂದು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಮೈಸೂರು | ಅರಣ್ಯ ಇಲಾಖೆ ಕಾರ್ಯಾಚರಣೆ; ಬಾಲಕನನ್ನು ಕೊಂದಿದ್ದ ಹುಲಿ ಸೆರೆ

ನಗರದ ಟಿ ಟಿ ಡ್ಯಾಂ ಪ್ರದೇಶದಲ್ಲಿ ವಾಸವಿರುವ ತಿರುಮಲೇಶ್‌–ರೇಣುಕಾ ದಂಪತಿಯ ಪುತ್ರಿ ಜಾಹ್ನವಿ ಅವರು ಶಾಲೆಯ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದರು. ಇದೇ 18ರಂದು ಏಕಾಏಕಿ ಅನಾರೋಗ್ಯಕ್ಕೀಡಾದ ಆಕೆಯನ್ನು ಮೊದಲಿಗೆ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತುರ್ತಾಗಿ ಹೆಚ್ಚಿನ ಚಿಕಿತ್ಸೆಯ ಅಗತ್ಯ ಇದೆ ಎಂದು ವೈದ್ಯರು ತಿಳಿಸಿದ್ದರಿಂದ ದಾವಣಗೆರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ.

ಪ್ರತಭಾನ್ವಿತಳಾಗಿದ್ದ ಜಾಹ್ನವಿ ಅವರು ತರಗತಿಗೆ ಟಾಪರ್‌ ಆಗಿದ್ದರು. ಇದೀಗ ಅವರ ಸಾವಿಗೆ ಶಾಲೆ ಕಂಬನಿ ಮಿಡಿದಿದ್ದು, ಬುಧವಾರ ಮಧ್ಯಾಹ್ನದವರೆಗೆ ಶಾಲೆಗೆ ರಜೆ ನೀಡಲಾಗಿತ್ತು ಎನ್ನಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | ಮುಫ್ತಿ ಸಲ್ಮಾನ್ ಅಝ್ಹರಿ ಬಿಡುಗಡೆಗೆ ಆಗ್ರಹ

ಗುಜರಾತ್‌ನ ಜುನಘಡ್‌ನಲ್ಲಿ ದ್ವೇಷ ಭಾಷಣ ಆರೋಪದಡಿ ಮೌಲಾನ ಮುಫ್ತಿ ಸಲ್ಮಾನ್ ಅಝ್ಹರಿ...

ವಿಜಯನಗರ | ರೈತ ವಿರೋಧಿ ಕೇಂದ್ರ ಬಜೆಟ್ ಖಂಡಿಸಿ ರೈತ ಸಂಘ ಪ್ರತಿಭಟನೆ

ರೈತ ವಿರೋಧಿ ಕೇಂದ್ರ ಬಜೆಟ್ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ...

ವಿಜಯನಗರ | ಹಂಪಿ‌ ವಿರೂಪಾಕ್ಷ ದೇವಸ್ಥಾನದಲ್ಲಿ ತುಂಡುಡುಗೆ ನಿಷೇಧ; ಭಕ್ತಿ ಭಾವ ಮೂಡಿಸಲು ಈ ಕ್ರಮ ಎಂದ ಜಿಲ್ಲಾಧಿಕಾರಿ!

ವಿಜಯನಗರ ಜಿಲ್ಲೆಯ ಹಂಪಿ‌ ವಿರೂಪಾಕ್ಷ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಿದ್ದು, ವಿರೂಪಾಕ್ಷನ...

ಬಳ್ಳಾರಿ | ಲೋಕಸಭಾ ಚುನಾವಣೆ; ಕಾಂಗ್ರೆಸ್ ಟಿಕೆಟ್‌ಗೆ ಪೈಪೋಟಿ

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ...