ವಿಜಯನಗರ | ಬೆಂಗಳೂರು ಚಲೋ‌ಗೆ ಗ್ರಾ.ಪಂ ನೌಕರರ ತಯಾರಿ

Date:

ವಿಜಯನಗರ ಜಿಲ್ಲೆಯ ಕೂಡ್ಲಿಗಿಯ ಪ್ರವಾಸಿ ಮಂದಿರದಲ್ಲಿ ಗ್ರಾಮ ಪಂಚಾಯಿತಿ ನೌಕರರ ಸಂಘ ಮತ್ತು ಸಿಐಟಿಯು ಪೂರ್ವಭಾವಿ ಸಭೆ ನಡೆಸಲಾಯಿತು, ಸಭೆಯಲ್ಲಿ ಗ್ರಾಮ ಪಂಚಾಯಿತಿ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜುಲೈ 9 ರಂದು ಬೆಂಗಳೂರು ಚಲೋ ಹಮ್ಮಿಕೊಳ್ಳಲು ತೀರ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಆರ್ ಎಸ್ ಬಸವರಾಜ ಮಾತನಾಡಿ, “ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಕಡಿಮೆ ಸಂಬಳದಲ್ಲಿ ದುಡಿಯುತ್ತಿರುವ ಪಂಚಾಯತಿ ನೌಕರರನ್ನು ಸಂಘಟಿಸಿ ನಿರಂತರವಾಗಿ ಹೋರಾಟ ನಡೆಸಿದ್ದರಿಂದ ಕೆಲವು ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗಿದೆ” ಎಂದರು.

- Advertisement -

ಸಿಐಟಿಯು ಸಂಚಾಲಕರ ಗುನ್ನಳ್ಳಿ ರಾಘವೆಂದ್ರ ಮಾತನಾಡಿ, “ಬೆಲೆ ಏರಿಕೆಗೆ ಅನುಗುಣವಾಗಿ ಕಾಲ-ಕಾಲಕ್ಕೆ ಸರ್ಕಾರ ವೇತನ ಪರಿಷ್ಕರಣೆ ಮಾಡಬೇಕು. ಆದರೆ, ಕಳೆದ ಏಳೆಂಟು ವರ್ಷಗಳಿಂದ ಸರ್ಕಾರ ವೇತನ ಪರಿಷ್ಕರಣೆ ಮಾಡಿರಲಿಲ್ಲ. ಸತತ ಹೋರಾಟದ ಫಲವಾಗಿ ಪರಿಷ್ಕರಣೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ಆದರೆ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬಂತೆ ಹೊಸ ವೇತನ ಇನ್ನೂ ಕೈಸೇರಿಲ್ಲ ಆದ್ದರಿಂದ ಹೋರಾಟ ಅನಿವಾರ್ಯ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ನಕಲಿ ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ; ಕಾರಾಗೃಹ ಡಿಐಜಿ ಬಂಧನ

ಬೆಂಗಳೂರು ಸುಪ್ರೀಂ ಕೋರ್ಟ್‌ ಆದೇಶದ ಮಾದರಿಯನ್ನು ಅನುಕರಿಸಿ ನಕಲಿ ಆದೇಶವೊಂದನ್ನು ಸಿದ್ಧಪಡಿಸಿ...

ಬೀದರ್‌ | ಒತ್ತಡ ನಿವಾರಣೆಗೆ ಸಾಂಸ್ಕೃತಿಕ ಚಟುವಟಿಕೆ ಅಗತ್ಯ: ಡಿಸಿ ಶಿಲ್ಪಾ ಶರ್ಮಾ

ಯುವಜನರಲ್ಲಿರುವ ಪ್ರತಿಭೆಯನ್ನು ಹೊರತರುವುದರ ಜೊತೆಗೆ, ದೈನಂದಿನ ಜೀವನದ ಮಾನಸಿಕ ಒತ್ತಡ ನಿವಾರಿಸಿ...

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...