ವಿಜಯನಗರ | ಕಳಪೆ ಕಾಮಗಾರಿ: ಹೆದ್ದಾರಿಯಲ್ಲಿ ಬೈಕ್ ಸುಟ್ಟು ಪ್ರತಿಭಟನೆ

Date:

ಕಳಪೆ ಕಾಮಗಾರಿಯಿಂದ ಬೇಸತ್ತ ಸಾರ್ವಜನಿಕರು ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಆಲೂರಿನಲ್ಲಿ ಹೆದ್ದಾರಿಯಲ್ಲಿಯೇ ಬೈಕ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ. ಕಾನಮಡುಗು ಕ್ರಾಸ್‌ನ ಮೇಲ್ಸೇತುವೆ ಕಾಮಗಾರಿ ಸಂಪೂರ್ಣ ಕಳಪೆಯಾಗಿದ್ದು, ಇದರಿಂದ ವಾಹನ ಸವಾರರ ಜೀವಕ್ಕೆ ಸುರಕ್ಷತೆಯೇ ಇಲ್ಲದಂತಾಗಿದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಚಿತ್ರದುರ್ಗದ ದಯಾನಂದ್‌ ಎಂಬ ವ್ಯಕ್ತಿ ಇದೇ ಸ್ಥಳದಲ್ಲಿ ಬೈಕ್ ಅಪಘಾತವಾಗಿ ಗಾಯಗೊಂಡಿದ್ದರು, ಇದರಿಂದ ಸಿಟ್ಟಿಗೆದ್ದ ಸ್ಥಳೀಯರು ಬೈಕ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

“ಆಲೂರು, ಕಾನಮಡುಗು ಕ್ರಾಸ್‌ನಲ್ಲಿ ಕಳೆದ 9 ತಿಂಗಳಿಂದ ಹೆದ್ದಾರಿಯಲ್ಲಿ ಮೇಲ್ಸೇತುವೆ ಕಾಮಗಾರಿ ನಡೆಸಲಾಗುತ್ತಿದೆ. ಪರ್ಯಾಯವಾಗಿ ಉತ್ತಮ ಸರ್ವಿಸ್ ರಸ್ತೆಯನ್ನೂ ನಿರ್ಮಾಣ ಮಾಡಿರುವುದಿಲ್ಲ.‌ ಸವಾರರ ಅಗತ್ಯಕ್ಕೆ ತಕ್ಕಂತೆ ನಾಮಫಲಕವನ್ನೂ ಅಳವಡಿಸಿಲ್ಲ. ಹೀಗಾಗಿ ಈ ಸ್ಥಳದಲ್ಲಿ 30ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿದ್ದು, ನಾಲ್ಕೈದು ಜನ ಪ್ರಾಣ ಕಳೆದುಕೊಂಡಿದ್ದಾರೆ” ಎಂದು ಆರೋಪಿಸಿದ್ದಾರೆ.

“ಮೇಲ್ಸೇತುವೆ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ. ಹೆದ್ದಾರಿ ಅಕ್ಕ ಪಕ್ಕದ ಜಮೀನುಗಳಿಗೆ ಹೋಗಲು ರಸ್ತೆಯೇ ಇಲ್ಲದಂತಾಗಿದೆ. ಸಮಸ್ಯೆಯನ್ನು ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಲಿಲ್ಲ. ಇನ್ನಾದರೂ ಅಧಿಕಾರಿಗಳು ಎಚ್ಚೆತ್ತುಕೊಂಡು ಕಾಮಗಾರಿ ಗುಣಮಟ್ಟ ಕಾಯಬೇಕು. ಇಲ್ಲವಾದಲ್ಲಿ ತೀವ್ರ ಹೋರಾಟ ಕೈಗೊಳ್ಳಲಾಗುತ್ತದೆ” ಎಂದು ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆಯ ಕಿಚ್ಚು ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಕೂಡ್ಲಿಗಿ ಕ್ಷೇತ್ರದ ಶಾಸಕ ಎನ್.ಟಿ ಶ್ರೀನಿವಾಸ್, ಫೋನ್‌ ಮೂಲಕ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಕೂಡಲೇ ಸಮಸ್ಯೆ ಬಗೆಹರಿಸುವಂತೆ ಖಡಕ್ ಸೂಚನೆಯನ್ನೂ ನೀಡಿದರು. ಶಾಸಕರ ಭರವಸೆ ಮೇರೆಗೆ ಸ್ಥಳೀಯರು ಪ್ರತಿಭಟನೆಯಿಂದ ಹಿಂದಕ್ಕೆ ಸರಿದರು.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತ–ಜಪಾನ್ ತಂತ್ರಜ್ಞಾನ ಸಹಕಾರದಿಂದ ಹೊಸ ಉದ್ಯಮ ಅವಕಾಶ: ನವತಾ ಹಿರೋಷಿ

ಜಪಾನ್‌ನ ತಂತ್ರಜ್ಞಾನ ಹಾಗೂ ಕೈಗಾರಿಕಾ ಅನುಭವಕ್ಕೆ ಭಾರತದ ಯುವಶಕ್ತಿ ಮತ್ತು ಡಿಜಿಟಲ್...

ಕೋಲಾರ | ತಡೆಹಿಡಿದಿದ್ದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಮರುಸ್ಥಾಪನೆ

ಕೋಲಾರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ರೀದ್ ಪಾಷಾ ಅವರ...

ಉಡುಪಿ | ಹಿರಿಯ ನಾಗರಿಕರನ್ನು ಗೌರವಯುತವಾಗಿ ನೋಡಿಕೊಳ್ಳಿ: ಎಂ.ಎ. ಗಫೂರ್

ಸಮಾಜದಲ್ಲಿ ಹಿರಿಯ ನಾಗರಿಕರು ತಮ್ಮದೇ ಆದ ಸ್ಥಾನಮಾನ ಹೊಂದಿದ್ದು, ಅವರನ್ನು ಗೌರವಯುತವಾಗಿ...

ಎಂಆರ್‌ಪಿಎಲ್ ದುರಂತ: ಮೃತ ಮನೀಶ್ ಕುಟುಂಬಕ್ಕೆ ₹1.20 ಕೋಟಿ ಪರಿಹಾರ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್ (ಸಿಎಚ್‌ಟಿಯು)ನಲ್ಲಿ ಬುಧವಾರ ಸಂಭವಿಸಿದ ದುರಂತದಲ್ಲಿ ಮೃತಪಟ್ಟ...