ವಿಜಯನಗರ | ಮೂರು ದಿನಗಳ ‘ಹಂಪಿ ಉತ್ಸವ’ : ಇಂದು ಸಂಜೆ ಸಿಎಂ ಸಿದ್ದರಾಮಯ್ಯ ಚಾಲನೆ

Date:

ವಿಶ್ವ ಪಾರಂಪರಿಕ ತಾಣವಾದ ಹಂಪಿ ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ಹಂಪಿ ಉತ್ಸವಕ್ಕೆ ಸಂಪೂರ್ಣ ಸಜ್ಜಾಗಿದೆ.

- Advertisement -

ಮೂರು ದಿನಗಳ ಕಾಲ ನಡೆಯಲಿರುವ ಈ ವೈಭವಶಾಲಿ ಉತ್ಸವದಲ್ಲಿ ಐದು ಸಾವಿರಕ್ಕೂ ಹೆಚ್ಚು ಕಲಾವಿದರು ಭಾಗವಹಿಸಿ, ಆರು ವಿಭಿನ್ನ ವೇದಿಕೆಗಳಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಹಂಪಿಯನ್ನು ಆಗಸದಿಂದ ವೀಕ್ಷಿಸಲು ‘ಹಂಪಿ ಬೈ ಸ್ಕೈ’ ಹೆಲಿಕಾಪ್ಟರ್ ಯಾನವನ್ನು ಗುರುವಾರದಿಂದಲೇ ಆರಂಭಿಸಲಾಗಿದೆ. ಪ್ರವಾಸಿಗರಿಗೆ ಹಂಪಿಯ ವೈಭವವನ್ನು ಗಗನತಲದಿಂದ ನೋಡುವ ಅಪೂರ್ವ ಅವಕಾಶ ಸಿಕ್ಕಿದೆ. ಇದೇ ಸಂದರ್ಭದಲ್ಲಿ ‘ವಸಂತ ವೈಭವ’ ಕಲಾ ಜಾಥಾ ನಗರದ ಪ್ರಮುಖ ರಸ್ತೆಗಳಲ್ಲಿ ಸಂಭ್ರಮದ ಮೆರವಣಿಗೆಯಾಗಿ ಸಾಗಿತು.

1004920546

‘ತುಂಗಾರತಿಯನ್ನು ಹಲವು ವಿದೇಶಿ ಪ್ರವಾಸಿಗರು ನೋಡಿ ಖುಷಿಪಟ್ಟಿದ್ದಾರೆ. ಹಂಪಿಯನ್ನು ಆಗಸದಿಂದ ನೋಡುವ ಅವಕಾಶವೂ ಸಿಕ್ಕಿದೆ. ಹಂಪಿ ಉತ್ಸವ ನಮ್ಮ ನಾಡಿನ ಶ್ರೀಮಂತ ಕಲೆ ಹಾಗೂ ಸಂಸ್ಕೃತಿಯನ್ನು ಬಿಂಬಿಸುವಲ್ಲಿ ಸಫಲವಾಗುತ್ತಿದೆ. ವರ್ಷದಿಂದ ವರ್ಷಕ್ಕೆ ಹೆಚ್ಚಿನ ಜನರನ್ನು ಸೆಳೆಯುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ಉತ್ಸವದ ಅಂಗವಾಗಿ ಫಲಪುಷ್ಪ ಪ್ರದರ್ಶನ, ಆಹಾರ ಮತ್ತು ಮತ್ಸ್ಯ ಮೇಳ, ಕುಸ್ತಿ ಸೇರಿದಂತೆ ಹಲವು ಸಾಹಸ ಕ್ರೀಡೆಗಳು ನಡೆಯಲಿವೆ. ಜೊತೆಗೆ ಹಂಪಿಯ ಇತಿಹಾಸದ ಕುರಿತು ಗೋಷ್ಠಿಗಳು ಹಾಗೂ ನೂರಾರು ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರವಾಸಿಗರನ್ನು ಆಕರ್ಷಿಸಲಿವೆ.

ಹಂಪಿ ಉತ್ಸವವು ರಾಜ್ಯದ ಸಾಂಸ್ಕೃತಿಕ ವೈಭವವನ್ನು ದೇಶ-ವಿದೇಶಗಳ ಮುಂದೆ ಮತ್ತೊಮ್ಮೆ ಉಜ್ಜ್ವಲವಾಗಿ ಪರಿಚಯಿಸುವ ವೇದಿಕೆಯಾಗುತ್ತಿದೆ.

ಇಂದು (ಫೆ.13) ಸಂಜೆ 6 ಗಂಟೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಉತ್ಸವಕ್ಕೆ ವಿಧ್ಯುಕ್ತ ಚಾಲನೆ ನೀಡಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಜಯನಗರ ಜಿಲ್ಲಾ ಸಚಿವ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಸರ್ಕಾರದ ಸಚಿವರುಗಳು, ಶಾಸಕರುಗಳು ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

1004920499
‘ಹಂಪಿ ಬೈ ಸ್ಕೈ’ ಹೆಲಿಕಾಪ್ಟರ್ ಯಾನಕ್ಕೆ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಗುರುವಾರ ಚಾಲನೆ ನೀಡಿದರು.

ಸಾಂಸ್ಕೃತಿಕ ಮನೋರಂಜನೆ:

ಫೆ.14ರಂದು ಮುಖ್ಯವೇದಿಕೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್, ನಟ ರಾಜ್ ಬಿ.ಶೆಟ್ಟಿ, ಸಪ್ತಮಿಗೌಡ, ಝೈದ್ ಖಾನ್, ಗಿಲ್ಲಿ ಮತ್ತು‌ ಕಾವ್ಯ ಭಾಗವಹಿಸಲಿದ್ದು, ಅರ್ಜುನ್ ಜನ್ಯ ಮತ್ತು ತಂಡ ಹಾಗೂ ನವೀನ್ ಸಜ್ಜು ಮತ್ತು‌ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

ಫೆ.15ರಂದು ಇದೇ ವೇದಿಕೆಯಲ್ಲಿ ಸಂಜೆ 6 ಗಂಟೆಯಿಂದ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಟ ಡಾಲಿ ಧನಂಜಯ, ನಟಿ ರಚಿತಾರಾಮ್, ಧ್ರುವಸರ್ಜಾ ಪಾಲ್ಗೊಳ್ಳಲಿದ್ದು ರಘು ದೀಕ್ಷಿತ್ ಮತ್ತು ತಂಡ, ಮಂಗಲಿ ಮತ್ತು ತಂಡ, ಮಣಿಕಾಂತ್ ಕದ್ರಿ ಮತ್ತು‌ ತಂಡದಿಂದ‌ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಉಳಿದ ವೇದಿಕೆಗಳಲ್ಲಿ ಸ್ಥಳೀಯ ಕಲಾವಿದರು ಹಾಗೂ ಟಿವಿ‌ ಕಲಾವಿದರಿಂದ‌ ಕಾರ್ಯಕ್ರಮಗಳು ನಡೆಯಲಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | VNC ಕಾಲೇಜು ಬಳಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ: ಸದುಪಯೋಗಕ್ಕೆ ತುಕಾರಾಂ ಕರೆ

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಕಳೆದ ನಾಲ್ಕೈದು ತಿಂಗಳಿಂದ ಪಾಳು ಬಿದ್ದಿದ್ದ ಇಂದಿರಾ...

ವಿಜಯನಗರ | ಲಾಕಪ್ ಡೆತ್ ಪ್ರಕರಣ: ಸಂತ್ರಸ್ತ ಕುಟುಂಬಕ್ಕೆ 50 ಲಕ್ಷ ಪರಿಹಾರ ಆಗ್ರಹಿಸಿದ SDPI

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಆಗಸ್ಟ್ 1ರಂದು ನಡೆದ ಲಾಕಪ್‌...

ಕೂಡ್ಲಿಗಿ | ಬರಪೀಡಿತ ತಾಲೂಕು ಘೋಷಣೆಗೆ ಆಗ್ರಹ; ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸಿ, ಬರಪೀಡಿತ...

ವಿಜಯನಗರ | ಗಂಡನಷ್ಟೇ ಹೆಂಡತಿಗೂ ಗೌರವ, ಘನತೆ ಇದೆ: ಬಲವಂತದ ಮನೆಗೆಲಸ ಸಲ್ಲದು: ರೈತ ಮಹಿಳೆ

ಮನೆಗೆಲಸವು ಮಹಿಳೆಯೊಬ್ಬಳ ಹೊಣೆಗಾರಿಕೆ ಮಾತ್ರವಲ್ಲ; ಕುಟುಂಬದ ಎಲ್ಲ ಜವಾಬ್ದಾರಿಗಳಂತೆಯೇ ಅದನ್ನೂ ಗಂಡ–ಹೆಂಡತಿ...