ಜಿಲ್ಲಾ ಪಂಚಾಯತ್ ಯೋಜನೆಯಡಿ ಬಿಡುಗಡೆಯಾದ ರೂ.40.00 ಲಕ್ಷಗಳ ಅನುದಾನದಲ್ಲಿ 20 ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್‌ಕ್ಲಾಸ್ ಪರಿಕರ ಪೂರೈಸಲಾಗಿದೆ. ವಿಜಯಪುರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿ ವಿಜಯಪುರ ಪವರ್‌ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್, ಸಿ.ಎಸ್.ಆರ್ ಅನುದಾನದಡಿ ಆರೋಗ್ಯ, ಶಿಕ್ಷಣ ಮತ್ತು ಕ್ರೀಡಾ ಇಲಾಖೆಗಳಿಗೆ ಹಾಗೂ ಜಿಲ್ಲಾ ಪಂಚಾಯತ್ ಮತ್ತು ಪ್ರವಾಸೋದ್ಯಮ ಇಲಾಖೆಯ ಅನುದಾನದಲ್ಲಿ ಫಲಾನುಭವಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ ಸಾಮಗ್ರಿಗಳ ವಿತರಣೆ ಮಾಡಿದರು.
2025-26 ಸಾಲಿನ ಸಿ.ಎಸ್.ಆರ್. ಅನುದಾನದಡಿ ಕ್ರೀಡಾಪಟುಗಳ ಅನುಕೂಲತೆಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಗರದ ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ “ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್” ಕೂಡಗಿ ಇವರು ರೂ. 19,44,000/- ಗಳ ಅನುದಾನದಲ್ಲಿ ಸೌರ ಪಿವಿ ಬೆಳಕಿನ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಜೊತೆಗೆ, ಪವರಗ್ರಿಡ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್ ವತಿಯಿಂದ ಸಿ.ಎಸ್.ಆರ್ ಯೋಜನೆಯಡಿ ಜಿಲ್ಲೆಯ 142 ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರೂ.1.72 ಕೋಟಿಗಳಲ್ಲಿ 2500 ಡೆಸ್ಕ್‌ಗಳನ್ನು ಪೂರೈಸಲಾಗಿದೆ.
2025-26ನೇ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ವಿಜಯಪುರ ಜಿಲ್ಲಾ ಪಂಚಾಯಿತಿ ಯೋಜನೆಯಡಿ ಬೈಲ್ ಕಿಟ್, ಹೊಲಿಗೆಯಂತ್ರ, ಬೋಲ್‌ವಾಚ್, ವಾಟರ್ ಬೆಡ್ ಹಾಗೂ ವಿವಿಧ ಸಾಧನ ಸಲಕರಣೆಗಳ ವಿತರಣೆ ಮಡಲಾಗಿ ದೃಷ್ಟಿ ವಿಕಲಚೇತನರಿಗೆ 7 ಬೈಲ್ ಕಿಟ್. ಶ್ರವಣದೋಷವುಳ್ಳ ವಿಕಲಚೇತನರ ಸಬಲೀಕರಣಕ್ಕಾಗಿ 8 ಹೊಲಿಗೆಯಂತ್ರ. ದೃಷ್ಟಿ ವಿಕಲಚೇತನರಿಗೆ 8 ಬ್ರೈಲ್‌ವಾಚ್, ಬೌದ್ಧಿಕ ವಿಕಲಚೇತನರಿಗೆ 15 ವಾಟರ್ ಬೆಡ್ ಮುಂತಾಗಿ ಅಂದಾಜು ರೂ.3.70/-ಲಕ್ಷಗಳಲ್ಲಿ ವಿವಿಧ ಸಾಧನ ಸಲಕರಣೆಗಳನ್ನು ಸಾಂಕೇತಿಕವಾಗಿ ವಿತರಿಸಲಾಗಿದೆ.
ಪ್ರವಾಸೋದ್ಯಮ ಇಲಾಖೆ ವತಿಯಿಂದ ಮೊಬೈಲ್ ಕ್ಯಾಂಟೀನ್ ಸಹಾಯಧನ ಯೋಜನೆಯಡಿ ಪರಿಶಿಷ್ಟ ಜಾತಿಯ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು Entrepreneurship ವಿಷಯದ ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡಲಾಗಿದ್ದು, ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು 06 ಮೊಬೈಲ್ ಕ್ಯಾಂಟೀನ್ ವಾಹನಗಳ ವಿತರಣೆ ಮಾಡಲಾಯಿತು.
“ಪವರ್ ಗ್ರೀಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್” ಇವರು 2025-26ನೇ ಸಾಲಿನ ಸಿಎಸ್‌ಆರ್ ಅಡಿಯಲ್ಲಿ, ಕರ್ನಾಟಕದ ವಿಜಯಪುರ ಜಿಲ್ಲೆಯ ಬಬಲೇಶ್ವರ ಮತ್ತು ತಿಕೋಟಾದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅಗತ್ಯ ವೈದ್ಯಕೀಯ ಉಪಕರಣಗಳನ್ನು ಒದಗಿಸುವ ರೂ.19.04 ಲಕ್ಷ ವೆಚ್ಚದ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ.
ವಿಜಯಪುರ ಜಿಲ್ಲೆಯಲ್ಲಿ 2023-24ನೇ ಸಾಲಿನಲ್ಲಿ 15 ಮತ್ತು 2024-25ನೇ ಸಾಲಿನಲ್ಲಿ 708 ಅಂಗನವಾಡಿಗಳನ್ನು ಸಕ್ಷಮ ಅಂಗನವಾಡಿ ಕೇಂದ್ರಗಳನ್ನಾಗಿ ಉನ್ನತೀಕರಿಸಲಾಗಿದೆ. ಈ ಯೋಜನೆಯಡಿಯಲ್ಲಿ ಅಂಗನವಾಡಿಗಳಿಗೆ ಮೂಲಸೌಕರ್ಯಗಳನ್ನು ಒದಗಿಸಲಾಗುತ್ತದೆ. ಪ್ರತಿ ಅಂಗನವಾಡಿ ಕೇಂದ್ರಗಳಿಗೆ ವಾಟರ್ ಪ್ಯೂರಿಫೈರ್ ನ್ನು ನೀಡಲಾಗುತ್ತಿದ್ದು, ಸಾಂಕೇತಿಕವಾಗಿ ಆಯ್ದ ಅಂಗನವಾಡಿ ಕೇಂದ್ರಗಳಿಗೆ ವಾಟರ್ ಪ್ಯೂರಿಫೈರ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ ಕೆ., ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ. ರಿಷಿ ಆನಂದ್, ಉಪ ಕಾರ್ಯದರ್ಶಿ ಶ್ರೀ. ಪ್ರಕಾಶ ವಡ್ಡರ, ಮುಖ್ಯ ಯೋಜನಾಧಿಕಾರಿ ಶ್ರೀ ಸಿ. ಬಿ. ಕುಂಬಾರ, ಯೋಜನಾ ನಿರ್ದೇಶಕರಾದ ಶ್ರೀ. ಅಶೋಕ ಕಲಘಟಗಿ, ಮಾನ್ಯ ಮುಖ್ಯ ಲೆಕ್ಕಾಧಿಕಾರಿಗಳಾದ ರಾಮಣ್ಣ ಅಥಣಿ, ಪವರ್ ಗ್ರಿಡ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಮುಕುಂದ ಶರದ ಹೆಜಿಬ್ ಉಪಸ್ಥಿತರಿದ್ದರು.




