ರಾಹುಲ್ ಗಾಂಧಿ ಪ್ರಧಾನಿಯಾಗಬೇಕೆಂದು ವಕೀಲರ ಪಾದಯಾತ್ರೆ: ಕೂಡ್ಲಿಗಿಯಲ್ಲಿ ಸ್ವಾಗತ

Date:

ರಾಹುಲ್ ಗಾಂಧಿ ಪ್ರಧಾನಮಂತ್ರಿಯಾಗಬೇಕೆಂದು ವಕೀಲರೊಬ್ಬರು ಕಾಲ್ನಡಿಗೆ ಜಾತ್ರೆ ಕೈಗೊಂಡಿದ್ದಾರೆ. ಆಂಧ್ರಪ್ರದೇಶದ ವಕೀಲರು ಹಾಗೂ ಹೋರಾಟಗಾರರಾದ ಕಾಟೂರು ವೆಂಕಟೇಶ್ವರ್ಲು ಅವರು ಜಾತ್ರೆ ಕೈಗೊಂಡಿದ್ದು, ಅವರ ಕಾಲ್ನಡಿಗೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ದಾಟಿ ಮುಂದಕ್ಕೆ ಸಾಗಿದೆ.

- Advertisement -

‘ದೇಶಕ್ಕಾಗಿ ರಾಹುಲ್ ಗಾಂಧಿ, ರಾಹುಲ್ ಗಾಂಧಿಗಾಗಿ ಭಾರತ’ ಎನ್ನುವ ಧ್ಯೇಯವಾಕ್ಯದಡಿ ಸಂಕಲ್ಪ ತೊಟ್ಟು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಕಾಲ್ನಡಿಗೆ ಜಾತ್ರೆ ಹಮ್ಮಿಕೊಂಡಿದ್ದಾರೆ. ಆಗಸ್ಟ್ 12ರಂದು ಕೂಡ್ಲಿಗಿ ಕ್ಷೇತ್ರಕ್ಕೆ ಭಾರತ್ ಜೋಡೋ ಯಾತ್ರೆ ಬರುತ್ತಿದ್ದಂತೆ ತಾಲೂಕಿನ ಗಡಿಗ್ರಾಮವಾದ ಆಲೂರು ಗ್ರಾಮಸ್ಥರು ಪಾದಯಾತ್ರಿಕರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ವೆಂಕಟೇಶ್ವರ್ಲು ಅವರ ಪಾದಯಾತ್ರೆ ಸುಭೀಕ್ಷೆಯಿಂದ ಯಶಸ್ವಿಯಾಗಲಿ ಎಂದು ಅಭಿನಂದನೆ ಸಲ್ಲಿಸಿದರು. ನಂತರ ಕೂಡ್ಲಿಗಿ ಕಾಂಗ್ರೆಸ್ ಶಾಸಕರಾದ ಎನ್.ಟಿ. ಶ್ರೀನಿವಾಸ್ ಅವರು ತಮ್ಮ ಬೆಂಬಲಿಗರೊಂದಿಗೆ ಕೆಲವು ದೂರ ಸಂಚರಿಸಿ ಪಾದಯಾತ್ರಿಕರನ್ನು ಹುರಿದುಂಬಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಎನ್.ಟಿ. ಶ್ರೀನಿವಾಸ್, “ಲೋಕಸಭೆಯ ವಿರೋಧಪಕ್ಷದ ನಾಯಕರಾದ ರಾಹುಲ್ ಗಾಂಧಿ ದೇಶದ ಯುವಕರ ಧ್ವನಿಯಾಗಿ, ಬಡವರ ಪರವಾಗಿ ಹಾಗೂ ಸಂವಿಧಾನದ ಆಶಯಗಳಿಗಾಗಿ ಹೋರಾಡುತ್ತಿದ್ದಾರೆ. ರಾಹುಲ್ ಗಾಂಧಿಯವರ ನಾಯಕತ್ವದಲ್ಲಿ ಭಾರತ ದೇಶ ಹೊಸ ದಿಕ್ಕಿನತ್ತ ಸಾಗಬೇಕಿದೆ. ‘ದೇಶಕ್ಕಾಗಿ ರಾಹುಲ್ ಗಾಂಧಿ ಬೇಕು’ ಎಂದು ಘೋಷಣೆ ಕೂಗಿದರು. ರಾಹುಲ್ ಗಾಂಧಿಯವರಿಗಾಗಿ ಭಾರತ ಒಂದಾಗಬೇಕು” ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

“ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಸಾಗುತ್ತಿರುವ ಈ ಪಾದಯಾತ್ರೆ ದೇಶದ ಏಕತೆ, ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ನ್ಯಾಯದ ಸಂದೇಶವನ್ನು ಜನರ ನಡುವೆ ಕೊಂಡೊಯ್ಯುವ ಸಂಕಲ್ಪದ ಹೆಜ್ಜೆಯಾಗಿದೆ” ಎಂದು ಬಣ್ಣಿಸಿದರು.

ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ಜಿಲಾನ್ ಬಾಷಾ, ರಾಮಸಾಲಿ ಅಜಯಕುಮಾರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೆ.ಎಂ. ಶಶಿಧರ ಸ್ವಾಮಿ, ಯುವ ಕಾಂಗ್ರೆಸ್ ತಾಲೂಕು ಅಧ್ಯಕ್ಷರಾದ ಉಕ್ಕಡದ ಮಂಜು, ಕಲ್ಲಳ್ಳಿ ವೆಂಕಟೇಶ್ ಸೇರಿದಂತೆ ಕಾಂಗ್ರೆಸ್ ಮುಖಂಡರು, ಯುವ ಕಾರ್ಯಕರ್ತರು ಹಾಗೂ ಪಕ್ಷದ ಅಭಿಮಾನಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...