ವಿಜಯನಗರ | ತಂಬ್ರಳ್ಳಿ ತೆಪ್ಪ ದುರಂತ: ಅಜ್ಜಪ್ಪನ ಮೃತದೇಹ ಹೊರತೆಗೆದ ಈಶ್ವರ್ ಮಲ್ಪೆ ತಂಡ

Date:

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಳ್ಳಿ ಗ್ರಾಮದಲ್ಲಿ ಮೀನಿನ ಬಲೆ ಹಾಕಲು ಹೋಗಿ ನೀರುಪಾಲಾಗಿದ್ದವರ ಪೈಕಿ ಮತ್ತೋರ್ವನ ಮೃತದೇಹ ಪತ್ತೆಯಾಗಿದೆ. ನಿನ್ನೆ ನಡೆಸಿದ ಶೋಧಕಾರ್ಯದಲ್ಲಿ ಯಮನೂರಪ್ಪ ಎಂಬ ಯುವಕನ ಮೃತದೇಹ ಪತ್ತೆಯಾಗಿತ್ತು. ಇಂದು ಅಜ್ಜಪ್ಪ ಎಂಬ ಯುವಕನ ಮೃತದೇಹವನ್ನು ಮುಳುಗು ತಜ್ಞ ಈಶ್ವರ್‌ ಮಲ್ಪೆ ತಂಡ ಹೊರತಂದಿದೆ.

- Advertisement -

ತಂಬ್ರಳ್ಳಿ ಗ್ರಾಮದ ಯಮನೂರಪ್ಪ( 22), ರಾಜು(20), ಅಜ್ಜಪ್ಪ(26) ಎಂಬ ಯುವಕರು ತುಂಗಭದ್ರಾ ನದಿ ಹಿನ್ನೀರಿನಲ್ಲಿ ನಾಪತ್ತೆಯಾಗಿದ್ದರು. ಉಡುಪಿಯ ಈಶ್ವರ್ ಮಲ್ಪೆ ನೇತೃತ್ವದ ಸ್ಕೂಬಾ ತಂಡ ಕಾರ್ಯಾಚರಣೆ ನಡೆಸಿ ಮೃತದೇಹ ಹೊರತೆಗೆದಿದೆ. ಮೃತದೇಹ ಮೀನಿನ ಬಲೆಯಲ್ಲಿ ಸಿಕ್ಕಿಹಾಕಿಕೊಂಡ ರೀತಿಯಲ್ಲಿ ಇತ್ತು ಎನ್ನಲಾಗಿದೆ. ಇನ್ನು ಮೃತದೇಹವನ್ನು ದಡಕ್ಕೆ ತರುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...
ಯಮನೂರ್‌ ರಾಜ್‌ ಅಜ್ಜಪ್ಪ 1

ಮಂಗಳವಾರ ಈ ಮೂವರು ಯುವಕರು ತುಂಗಭದ್ರಾ ನದಿ ಹಿನ್ನೀರಿನಲ್ಲಿ ಮೀನುಗಳಿಗೆ ಬಲೆ ಹಾಕಲು ತೆಪ್ಪದಲ್ಲಿ ತೆರಳಿದ್ರು. ಆದರೆ ಸಂಜೆಯಾದರೂ ಮನೆಗೆ ವಾಪಸ್ ಬಂದಿರಲಿಲ್ಲ. ಇದರಿಂದ ಕುಟುಂಬಸ್ಥರು ತೀವ್ರ ಆತಂಕಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು, ಎಸ್ಡಿಆರ್ ಎಫ್ ತಂಡಗಳು, ಮುಳುಗುತಜ್ಞರು ಹಾಗೂ ಸ್ಥಳೀಯರ ಸಹಕಾರದೊಂದಿಗೆ ರಕ್ಷಣಾ ಕಾರ್ಯ ಕೈಗೊಂಡಿದ್ದರು. ಇದೀಗ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಮತ್ತೋರ್ವ ಯುವಕ ರಾಜು ಎಂಬಾತನಿಗಾಗಿ ಶೋಧಕಾರ್ಯ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

MPSC ಪೇಪರ್ ಲೀಕ್: ಪುಣೆ ವಿದ್ಯಾರ್ಥಿಗಳ ಹೋರಾಟಕ್ಕೆ ಸಿಜೆಪಿ ಬೆಂಬಲ; ಅಧ್ಯಕ್ಷರ ರಾಜೀನಾಮೆಗೆ ಆಗ್ರಹ

ಮಹಾರಾಷ್ಟ್ರ ಲೋಕಸೇವಾ ಆಯೋಗ (MPSC) ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ...

ಜಾಮೀನಿನ ಮೇಲೆ ಹೊರಬಂದು ಅತ್ಯಾಚಾರ ಸಂತ್ರಸ್ತೆಯ ವೀಡಿಯೋ ಲೀಕ್ ಮಾಡಿದ ದುಷ್ಕರ್ಮಿ: ಶೀಘ್ರ ಬಂಧನಕ್ಕೆ ಒತ್ತಾಯ

ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಹೊರಬಂದ ಆರೋಪಿಯೊಬ್ಬ, ಸಂತ್ರಸ್ತೆಯ ಖಾಸಗಿ...

ಮುಂಡಗೋಡ | ಲೊಯೊಲಾ ವಿಕಾಸ ಕೇಂದ್ರದಲ್ಲಿ ಮಕ್ಕಳಿಗಾಗಿ ಮೂರು ದಿನಗಳ ದಸರಾ ಶಿಬಿರ

ಮುಂಡಗೋಡ: ಲೊಯೊಲಾ ವಿಕಾಸ ಕೇಂದ್ರದ ವಸತಿ ನಿಲಯದಲ್ಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ...