ವಿಜಯನಗರ | ರೂ. 4.57 ಕೋಟಿ ಮೌಲ್ಯದ ಕಳ್ಳ ಮಾಲು ಜಪ್ತಿ; ವಾರಸುದಾರರಿಗೆ ಹಸ್ತಾಂತರ

Date:

ವಿಜಯನಗರ ಜಿಲ್ಲೆಯಲ್ಲಿ ಕಳ್ಳತನವಾಗಿದ್ದ ವಸ್ತುಗಳನ್ನು ಪೊಲೀಸರು ಮಾಲೀಕರಿಗೆ ಹಸ್ತಾಂತರಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಜಿಲ್ಲೆಯ 21 ಪೊಲೀಸ್ ಠಾಣೆಗಳ ಕಳ್ಳತನ ಪ್ರಕರಣಗಳನ್ನು ಭೇದಿಸಿ ನಗದು, ಚಿನ್ನಾಭರಣ ಹಾಗೂ ವಾಹನಗಳನ್ನು ಜಪ್ತಿ ಮಾಡಿದ್ದರು. ಕಳೆದ ಒಂದು ವರ್ಷದಿಂದ ಜಪ್ತಿ ಮಾಡಿದ್ದ ಚಿನ್ನಾಭರಣ, ಬೈಕ್, ಕಾರ್, ಬ್ಯಾಟರಿ, ಪವರ್ ಸಪ್ಲೈ ಕೇಬಲ್ ಸೇರಿದಂತೆ ವಿವಿಧ ವಸ್ತುಗಳನ್ನು ಕಳ್ಳರಿಂದ ವಶಕ್ಕೆ ಪಡೆದಿದ್ದರು.

- Advertisement -

ಹೊಸಪೇಟೆಯ ಡಿಎಆರ್ ಮೈದಾನದಲ್ಲಿ ಬಳ್ಳಾರಿ ವಲಯ ಐಜಿಪಿ ಡಾ. ಹರ್ಷ ಪಿ.ಎನ್ ಹಾಗೂ ವಿಜಯನಗರ ಎಸ್‌ಪಿ ಎಸ್. ಜಾಹ್ನವಿ ಅವರ ಸಮ್ಮುಖದಲ್ಲಿ ವಾಹನಗಳು ಮತ್ತು ವಸ್ತುಗಳನ್ನು ಮಾಲೀಕರಿಗೆ ಒಪ್ಪಿಸಲಾಯಿತು. ಕಳ್ಳರ ಸುಪರ್ದಿಯಲ್ಲಿದ್ದ ಒಟ್ಟು ₹4.57 ಕೋಟಿ ಮೌಲ್ಯದ ನಗದು, ಆಭರಣ, 83 ಬೈಕ್‌ಗಳು ಹಾಗೂ 10 ನಾಲ್ಕು ಚಕ್ರದ ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಹೊಸಪೇಟೆ, ಹರಪನಹಳ್ಳಿ ಹಾಗೂ ಕೂಡ್ಲಿಗಿ ಉಪವಿಭಾಗಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಳ್ಳತನ ಪ್ರಕರಣಗಳು ದಾಖಲಾಗಿದ್ದವು. ಈ ಪ್ರಕರಣಗಳನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ ಪೊಲೀಸ್ ಸಿಬ್ಬಂದಿಗೆ ಐಜಿಪಿ ಡಾ. ಹರ್ಷ ಪಿ.ಎನ್ ಅಭಿನಂದನೆ ಸಲ್ಲಿಸಿದರು. ಪೊಲೀಸ್ ಸಿಬ್ಬಂದಿಯ ಕಾರ್ಯಕ್ಕೆ ವಾಹನ ಮತ್ತು ವಸ್ತುಗಳ ಮಾಲೀಕರು, ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಬಿಜೆಪಿ ಮತ್ತೆ ಕರೆದರೆ ಸೇರ್ಪಡೆ, ಇಲ್ಲದಿದ್ದರೆ ಕಾಂಗ್ರೆಸ್ ಅಥವಾ ಪಕ್ಷೇತರ ಆಯ್ಕೆ: ರಘುಪತಿ ಭಟ್

ಮುಂದಿನ 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಆದರೆ ಯಾವ...

ಹುಬ್ಬಳ್ಳಿ | ಮಾಂಜಾ ದಾರಕ್ಕೆ ಮಹಿಳೆ ಬಲಿ

ಗಾಳಿಪಟದ ಮಾಂಜಾ ದಾರ ಮತ್ತೊಂದು ಜೀವವನ್ನು ಬಲಿ ಪಡೆದಿರುವ ಹೃದಯವಿರ್ಧಾವಕ  ಘಟನೆ...

ವಿಜಯಪುರ | ವಿಜಯಪುರಕ್ಕೆ 371(ಜೆ) ಮೀಸಲಾತಿ ನೀಡಲು ಆಗ್ರಹ; ಎಸ್.ಕೆ. ಬೆಳ್ಳುಬ್ಬಿ

ವಿಜಯಪುರ ಜಿಲ್ಲೆಯನ್ನು 371(ಜೆ) ಮೀಸಲಾತಿಯಿಂದ ಹೊರಗಿಟ್ಟಿರುವುದು ದೊಡ್ಡ ಅನ್ಯಾಯವಾಗಿದ್ದು, ರಾಜ್ಯ ಸರ್ಕಾರ...

ಹಾವೇರಿ | ಪಶ್ಚಿಮ ಪದವೀಧರರ ಕ್ಷೇತ್ರ ಚುನಾವಣೆ: ಕಾಂಗ್ರೆಸ್ ಬೆಂಬಲಿಸಲು ಡಿವೈಎಫ್ಐ-ಎಸ್ಎಫ್ಐ ಕರೆ

"ಅಕ್ಟೋಬರ್ 23 ರಂದು ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ...