ವಿಜಯನಗರ | ನಕಲಿ ಅತಿಥಿ ಉಪನ್ಯಾಸಕರಿಗೆ ವಜಾ ಶಿಕ್ಷೆ: ಕ್ರಿಮಿನಲ್ ಮೊಕದ್ದಮೆಗೆ ಆದೇಶ

Date:

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2025-26ನೇ ಸಾಲಿನಲ್ಲಿ ನೇಮಕಾತಿ ವೇಳೆ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ಸಲ್ಲಿಕೆ ಮಾಡಿದ್ದ ಆರೋಪದ ಮೇಲೆ ರಾಜ್ಯಾದ್ಯಂತ 249 ಅತಿಥಿ ಉಪನ್ಯಾಸಕರನ್ನು ಸೇವೆಯಿಂದ ತೆಗೆದು ಹಾಕಲಾಗಿದೆ. ಈ ಪೈಕಿ ವಿಜಯನಗರದ 09, ಬಳ್ಳಾರಿಯ 2 ಉಪನ್ಯಾಸಕರಿದ್ದಾರೆ.

- Advertisement -

ವಿಜಯನಗರ ಜಿಲ್ಲೆಯಲ್ಲಿ ವಜಾಗೊಂಡಿರುವ 9 ಅತಿಥಿ ಶಿಕ್ಷಕರು ಹೊಸಪೇಟೆಯ ಶ್ರೀ ಶಂಕರ್ ಆನಂದ್ ಸಿಂಗ್ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು ಎನ್ನುವುದೇ ಗಮನಾರ್ಹ ಸಂಗತಿ. ಅತಿಥಿ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಹಾಗೂ ಇತಿಹಾಸ ವಿಭಾಗದ ಡಾ. ಗುಜಲ್ ಹುಲುಗಪ್ಪ, ಕಂಪ್ಯೂಟರ್ ಸೈನ್ಸ್ ವಿಭಾಗದ ಬಸವರಾಜ ಕೆ., ಸಮಾಜಶಾಸ್ತ್ರ ವಿಭಾಗದ ಬಸವಲಿಂಗ ಹೆಚ್, ಇಂಗ್ಲಿಷ್ ವಿಭಾಗದ ಮುಬೀನಾ ಎಂ.ಎಸ್, ಗಣಿತ ಶಾಸ್ತ್ರ ವಿಭಾಗದ ಬನ್ಸಾರಿ ಸೇರಿ 9 ಮಂದಿಯನ್ನು ವಜಾಗೊಳಿಸಲಾಗಿದ್ದು, ಮುಂದಿನ ನೇಮಕಾತಿಗಳಲ್ಲಿ ಕಪ್ಪುಪಟ್ಟಿಗೆ ಸೇರಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಬಳ್ಳಾರಿಯಲ್ಲೂ ಇಬ್ಬರನ್ನು ವಜಾ ಮಾಡಿ ಆದೇಶಿಸಲಾಗಿದೆ. ವಜಾ ಮಾಡಿರುವ ಎಲ್ಲರೂ, ಪ್ರತಿ ತಿಂಗಳು 31ರಿಂದ 40 ಸಾವಿರವರೆಗೆ ಸಂಬಳ ಪಡೆದು ಶಿಕ್ಷಣ ಇಲಾಖೆಗೆ ವಂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇವರೆಲ್ಲರ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಶಿಕ್ಷಣ ಇಲಾಖೆ ಆದೇಶಿಸಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಎಡಿಸಿ ಶಿವಪ್ಪ ಭಜಂತ್ರಿ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

ರಾಯಚೂರು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಪ್ಪ ಭಜಂತ್ರಿ, ಗ್ರೇಡ್-1 ತಹಶೀಲ್ದಾರ್ ಸುರೇಶ್ ವರ್ಮಾ,...

SIR | ಕಲ್ಯಾಣ ಕರ್ನಾಟಕದಲ್ಲಿ 16.23 ಲಕ್ಷ ಮತದಾರರು ಔಟ್!

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡಿದ್ದು,...

ಕ್ಯಾಮೆರಾ ಆಫ್ ಆಗಿದೆ ಎಂದುಕೊಂಡು ಇಸ್ರೇಲ್ ನೀತಿ ಟೀಕೆ; ಲೈವ್ ಪ್ರಸಾರ ತಿಳಿದು ದಂಗಾದ ನಟಿ!

ದೇಶದ ನೀತಿಗಳ ಬಗ್ಗೆ ಸ್ವತಃ ಇಸ್ರೇಲ್‌ನಲ್ಲೇ ವಿರೋಧಿ ಧ್ವನಿಗಳು ಕೇಳಿಬರುತ್ತಿರುವುದು ತಿಳಿದೇ...