ವಿಜಯನಗರ | ಖರ್ಗೆ ಭಾಷಣ ಸ್ಥಳ ಶುದ್ಧೀಕರಣ ಖಂಡಿಸಿ ಬೃಹತ್ ಪ್ರತಿಭಟನೆ

Date:

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ ಮಾಡಿದ ಘಟನೆಯನ್ನು ಖಂಡಿಸಿ ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧ ದಾಖಲಾಗಿರುವ ಕೇಸ್ ರದ್ದುಪಡಿಸುವಂತೆ ಆಗ್ರಹಿಸಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

- Advertisement -

ವಿಜಯನಗರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್.ಎನ್. ಮೊಹಮ್ಮದ್ ಇಮಾಮ್ ನಿಯಾಜಿ ನೇತೃತ್ವದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ತಾಲೂಕು ಕಚೇರಿಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಮೊಹಮ್ಮದ್ ನಿಯಾಜಿ ಮಾತನಾಡಿ, “ಎಐಸಿಸಿ ಅಧ್ಯಕ್ಷ ಶ್ರೀ ಮಲ್ಲಿಕಾರ್ಜುನ್ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ ಮಾಡಿದ್ದು ಕೇವಲ ಅವರಿಗೆ ಮಾಡಿದ ಅಪಮಾನವಲ್ಲ; ಇಡೀ ದಲಿತ ಸಮುದಾಯಕ್ಕೆ ಹಾಗೂ ಸಂವಿಧಾನಕ್ಕೆ ಮಾಡಿದ ಅಪಮಾನ. ಈ ಘಟನೆ ಖಂಡನೀಯವಾಗಿದೆ. ಈ ಘಟನೆಗೆ ಕಾರಣರಾದವರಿಗೆ ಕಾನೂನುಬದ್ಧ ಶಿಕ್ಷೆ ಆಗಬೇಕು ಮತ್ತು ಇದನ್ನು ಪರವಾಗಿ ಧ್ವನಿ ಎತ್ತಿದ ರಾಹುಲ್ ಗಾಂಧಿ ಅವರ ವಿರುದ್ಧ ಕೇಸ್ ದಾಖಲಿಸಿದವರ ವಿರುದ್ಧ ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದರು.

ನಂತರ ಪ್ರತಿಭಟನೆಯನ್ನು ಉದ್ದೇಶಿಸಿ ಕೆ.ಪಿ.ಸಿ.ಸಿ. ಪ್ರಚಾರ ಸಮಿತಿ ಸಂಯೋಜಕರು ಹಾಗೂ ಜಿಲ್ಲಾ ಪ್ರಚಾರ ಸಮಿತಿ ಉಸ್ತುವಾರಿ ಜೆ.ಎಸ್. ಕುಮಾರ್ ಗೌಡ, ಜಿಲ್ಲಾ ಗ್ಯಾರಂಟಿ ಅಧ್ಯಕ್ಷ ಕುರಿ ಶಿವಮೂರ್ತಿ ಮತ್ತು ತಾಲೂಕು ಗ್ಯಾರಂಟಿ ಅಧ್ಯಕ್ಷ ವೆಂಕಟರಮಣ ಮಾತನಾಡಿದರು.

ನಂತರ ಮೌನ ಪ್ರತಿಭಟನಾ ಮೆರವಣಿಗೆಯೊಂದಿಗೆ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ತಾಲೂಕು ಕಚೇರಿಗೆ ತೆರಳಿ, ಮಾನ್ಯ ತಹಶೀಲ್ದಾರರ ಮೂಲಕ ಮಾನ್ಯ ರಾಷ್ಟ್ರಪತಿ, ಪ್ರಧಾನ ಮಂತ್ರಿ ಹಾಗೂ ಕೇಂದ್ರ ಗೃಹಮಂತ್ರಿಗಳಿಗೆ ಘಟನೆಯ ಕುರಿತು ತನಿಖೆ ನಡೆಸಿ ಕ್ರಮ ಜರುಗಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದರು.

ಈ ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರಾದ ರಿಯಾಜ್, ದಾದಾ ಖಲಂದರ್, ಯೋಗಲಕ್ಷ್ಮಿ, ಬಾನುಬೀ, ಶಮಾ, ವಿಜಯಕುಮಾರ್, ಮೋಸೀನ್, ಗೌಸ್, ಕೃಷ್ಣ ಪೂಜಾರಿ, ಜಾವೀದ್, ಮಹೇಶ, ಬುಡೇನ್, ಜಾಫರ್, ರೇಶ್ ಮಹಾದೇವ್, ಕೃಷ್ಣ ನಾಯಕ್, ರಶೀದ್ ಹಾಗೂ ಹಲವಾರು ಕಾರ್ಯಕರ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಕುಡಿಯುವ ನೀರಿಗಾಗಿ ಖಾಲಿ ಕೊಡ ಹಿಡಿದು ಪಾಲಿಕೆ ಎದುರುಗಡೆ ಪ್ರತಿಭಟನೆ

ನಗರದ ವಾರ್ಡ್‌ ನಂ. 2ರ ಕೆ.ಕೆ. ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ...

ಯಾದಗಿರಿ | ಪಂಚಾಯಿತಿ ಚುನಾವಣೆಗಳಲ್ಲೂ ಪರಿಶಿಷ್ಟ ಜಾತಿಗಳಿಗೆ ರಾಜಕೀಯ ಒಳಮೀಸಲಾತಿ ಕಲ್ಪಿಸಲು ಆಗ್ರಹ

ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪರಿಶಿಷ್ಟ ಜಾತಿಗಳನ್ನು ಪ್ರವರ್ಗ-ಎ, ಪ್ರವರ್ಗ-ಬಿ...

ಕಲಬುರಗಿ | ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯಕ್ಕೆ ಆಗ್ರಹ

ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸುವುದು ಹಾಗೂ ಸರ್ಕಾರಿ ಮತ್ತು ಖಾಸಗಿ ಕಚೇರಿಗಳಲ್ಲಿ...

ಕಲಬುರಗಿ | ಸನ್ನತ್ತಿ ಬ್ಯಾರೇಜ್ ಸಂತ್ರಸ್ತ ರೈತರಿಗೆ 13 ವರ್ಷವಾದರೂ ಪರಿಹಾರವಿಲ್ಲ!

ಸನ್ನತ್ತಿ ಬ್ರಿಡ್ಜ್ ಕಂ ಬ್ಯಾರೇಜ್ ಹಿನ್ನೀರಿನಿಂದ ಭೂಮಿ ಕಳೆದುಕೊಂಡ ಚಿತ್ತಾಪುರ ಹಾಗೂ...