ವಿಜಯಪುರ | ವಕ್ಫ್ ಆಸ್ತಿಯ ಬಗ್ಗೆ ರೈತರಲ್ಲಿ ತಪ್ಪು ವದಂತಿ: ‘ಆತಂಕಪಡುವ ಅವಶ್ಯಕತೆ ಇಲ್ಲ’ ಎಂದ ಜಿಲ್ಲಾಧಿಕಾರಿ

Date:

Advertisements

“ವಿಜಯಪುರ ಜಿಲ್ಲೆಯ ವಕ್ಫ್ ಆಸ್ತಿ ಇಂಡೀಕರಣಕ್ಕೆ ಸಂಬಂಧಿಸಿದಂತೆ ತಪ್ಪು ಮಾಹಿತಿ ರವಾನೆಯಾಗುತ್ತಿದ್ದು, ಯಾವುದೇ ತಪ್ಪು ವದಂತಿಗಳಿಗೆ ರೈತರು-ಆಸ್ತಿ ಮಾಲೀಕರು ಕಿವಿಗೊಡಬಾರದು” ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ತಿಳಿಸಿದ್ದಾರೆ.

ಈ ಬಗ್ಗೆ ವಿಡಿಯೋ ಸಂದೇಶದ ಮೂಲಕ ಹೇಳಿಕೆ ನೀಡಿರುವ ವಿಜಯಪುರ ಜಿಲ್ಲಾಧಿಕಾರಿಗಳು, “ಯಾವುದೇ ವ್ಯಕ್ತಿಯ, ಖಾಸಗಿ ಆಸ್ತಿಯನ್ನು ವಕ್ಫ್ ಮಂಡಳಿಗೆ ವರ್ಗಾಯಿಸಲಾಗುತ್ತಿಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ. ಆ ಮೂಲಕ ಸಂಘಪರಿವಾರ ಹಾಗೂ ಬಿಜೆಪಿಯವರು ಜಿಲ್ಲೆಯ ವಕ್ಫ್ ಆಸ್ತಿಯ ಬಗ್ಗೆ ರೈತರಲ್ಲಿ ಹರಡುತ್ತಿರುವ ಸುದ್ದಿ ಸುಳ್ಳು ಎಂದು ತಿರುಗೇಟು ನೀಡಿದ್ದಾರೆ.

ತಮ್ಮ ಹೇಳಿಕೆಯಲ್ಲಿ ಜಿಲ್ಲಾಧಿಕಾರಿಗಳು, “1974ರಲ್ಲಿ ವಕ್ಫ್ ಮಂಡಳಿಯಿಂದ ಹೊರಡಿಸಿದ ಗೆಜೆಟ್ ನೋಟಿಫಿಕೇಶನ್ ಪ್ರಕಾರ ಇರುವ ಆಸ್ತಿಗಳನ್ನು ಕಂದಾಯ ದಾಖಲೆಗಳಲ್ಲಿ ಇಂದೀಕರಣಕ್ಕಾಗಿ ಪಟ್ಟಿ ಒದಗಿಸಲಾಗಿದ್ದು, ಇದರನ್ವಯ ಖಾತೆ ಬದಲಾವಣೆಗೆ ದಾಖಲಾತಿಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಸಾಮಾನ್ಯವಾಗಿ ಯಾವುದೇ ಒಂದು ಆಸ್ತಿಯ ಹಕ್ಕು ಬದಲಾವಣೆಯಲ್ಲಿ ಕೈಗೊಳ್ಳುವ ಕ್ರಮಗಳ ಪ್ರಕಾರವೇ ಈ ವಕ್ಪ್ ಆಸ್ತಿ ಇಂದೀಕರಣಕ್ಕಾಗಿ ಸಂಬಂಧಪಟ್ಟ ರೈತರು ಅಥವಾ ಮಾಲೀಕರಿಗೆ ನೋಟಿಸ್ ನೀಡಲಾಗುತ್ತಿದ್ದು, ಆಸ್ತಿ ಮಾಲೀಕರು- ರೈತರು ಯಾವುದೇ ಕಾರಣಕ್ಕೂ ಆತಂಕಪಡುವ ಅವಶ್ಯಕತೆ ಇಲ್ಲ” ಎಂದು ತಿಳಿಸಿದ್ದಾರೆ.

Advertisements

ಜಿಲ್ಲಾಧಿಕಾರಿಗಳ ಹೇಳಿಕೆ ವೀಕ್ಷಿಸಿ

“ಕಂದಾಯ ಇಲಾಖೆ ಅಧಿಕಾರಿಗಳು ಯಾವುದೇ ಆಸ್ತಿಯ ಹಕ್ಕನ್ನು ನಿರ್ಣಯ ಮಾಡುವ ಅಧಿಕಾರ ಹೊಂದಿರುವುದಿಲ್ಲ. ಯಾವುದೇ ಖಾಸಗಿ ವ್ಯಕ್ತಿ-ಸಂಸ್ಥೆ, ಸರ್ಕಾರಿ ಸಂಸ್ಥೆಯಾಗಲಿ ಆಸ್ತಿಗೆ ಸಂಬಂಧಿಸಿದ ದಾಖಲಾತಿಗಳನ್ನು ಕಂದಾಯ ಇಲಾಖೆ ಅಧಿಕಾರಿಗಳಿಗೆ ಸಲ್ಲಿಸಿದ ನಂತರ ಕೂಲಂಕೂಷವಾಗಿ ಪರಿಶೀಲನೆ ನಡೆಸಿದ ನಂತರವೇ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ಕೆಲವೊಂದು ಆಸ್ತಿ ಮಾಲೀಕರಿಗೆ ನೋಟಿಸ್ ನೀಡದೆಯೇ ಆರ್.ಟಿ.ಸಿ.ಯಲ್ಲಿ ಏನಾದರೂ ಬದಲಾವಣೆಯಾಗಿದ್ದಲ್ಲಿ ಸಂಬಂಧಿಸಿದ ರೈತರು-ಆಸ್ತಿ ಮಾಲೀಕರು ಉಪವಿಭಾಗಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಿಗೆ ಅಪೀಲು ಹೋಗಲು ಅವಕಾಶ ಇರುತ್ತದೆ” ಎಂದು ಜಿಲ್ಲಾಧಿಕಾರಿ ಭೂಬಾಲನ್ ಮಾಹಿತಿ ನೀಡಿದ್ದಾರೆ.

ಹಾಗಾಗಿ, “ರೈತರು ನೋಟಿಸ್ ಬಂದ ತಕ್ಷಣ ತಮ್ಮ ಆಸ್ತಿಯ ಖಾತೆ ಬದಲಾವಣೆಯಾಗಿದೆ ಎಂಬ ಆತಂಕ-ಭಯ ಪಡುವ ಅವಶ್ಯಕತೆ ಇಲ್ಲ. ನೋಟಿಸ್ ಬಂದಲ್ಲಿ, ತಮ್ಮ ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ಸಂಬಂಧಪಟ್ಟ ತಹಶೀಲ್ದಾರ್ ಕಚೇರಿಯಲ್ಲಿ ಒದಗಿಸಿ ಮಾಹಿತಿ ನೀಡಬೇಕು. ದಾಖಲೆಗಳನ್ನು ಪರಿಶೀಲನೆ ನಡೆಸಿ ಮುಂದಿನ ಕ್ರಮ ವಹಿಸಲಾಗುತ್ತದೆ” ಎಂದು ತಿಳಿಸಿದ್ದಾರೆ.

ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದಲ್ಲಿ 1500 ಎಕರೆ ರೈತರ ಜಮೀನುಗಳನ್ನು ಈಗಾಗಲೇ ಅಧಿಕಾರಿಗಳು ವಕ್ಪ್ ಮಂಡಳಿಗೆ ವರ್ಗಾಯಿಸಲಾಗಿದೆ ಎಂಬ ಸುಳ್ಳು ವದಂತಿಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ ಅವರು, “ಹೊನವಾಡ ಗ್ರಾಮದಲ್ಲಿನ ರೈತರಿಗೆ- ಆಸ್ತಿ ಮಾಲೀಕರಿಗೆ ಈವರೆಗೆ ಯಾವುದೇ ನೋಟಿಸ್ ಜಾರಿ ಮಾಡಿರುವುದಿಲ್ಲ. ಕಳೆದ ಒಂದು ತಿಂಗಳಿನಿಂದ ಯಾವುದೇ ಆಸ್ತಿಯನ್ನು ಇಂಡೀಕರಣ ಮಾಡಿ, ವಕ್ಫ್‌ಗೆ ನೀಡಿರುವುದಿಲ್ಲ” ಎಂದು ಅವರು ತಿಳಿಸಿದ್ದಾರೆ.

“ಹೊನವಾಡದಲ್ಲಿ 1500 ಎಕರೆ ವಕ್ಫ್ ಆಸ್ತಿ ಇರುವುದಿಲ್ಲ. ಗೆಜೆಟ್ ನೋಟಿಫಿಕೇಶನ್ ಪ್ರಕಾರ 10-15 ಎಕರೆ ಮಾತ್ರ ವಕ್ಫ್ ಆಸ್ತಿ ಇರುವುದು ಕಂಡು ಬಂದಿದೆ. ಅದು ಕೂಡ ಈ ಎಲ್ಲ ಆಸ್ತಿ ಮಸೀದಿ, ಈದ್ಗಾ ಮೈದಾನ, ಖಬರಸ್ಥಾನ ಇರುವುದರಿಂದ ಹೊನವಾಡ ಗ್ರಾಮದ ರೈತರು ಈ ಕುರಿತು ಯಾವುದೇ ಆತಂಕ ಪಡುವ ಅವಶ್ಯಕತೆ ಇಲ್ಲ. ಏನಾದರೂ ನೋಟಿಸ್ ಬಂದರೂ ಕೂಡ, ತಮ್ಮ ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಿದ್ದಲ್ಲಿ ಈ ಕುರಿತು ಕೂಲಂಕೂಷವಾಗಿ ಪರಿಶೀಲನೆ ನಡೆಸಿದ ನಂತರವೇ ಮುಂದಿನ ಕ್ರಮ ವಹಿಸಲಾಗುತ್ತದೆ” ಎಂದು ವಿಜಯಪುರ ಜಿಲ್ಲಾಧಿಕಾರಿ ಟಿ. ಭೂಬಾಲನ್ ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X