ವಿಜಯನಗರ | ತೆಪ್ಪ ಮಗುಚಿ ಮೂವರು ಯುವಕರು ನೀರುಪಾಲು; ಓರ್ವನ ಮೃತದೇಹ ಪತ್ತೆ

Date:

ಮೀನಿಗೆ ಬಲೆ ಹಾಕಲು ಹೋದ ಮೂವರು ಯುವಕರು ತೆಪ್ಪ ಮುಳುಗಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಳ್ಳಿ ಗ್ರಾಮದಲ್ಲಿ ನಡೆದಿದೆ. ನೀರು ಪಾಲಾದವರ ಪೈಕಿ ಓರ್ವನ ಮೃತದೇಹ ಪತ್ತೆಯಾಗಿದ್ದು, ಇನ್ನಿಬ್ಬರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

- Advertisement -

ತಂಬ್ರಳ್ಳಿ ಗ್ರಾಮದ ಯಮನೂರಪ್ಪ( 22) ರಾಜು(20), ಅಜ್ಜಪ್ಪ(26) ಎಂಬ ಯುವಕರು ತುಂಗಭದ್ರಾ ನದಿ ಹಿನ್ನೀರಿನಲ್ಲಿ ಮೀನುಗಳಿಗೆ ಬಲೆ ಹಾಕಲು ತೆಪ್ಪದಲ್ಲಿ ತೆರಳಿದ್ದರು, ಸಂಜೆಯಾದರೂ ಮನೆಗೆ ವಾಪಸ್ ಬಂದಿರಲಿಲ್ಲ. ಇದರಿಂದ ಕುಟುಂಬಸ್ಥರು ಆತಂಕಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದರು. ತಕ್ಷಣ ಅಲರ್ಟ್ ಆದ ಪೊಲೀಸರು, ಸ್ಥಳಕ್ಕೆ ದೌಡಾಯಿಸಿ ಶೋಧ ಕಾರ್ಯ ಕೈಗೊಂಡರು. ಸ್ಥಳೀಯರ ಸಹಕಾರದೊಂದಿಗೆ ರಕ್ಷಣಾ ಕಾರ್ಯಕ್ಕಿಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...
ಯಮನೂರ್‌ ರಾಜ್‌ ಅಜ್ಜಪ್ಪ
ಯಮನೂರ್‌ ರಾಜ್‌ ಅಜ್ಜಪ್ಪ

ರಕ್ಷಣಾ ಇನ್ನಷ್ಟು ಚುರುಕುಗೊಳಿಸಲು SDRF ತಂಡವೂ ಸ್ಥಳಕ್ಕೆ ಎಂಟ್ರಿ ಕೊಟ್ಟಿದೆ. ನಿರಂತರ ಹುಡುಕಾಟದಿಂದ ಈಗ ಓರ್ವನ ಮೃತದೇಹ ಪತ್ತೆಯಾಗಿದ್ದು, ಮೃತನನ್ನು ಯಮನಪ್ಪ ಅಂತಾ ಗುರುತಿಸಲಾಗಿದ್ದು, ಇನ್ನಿಬ್ಬರಿಗಾಗಿ ಪೊಲೀಸರು, ಎಸ್ ಡಿಆರ್ ಎಫ್ ತಂಡಗಳು ಶೋಧ ನಡೆಸಿವೆ.

Advertisements

ಇನ್ನು ಬಲೆ ಹಾಕುವಾಗ ಗಾಳಿ ಜೋರಾಗಿ ಬೀಸಿದ್ದರಿಂದ ತೆಪ್ಪ ಮುಳುಗಡೆ ಆಗಿರಬಹುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸ್ಥಳದಲ್ಲಿ ಗ್ರಾಮಸ್ಥರೆಲ್ಲಾ ಜಮಾವಣೆಗೊಂಡಿದ್ದು, ರಕ್ಷಣಾ ಕಾರ್ಯಕ್ಕೆ ಕೈಲಾದ ಸಹಾಯ ಮಾಡುತ್ತಿದ್ದಾರೆ. ಮತ್ತೊಂದೆಡೆ, ಮಕ್ಕಳು ನೀರುಪಾಲಾಗಿರುವ ಸುದ್ದಿ ಕೇಳಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಘಟನೆ ಕುರಿತು ತಂಬ್ರಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು...