ವಿಜಯನಗರ | ರಾಜಕೀಯ ವೈಷಮ್ಯಕ್ಕೆ ಇಡಿ ಬಳಕೆ: ಮಾನವ ಬಂಧುತ್ವ ವೇದಿಕೆ ಆಕ್ರೋಶ

Date:

ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಮೇಲಿನ ಇದೆ ದಾಳಿ ಖಂಡಿಸಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಪ್ರತಿಭಟನೆ ನಡೆಸಲಾಯಿತು. ಮಾನವ ಬಂಧುತ್ವ ವೇದಿಕೆ ಮತ್ತು ವಿಜಯನಗರ ಜಿಲ್ಲಾ ಸಂವಿಧಾನ ಸಂರಕ್ಷಣಾ ಸಮಿತಿ ಸದಸ್ಯರು ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

- Advertisement -

“ಬುದ್ಧ, ಬಸವ ಮತ್ತು ಡಾ.ಬಿ ಆರ್ ಅಂಬೇಡ್ಕರ್ ಅವರ ಸಿದ್ಧಾಂತಗಳ ಹಾದಿಯಲ್ಲಿ ನಡೆಯುತ್ತಾ, ಸಮಾಜದ ಪ್ರಗತಿ ಹಾಗೂ ಸಂವಿಧಾನಿಕ ಮೌಲ್ಯಗಳ ರಕ್ಷಣೆ ಮತ್ತು ತಳ ಸಮುದಾಯಗಳ ಹಕ್ಕುಗಳಿಗಾಗಿ ಸದಾ ಶ್ರಮಿಸುತ್ತಿರುವ ಕರ್ನಾಟಕ ಸರ್ಕಾರದ ಲೋಕೋಪಯೋಗಿ ಸಚಿವರಾದ ಮಾನ್ಯ ಶ್ರೀ ಸತೀಶ್ ಜಾರಕಿಹೊಳಿ ಅವರ ವಿರುದ್ಧ ಕೇಂದ್ರ ಸರ್ಕಾರದ ತನಿಖಾ ಸಂಸ್ಥೆಯಾದ ಜಾರಿ ನಿರ್ದೇಶನಾಲಯವನ್ನು (ಇ.ಡಿ) ರಾಜಕೀಯ ಅಸ್ತ್ರವಾಗಿ ಬಲಸುವುದು ಖಂಡನೀಯ” ಎಂದು ಹೋರಾಟಗಾರರು ತೀವ್ರ ಆಕ್ರೋಶ ಹೊರಹಾಕಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಪ್ರಜಾಪ್ರಭುತ್ವದ ಆಶಯಗಳಿಗೆ ಧಕ್ಕೆ ತರುವಂತೆ, ವಿರೋಧ ಪಕ್ಷಗಳ ನಾಯಕರನ್ನು ರಾಜಕೀಯವಾಗಿ ಹತ್ತಿಕ್ಕಲು ಮತ್ತು ಅವರ ಜನಪ್ರಿಯತೆಯನ್ನು ಕುಗ್ಗಿಸಲು ಕೇಂದ್ರ ತನಿಖಾ ಸಂಸ್ಥೆಗಳನ್ನು ನಿರಂತರವಾಗಿ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇದು ದೇಶದ ಸಂವಿಧಾನಿಕ ಚೌಕಟ್ಟು ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿದೆ. ಈ ತನಕ ಈ ತನಿಖಾ ಸಂಸ್ಥೆಯು ಕೇವಲ ವಿರೋಧ ಪಕ್ಷದ ನಾಯಕರನ್ನೇ ಮಾತ್ರ ಗುರಿಯಾಗಿಸಿ ದಾಳಿ ನಡೆಸುತ್ತಿರುವುದು ಸರಿಯಾದ ಕ್ರಮವಲ್ಲ, ಅದರಲ್ಲೂ ವಿಶೇಷವಾಗಿ ಹೇಳಬೇಕೆಂದರೆ ಎಸ್ಸಿ ಎಸ್ಟಿ ಮತ್ತು ಒಬಿಸಿ ಸಮುದಾಯಗಳನ್ನೇ ಗುರಿಯಾಗಿಸಿ (ಇ ಡಿ) ದಾಳಿಗಳು ನಡೆದಿರುವುದು ಮೇಲ್ನೋಟಕ್ಕೆ ಕೇಂದ್ರ ಸರ್ಕಾರದ ಹಸ್ತಕ್ಷೇಪ ಸಾಬೀತಾದಂತಾಗಿದೆ ಎಂದು ಆರೋಪಿಸಿದರು.

“ತನಿಖಾ ಸಂಸ್ಥೆಗಳ ನಿಯಂತ್ರಣವು ದೇಶದ ಅತ್ಯುನ್ನತ ಸಂವಿಧಾನಿಕ ಮುಖ್ಯಸ್ಥರಾದ ತಾವು ಮಧ್ಯಪ್ರವೇಶಿಸಿ, ಜಾರಿ ನಿರ್ದೇಶನಾಲಯ ಹಾಗೂ ಇತರ ಕೇಂದ್ರ ತನಿಖಾ ಸಂಸ್ಥೆಗಳು ರಾಜಕೀಯ ಪ್ರೇರಿತವಾಗಿ ಕಾರ್ಯಾಚರಣೆ ನಡೆಸದಂತೆ ಸೂಕ್ತ ನಿರ್ದೇಶನ ನೀಡಬೇಕು” ಎಂದು ರಾಷ್ಟ್ರಪತಿಗಳಿಗೆ ಆಗ್ರಹಿಸಿದರು.

ಸಂವಿಧಾನಿಕ ಮೌಲ್ಯಗಳ ರಕ್ಷಣೆಮಾಡಿ ರಾಜಕೀಯ ವೈಷಮ್ಯಕ್ಕಾಗಿ ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳುವ ಪ್ರವೃತ್ತಿಗೆ ತಡೆಹಾಕಿ, ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯಬೇಕು ಎಂದು ಹೋರಾಟಗಾರರು ಒತ್ತಾಯಿಸಿದರು.  ದೇಶದ ಪ್ರಜಾಪ್ರಭುತ್ವದ ಉಳಿವಿನ ಹಿತದಿಂದ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಮಾನವ ಬಂದುತ್ವ ವೇದಿಕೆಯ ಸೋಮಶೇಖರ್ ಬಣ್ಣದಮನೆ ಅವರು, ಇಡಿಯವರು, ಕಾಂಗ್ರೆಸ್ ನಾಯಕರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಬಿಜೆಪಿ ನಾಯಕರ ಮನೆ ಮೇಲೂ ದಾಳಿ ಮಾಡಲಿ ಎಂದು ಹೇಳಿದರು.

ಈ ವೇಳೆ ಮಾನವ ಬಂಧುತ್ವ ವೇದಿಕೆ, ಸಂವಿಧಾನ ಸಂರಕ್ಷಣ ಸಮಿತಿ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ‘ನಡಿಗೆ’ ಅಭಿಯಾನದಲ್ಲಿ 20 ಸಾವಿರ ಜೋಡಿ ಪಾದರಕ್ಷೆ ಸಂಗ್ರಹ

ಮನೆಯಲ್ಲಿ ಬಳಸಿದ ಅಥವಾ ಬಳಕೆಯಾಗದ ಉತ್ತಮ ಗುಣಮಟ್ಟದಲ್ಲಿರುವ ಪಾದರಕ್ಷೆಗಳನ್ನು ಹೊಸ ಪಾದರಕ್ಷೆಗಳಾಗಿ...

ಉಡುಪಿ | ಸಾಮಾಜಿಕ, ಶೈಕ್ಷಣಿಕ ಸೇವೆಗಳಿಗೆ ಸಹಕಾರಿ ಸಂಸ್ಥೆಗಳು ಆದ್ಯತೆ ನೀಡಲಿ: ದುಗ್ಗಣ್ಣ ಸಾವಂತ್

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಹಳೆಯಂಗಡಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಪ್ರಿಯದರ್ಶಿನಿ...

ರಾಯಚೂರು | ದಸರಾ ವೇಳೆ ದಲಿತ ಸಚಿವರನ್ನು ತಡೆದ ಆರೋಪ: ಮೈಸೂರು ಎಸ್‌ಪಿ ವಿರುದ್ಧ ಕ್ರಮಕ್ಕೆ ಹನುಮಂತಪ್ಪ ಮನ್ನಾಪುರಿ ಆಗ್ರಹ

ಮೈಸೂರಿನ ದಸರಾ ಮಹೋತ್ಸವದ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ತೆರಳುತ್ತಿದ್ದ...

ಚಿಕ್ಕಮಗಳೂರು | ಮರ ಎಳೆಯಲು ಕಟ್ಟಿದ್ದ ಹಗ್ಗದಿಂದ ಸವಾರ ಸಾವು 

ಚಿಕ್ಕಮಗಳೂರು ತಾಲೂಕಿನ ಹೊರವಲಯದ ತೇಗೂರು ಗ್ರಾಮದ ಬಳಿ ಟ್ರ್ಯಾಕ್ಟರ್‌ಗೆ ಕಟ್ಟಿದ್ದ ಹಗ್ಗ...