ವಿಜಯನಗರ | ಲಾಕಪ್‌ ಡೆತ್ ಕೇಸ್: ನ್ಯಾಯಾಂಗ ತನಿಖೆಗೆ ಎಸ್‌ಡಿಪಿಐ ಆಗ್ರಹ

Date:

ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದಿದೆ ಎನ್ನಲಾದ ಲಾಕಪ್‌ ಡೆತ್ ಖಂಡಿಸಿ ಪೊಲೀಸರ ವಿರುದ್ಧ ಎಸ್‌ಡಿಪಿಐ ತೀವ್ರ ಆಕ್ರೋಶ ಹೊರಹಾಕಿದೆ. ಹೊಸಪೇಟೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಎಸ್‌ಡಿಪಿಐ ಮುಖಂಡರು, ಲಾಕಪ್‌ಡೆತ್‌ ನ್ಯಾಯಾಂಗ ತನಿಖೆ ಆಗಬೇಕೆಂದು ಆಗ್ರಹಿಸಿದ್ದಾರೆ.

- Advertisement -

ಜಿಲ್ಲಾ ಕಾರ್ಯದರ್ಶಿ ಆಪ್ಸರ್ ಕೊಡ್ಲಿಪೇಟೆ ಮಾತನಾಡಿ, “ಲಾಕಪ್ ಡೆತ್ ಕೇಸ್ ತನಿಖೆಯನ್ನು ಪೊಲೀಸ್ ತಂಡದಿಂದ ಮಾಡಿಸಬಾರದು. ಪೊಲೀಸರು ತಮ್ಮ ಇಲಾಖೆಯವರೆಂದು ತಪ್ಪಿತಸ್ಥರ ಮೇಲೆ ಅನುಕಂಪ ತೋರಿಸಬಹುದು. ಹೀಗಾಗಿ, ನ್ಯಾಯಾಧೀಶರ ಸಮ್ಮುಖದಲ್ಲಿ ತನಿಖೆಯಾಗಲಿ” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

ಆಗಸ್ಟ್ 1ರ ರಾತ್ರಿ ಮೃತ ಖಲೀಲ್ ಹಾಗೂ ಪತ್ನಿ ಶೈನಾಜ್ ಮಧ್ಯೆ ಜಗಳ ಆಗಿತ್ತು. ಸ್ಥಳೀಯರ ಮಾಹಿತಿ ಮೇರೆಗೆ ಖಲೀಲ್ ರನ್ನ ಪೊಲೀಸರು ಠಾಣೆಗೆ ಕರೆದುಕೊಂಡು ಹೋಗಿದ್ದರು. ರಾತ್ರಿ ವೇಳೆ ವಿಚಾರಣೆಗೆಂದು ಕರೆದಾಗ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಬಲವಾದ ಏಟು ಬಿದ್ದ ಹಿನ್ನೆಲೆಯಲ್ಲಿ ಖಲೀಲ್ ತಲೆ, ಕಿವಿಯಲ್ಲಿ ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ. ಪೊಲೀಸರೇ ಹೊಡೆದು ಕೊಂದಿದ್ದಾರೆ ಎಂದು ಆರೋಪಿಸಿ ಪತ್ನಿ ಶೈನಾಜ್ ದೂರು ನೀಡಿದ್ದರು.

ಮೃತ ಖಲೀಲ್ ಕುಟುಂಬಸ್ಥರಿಗೆ 50 ಲಕ್ಷ ರೂಪಾಯಿ ಪರಿಹಾರ ಕೊಡಬೇಕು. ಕುಟುಂಬಸ್ಥರಲ್ಲಿ ಒಬ್ಬರಿಗೆ ಸರ್ಕಾರಿ ಹುದ್ದೆ ನೀಡಬೇಕು. ಜೊತೆಗೆ ಮೃತ ಖಲೀಲ್ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಜರುಗದಂತೆ ನೋಡಿಕೊಳ್ಳಬೇಕೆಂದು ಹೇಳಿದರು.

Advertisements

ಸುದ್ದಿಗೋಷ್ಠಿ ವೇಳೆ ಮೃತ ಖಲೀಲ್ ಸೋದರ ಮಾವ ಫಯಾಜ್ ಮೌಲಾನಾ, ಎಸ್‌ಡಿಪಿಐ ಮುಖಂಡರಾದ ಸದ್ದಾಂ ಹಂಪಿ, ಮಹಮ್ಮದ್ ನೂರ್, ಸಲೀಂ ಮಲೀಕ್ ಸೇರಿ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು |ರಾಜ್ಯದಲ್ಲಿ ಪ್ರಸ್ತುತ 9,೦೦೦ಕ್ಕೂ ಹೆಚ್ಚು ಪೋಕ್ಸೋ ಪ್ರಕರಣ

ಚಿಕ್ಕಮಗಳೂರು ನಗರದ ಕುವೆಂಪು ಕಲಾಮಂದಿರದಲ್ಲಿ ಕಾನೂನು ಅರಿವು ಕಾರ್ಯಕ್ರಮದಲ್ಲಿ ಹಿರಿಯ ನ್ಯಾ....

ಉತ್ತರ ಕನ್ನಡ | ನಾಳೆ ಜಿಲ್ಲೆಯ ವಿವಿಧ ಗ್ರಾಪಂಗಳಲ್ಲಿ ‘ಪ್ರಜಾಸೇವೆ ಆಂದೋಲನ’ ಸಭೆ

ಉತ್ತರ ಕನ್ನಡ: ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಸೆಪ್ಟೆಂಬರ್.26ರಂದು ಬೆಳಿಗ್ಗೆ 10.30ಕ್ಕೆ...

ಉಡುಪಿ | ಶಿಕ್ಷಣ, ಹೋರಾಟ, ಸಂಘಟನೆ ಸಮಾಜದ ಪ್ರಗತಿಗೆ ಮುಖ್ಯ: ಸಚಿವ ಶಿವರಾಜ ತಂಗಡಗಿ

ಮೊಗವೀರ ಸಮಾಜ ಶ್ರಮಜೀವಿಗಳ ಸಮಾಜ ವಾಗಿದ್ದು, ಸಮಾಜದ ಅಭಿವೃದ್ಧಿಯಲ್ಲಿ ಶಿಕ್ಷಣಕ್ಕೆ ಹೆಚ್ಚಿನ...