ವಿಜಯನಗರ | ಬೆಳೆ ವಿಮೆ ಪಾವತಿಸದ ರೈತರಿಗೂ ಪರಿಹಾರ ಒದಗಿಸಿ: ಶಿವರಾಜ ಎಂ. ಹೊಳಗುಂದಿ

Date:

ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನಲ್ಲಿ ಬರಗಾಲದಿಂದ ಬೆಳೆಹಾನಿಯಾಗಿದ್ದು, ಬೆಳೆಹಾನಿಯಿಂದ ಸಂಕಷ್ಟಕ್ಕೆ ಸಿಲುಕಿರುವ ಎಲ್ಲ ರೈತರಿಗೂ ಸಮಾನ ಪರಿಹಾರ ನೀಡುವಂತೆ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವರಾಜ ಎಂ. ಹೊಳಗುಂದಿ ಆಗ್ರಹಿಸಿದ್ದಾರೆ.

ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಪರಿಹಾರ ನೀಡುವ ಸಂದರ್ಭದಲ್ಲಿ ಬೆಳೆ ವಿಮೆ ಮಾಡಿಸಿರುವ ರೈತರಿಗೆ ಮಾತ್ರ ಆದ್ಯತೆ ನೀಡದೆ, ಆರ್ಥಿಕ ಸಂಕಷ್ಟದಿಂದ ಬೆಳೆ ವಿಮೆ ಪಾವತಿಸಲು ಸಾಧ್ಯವಾಗದ ರೈತರಿಗೂ ಸರ್ಕಾರ ಸಮಾನವಾಗಿ ಪರಿಹಾರ ನೀಡಬೇಕು ಎಂದು ಅವರು ಸರ್ಕಾರಕ್ಕೆ ಬೇಡಿಕೆ ಇಟ್ಟಿದ್ದಾರೆ.

- Advertisement -

ಬಹುತೇಕ ಸಣ್ಣ ಮತ್ತು ಅತಿಸಣ್ಣ ರೈತರು ಆರ್ಥಿಕ ಸಂಕಷ್ಟದಲ್ಲಿದ್ದು, ಬೆಳೆ ವಿಮೆ ಪಾವತಿಸುವಷ್ಟು ಹಣಕಾಸಿನ ಸಾಮರ್ಥ್ಯ ಹೊಂದಿರುವುದಿಲ್ಲ. ಆದರೆ ಪ್ರಕೃತಿ ವಿಕೋಪ, ಮಳೆ ಕೊರತೆ ಅಥವಾ ಅತಿವೃಷ್ಟಿಯಿಂದ ಅವರ ಬೆಳೆಗಳು ಹಾನಿಗೊಳಗಾದಾಗ ಅವರು ಕೂಡ ತೀವ್ರ ಸಂಕಷ್ಟಕ್ಕೆ ಸಿಲುಕುತ್ತಾರೆ. ವಿಮೆ ಮಾಡಿಸಿಲ್ಲ ಎಂಬ ಒಂದೇ ಕಾರಣಕ್ಕೆ ಬೆಳೆ ಹಾನಿಗೊಳಗಾದ ರೈತರನ್ನು ಪರಿಹಾರದಿಂದ ವಂಚಿಸುವುದು ನ್ಯಾಯಸಮ್ಮತವಲ್ಲ. ಬೆಳೆ ಹಾನಿಗೊಳಗಾದ ಪ್ರತಿಯೊಬ್ಬ ರೈತನ ಜಮೀನಿನಲ್ಲೂ ಸಮರ್ಪಕವಾಗಿ ಸ್ಥಳ ಪರಿಶೀಲನೆ ಹಾಗೂ ವೈಜ್ಞಾನಿಕ ಬೆಳೆ ಹಾನಿ ಸಮೀಕ್ಷೆ ನಡೆಸಿ, ವಿಮೆ ಮಾಡಿಸಿದ್ದಾರೆಯೇ ಇಲ್ಲವೇ ಎಂಬ ಭೇದವಿಲ್ಲದೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ರೈತ ಸಂಘ ಒತ್ತಾಯಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ...

ರಾಯಚೂರು ಜಿಲ್ಲೆ, ಜಾಲಹಳ್ಳಿಯ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ ಕುಡಿಯುವ ನೀರಿನ ಅಭಾವ, ಕಾಂಪೌಂಡ್ ಇಲ್ಲದಿರುವುದು ಹಾಗೂ ಶಾಲಾ ಜಾಗದ ವಿವಾದ ಸೇರಿದಂತೆ ಹಲವು ಸಮಸ್ಯೆಗಳು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಿವೆ....

‘ಹುಟ್ಟಿಗೂ, ಸಾವಿಗೂ ನಾವೇ ಬೇಕು… ನಮ್ಮ ಜೊತೆ ನಿಲ್ಲೋಕೆ...

ಪೆಂಡಾಲಿನ ಒಂದು ಮೂಲೆಯಿಂದ ಆಶಾ ಕಾಯಕರ್ತೆಯರು " ರೂಪ ರೂಪಗಳನು ದಾಟಿ, ನಾಮ ಕೋಟಿಗಳನು ಮೀಟಿ, ಎದೆಯ ಬಿರಿಯೆ ಭಾವದೀಟಿ, ಓ ನನ್ನ ಚೇತನ... ಆಗು ಅನಿಕೇತನ" ಕವಿತೆಯ ಸಾಲುಗಳನ್ನು ಎದೆತುಂಬಿ ಹಾಡುತ್ತಿದ್ದರು....

ಸರ್ಕಾರ ಕೂಡಲೇ ಬೆಳೆ ಹಾನಿ ಸಮೀಕ್ಷೆಯನ್ನು ಪಾರದರ್ಶಕವಾಗಿ ಮತ್ತು ಸಮರ್ಪಕವಾಗಿ ನಡೆಸಬೇಕು. ವಿಮೆ ಕಟ್ಟಲಾಗದ ಸಣ್ಣ ಮತ್ತು ಅತಿಸಣ್ಣ ರೈತರಿಗಾಗಿ ವಿಶೇಷ ಪರಿಹಾರ ವ್ಯವಸ್ಥೆ ರೂಪಿಸಿ, ಸಂಕಷ್ಟದಲ್ಲಿರುವ ಎಲ್ಲ ರೈತರಿಗೆ ತ್ವರಿತವಾಗಿ ಪರಿಹಾರ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.‌

“ರೈತರ ಸಂಕಷ್ಟವನ್ನು ವಿಮೆ ಕಟ್ಟಿದ್ದಾರೆಯೇ ಇಲ್ಲವೇ ಎಂಬ ಮಾನದಂಡದಿಂದ ಅಳೆಯದೆ, ಬೆಳೆ ಹಾನಿಯ ಪ್ರಮಾಣವನ್ನು ಆಧಾರವಾಗಿಟ್ಟುಕೊಂಡು ಪರಿಹಾರ ನೀಡಬೇಕು. ಸರ್ಕಾರ ರೈತರ ನೋವಿಗೆ ಸ್ಪಂದಿಸಿ ತಕ್ಷಣ ನ್ಯಾಯಯುತ ಪರಿಹಾರ ಒದಗಿಸಬೇಕು” ಎಂದು ಶಿವರಾಜ ಎಂ. ಹೊಳಗುಂದಿ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನಿವೇಶನ ರಹಿತರು ಶೀಘ್ರ ಅರ್ಜಿ ಸಲ್ಲಿಸಿ : ನವೀನ್ ಸಾಲಿಯಾನ್ ಮನವಿ

ಉಡುಪಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಲ್ಲಿ ಸ್ವಂತ ನಿವೇಶನವಿಲ್ಲದೆ ವಾಸಿಸುತ್ತಿರುವ...

ಹಾವೇರಿ | ರೈತರ ಆಕ್ರೋಶ ಸ್ಫೋಟ: ಡಿಸಿ ಕಚೇರಿಗೆ ದಿಗ್ಬಂಧನ, ಕಬ್ಬಿನ ದರ ಘೋಷಣೆ ಆಗುವವರೆಗೂ ಗೇಟ್ ತೆರೆಯಲ್ಲ!

ಕಬ್ಬಿನ ಬೆಲೆ ನಿಗದಿ ವಿಚಾರವಾಗಿ ಹಾವೇರಿಯಲ್ಲಿ ರೈತರ ಆಕ್ರೋಶ ತೀವ್ರಗೊಂಡಿದ್ದು, ಜಿಲ್ಲಾಧಿಕಾರಿ...

ಭಾಲ್ಕಿ | ಬಸವಣ್ಣನವರ ಅವಹೇಳನ: ರವಿ ಹಂಜ್, ವಿಶ್ವೇಶ್ವರ ಭಟ್ ವಿರುದ್ಧ ಕ್ರಮಕ್ಕೆ ಆಗ್ರಹ

ಜಗತ್ತಿಗೆ ಸಮಾನತೆ, ಕಾಯಕ ಮತ್ತು ದಾಸೋಹದ ಸಂದೇಶ ಸಾರಿದ ವಿಶ್ವಗುರು ಬಸವಣ್ಣನವರ...