ವಿಜಯನಗರ | SIR ರದ್ಧತಿ, ಜ್ಞಾನೇಶ್ ಕುಮಾರ್ ವಜಾಕ್ಕೆ ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

Date:

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಲು ಆಗ್ರಹಿಸಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ವಿದ್ಯಾರ್ಥಿ–ಯುವಜನ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಯಿತು.

- Advertisement -

ಕೇಂದ್ರ ಚುನಾವಣಾ ಆಯೋಗವು ದೇಶಾದ್ಯಂತ ಜಾರಿಗೆ ತರಲು ಹೊರಟಿರುವ ಸಂವಿಧಾನ ವಿರೋಧಿ ಎಸ್‌ಐಆರ್ ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು ಮತ್ತು ಸಾಂವಿಧಾನಿಕ ನಿಯಮಗಳನ್ನು ಗಾಳಿಗೆ ತೂರಿ ಏಕಪಕ್ಷೀಯವಾಗಿ ವರ್ತಿಸುತ್ತಿರುವ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಎಐಡಿಎಸ್ಓ (AIDSO), ಎಐಡಿವೈಓ (AIDYO) ಹಾಗೂ ಎಸ್‌ಎಫ್‌ಐ (SFI) ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಹೊಸಪೇಟೆಯ ತಹಶೀಲ್ದಾರ್ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿ, ಮಾನ್ಯ ರಾಷ್ಟ್ರಪತಿಗಳಿಗೆ ತಹಶೀಲ್ದಾರರ ಮೂಲಕ ಮನವಿ ಪತ್ರ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಪ್ರತಿಭಟನೆಯಲ್ಲಿ ನೆರೆದಿದ್ದ ವಿದ್ಯಾರ್ಥಿಗಳು ಹಾಗೂ ಯುವಜನರನ್ನು ಉದ್ದೇಶಿಸಿ ಎಐಡಿಎಸ್ಓ ಜಿಲ್ಲಾ ಅಧ್ಯಕ್ಷರಾದ ರವಿ ಕಿರಣ್ ಜೆ.ಪಿ. ಅವರು ಮಾತನಾಡಿ, “ನಮ್ಮ ದೇಶದ ಬಹುಪಾಲು ಜನರು ಬಡವರು, ಕೂಲಿ ಕಾರ್ಮಿಕರು, ಗ್ರಾಮೀಣ ಭಾಗದವರು ಹಾಗೂ ಶೋಷಿತ ಸಮುದಾಯಗಳಿಗೆ ಸೇರಿದವರಾಗಿದ್ದಾರೆ. ಆಧಾರ್ ಕಾರ್ಡ್ ಅಥವಾ ವೋಟರ್ ಐಡಿ ಇದ್ದರೂ ಅವರನ್ನು ನಾಗರಿಕರೆಂದು ಪರಿಗಣಿಸದೆ, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಬ್ಯಾಂಕ್ ಖಾತೆ ಅಥವಾ ಜನನ ಪ್ರಮಾಣಪತ್ರದಂತಹ ದಾಖಲೆಗಳನ್ನು ಕೇಳಿ ಮತದಾರರ ಪಟ್ಟಿಯಿಂದ ಹೊರಗಿಡಲಾಗುತ್ತಿದೆ. ತಳಮಟ್ಟದ ಜನರನ್ನು ಮತದಾನದ ಪ್ರಕ್ರಿಯೆಯಿಂದಲೇ ಹೊರದೂಡುವ ವ್ಯವಸ್ಥಿತ ಹುನ್ನಾರವಿದು. ಅಲ್ಲದೆ, ಯುವ ಮತದಾರರು ಮೊದಲ ಬಾರಿಗೆ ನೋಂದಾಯಿಸಿಕೊಳ್ಳುವ ‘ಫಾರ್ಮ್ 6’ ರಲ್ಲಿ ಕಠಿಣ ನಿಯಮಗಳನ್ನು ತಂದು, ಪೋಷಕರ ದಾಖಲೆಗಳನ್ನು ಕಡ್ಡಾಯಗೊಳಿಸಿರುವುದರಿಂದ ಕೋಟ್ಯಂತರ ಯುವಜನರು ಮತದಾನದ ಹಕ್ಕಿನಿಂದ ವಂಚಿತರಾಗುತ್ತಿದ್ದಾರೆ. ಇದು ಸಂವಿಧಾನದ 326ನೇ ವಿಧಿ ನೀಡಿರುವ ಸಾರ್ವತ್ರಿಕ ವಯಸ್ಕ ಮತದಾನದ ಹಕ್ಕಿನ ಸ್ಪಷ್ಟ ಉಲ್ಲಂಘನೆಯಾಗಿದೆ. ಪ್ರಜಾಪ್ರಭುತ್ವದ ಮೂಲ ಸ್ತಂಭಗಳೇ ಧ್ವಂಸಗೊಳ್ಳುತ್ತಿರುವಾಗ ವಿದ್ಯಾರ್ಥಿ ಸಮುದಾಯ ಮೌನವಾಗಿರಲು ಸಾಧ್ಯವಿಲ್ಲ. ಕೈಬಿಡಲಾದ ಎಲ್ಲಾ 13 ಕೋಟಿ ಮತದಾರರ ಹೆಸರುಗಳನ್ನು ಮರುಸೇರ್ಪಡೆ ಮಾಡುವವರೆಗೆ ಮತ್ತು ಈ ಪ್ರಕ್ರಿಯೆ ರದ್ದಾಗುವವರೆಗೆ ಭಗತ್ ಸಿಂಗ್, ಸುಭಾಷ್ ಚಂದ್ರ ಬೋಸ್ ಅವರ ಆದರ್ಶಗಳ ಹಾದಿಯಲ್ಲಿ ನಮ್ಮ ಸಂಘಟಿತ ಹೋರಾಟ ಮುಂದುವರಿಯಲಿದೆ” ಎಂದು ಕರೆ ನೀಡಿದರು.

ನಂತರ ಎಸ್‌ಎಫ್‌ಐ ವಿದ್ಯಾರ್ಥಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಶಿವರಡ್ಡಿ ಅವರು ಮಾತನಾಡಿ, “ಚುನಾವಣಾ ಆಯೋಗ ಆರಂಭಿಸಿರುವ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವದಲ್ಲಿ ಮತದಾರರ ಪರಿಷ್ಕರಣೆಯಲ್ಲ, ಬದಲಿಗೆ ಕೋಟ್ಯಂತರ ಮತದಾರರ ಹಕ್ಕು ಕಸಿದುಕೊಳ್ಳುವ ‘ಮತದಾರರ ಹರಣ ಪ್ರಕ್ರಿಯೆ’ಯಾಗಿದೆ. ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ಪತ್ರಿಕೆಯ ವಿಶೇಷ ತನಿಖಾ ವರದಿಯಂತೆ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಅಪ್ರಜಾತಾಂತ್ರಿಕ ನಿರ್ಧಾರಗಳಿಗೆ ಚುನಾವಣಾ ಆಯೋಗದಲ್ಲೇ ಬಹುಮತದ ಒಪ್ಪಿಗೆ ಸಿಕ್ಕಿಲ್ಲ. ಆಯೋಗದ ಉಳಿದ ಇಬ್ಬರು ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು ಕಳೆದ 10 ತಿಂಗಳಲ್ಲಿ 14 ಬಾರಿ ಲಿಖಿತ ಆಕ್ಷೇಪ ವ್ಯಕ್ತಪಡಿಸಿದ್ದರೂ, ಸಾಂವಿಧಾನಿಕ ನಿಯಮಗಳನ್ನು ಉಲ್ಲಂಘಿಸಿ ಏಕಪಕ್ಷೀಯವಾಗಿ ಎಸ್‌ಐಆರ್ ಹೇರಲಾಗಿದೆ. ಇದರ ಪರಿಣಾಮವಾಗಿ ದೇಶದ 30 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ 13 ಕೋಟಿಗೂ ಅಧಿಕ ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಮಾನವೀಯವಾಗಿ ತೆಗೆದುಹಾಕಲಾಗಿದೆ. ಆಡಳಿತ ಪಕ್ಷದ ಕೈಗೊಂಬೆಯಂತೆ ವರ್ತಿಸುತ್ತಿರುವ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಹುದ್ದೆಯಲ್ಲಿ ಮುಂದುವರಿಯಲು ಯಾವುದೇ ನೈತಿಕ ಹಕ್ಕನ್ನು ಹೊಂದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ಎಐಡಿವೈಓ ಯುವಜನ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಕಾಮ್ರೇಡ್ ಪಂಪಾಪತಿ ಅವರು ಮಾತನಾಡಿ, “ಪ್ರಜಾಪ್ರಭುತ್ವದ ಅಡಿಪಾಯವೇ ಪ್ರತಿಯೊಬ್ಬ ನಾಗರಿಕನಿಗಿರುವ ಮತದಾನದ ಹಕ್ಕು. ಬಡವರು, ದಲಿತರು, ಮಹಿಳೆಯರು ಹಾಗೂ ಯುವಜನರ ಧ್ವನಿಯನ್ನು ಅಡಗಿಸಲು ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಈ ಪ್ರಜಾಪ್ರಭುತ್ವ ವಿರೋಧಿ ಹುನ್ನಾರಗಳ ವಿರುದ್ಧ ಯುವಜನತೆ ಸಂಘಟಿತವಾಗಿ ಪ್ರತಿರೋಧ ಒಡ್ಡಬೇಕು” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಜಿಪಂ, ತಾಪಂ ಸ್ಥಾನಗಳಿಗೆ ಮೀಸಲಾತಿ ನಿಗದಿ

ಈ ಪ್ರತಿಭಟನಾ ಸಭೆಯ ಅಧ್ಯಕ್ಷತೆಯನ್ನು ಎಐಡಿವೈಓ ಜಿಲ್ಲಾ ನಾಯಕರಾದ ಪ್ರಕಾಶ್ ಅವರು ವಹಿಸಿದ್ದರು. ಪ್ರತಿಭಟನೆಯಲ್ಲಿ AIDSO ಜಿಲ್ಲಾ ಕಾರ್ಯದರ್ಶಿಗಳಾದ ಯು. ಉಮಾದೇವಿ, AIDYO ಜಿಲ್ಲಾ ಸಮಿತಿ ಸದಸ್ಯರಾದ ಶ್ರೀನಿವಾಸ್, ಸಮೀರ್ ಹಾಗೂ ಮೂರೂ ಸಂಘಟನೆಗಳ ನೂರಾರು ವಿದ್ಯಾರ್ಥಿಗಳು, ಯುವಜನರು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...