ವಿಜಯಪುರ | ಐದು ವರ್ಷದ ಮಗಳ ಮೇಲೆ ತಂದೆಯಿಂದಲೇ ಲೈಂಗಿಕ ದೌರ್ಜನ್ಯ!

Date:

ವಿಜಯಪುರ ನಗರದ 5 ವರ್ಷದ ಮಗುವಿನ ಮೇಲೆ  ಸ್ವಂತ ತಂದೆಯೇ ಲೈಂಗಿಕ ದೌರ್ಜನ್ಯವೆಸಗಿದ ಅಮಾನವೀಯ ಘಟನೆ ನಡೆದಿದ್ದು, ಈ ಕುರಿತಂತೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದಾಳೆ. ಆರೋಪಿ ಮತ್ತು ಆತನ ಪತ್ನಿ ಜಿಲ್ಲೆಯ ಹಳ್ಳಿಯೊಂದರಿಂದ ನಗರಕ್ಕೆ ಬಂದು ಮನೆ ಕೆಲಸ ಮಾಡಿಕೊಂಡಿದ್ದಾರೆ. ಇತನಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ದಂಪತಿ ನಡುವೆ ಆಗಾಗ ವೈಮನಸ್ಸು ಉಂಟಾಗಿ ಆರೋಪಿಯು ತನ್ನ ಹಳ್ಳಿಗೆ ಹೋಗಿ ಬರುತ್ತಿದ್ದನು ಎಂದು ದೂರಿನಲ್ಲಿ ಹೆಂಡತಿ ತಿಳಿದ್ದಾರೆ.

ನಗರದಲ್ಲಿ ಆ.30 ರಂದು ರಾತ್ರಿ 8 ಗಂಟೆಗೆ ಗಣಪತಿ ದರ್ಶನ ಮಾಡಿಸಿಕೊಂಡು ಬರುವುದಾಗಿ ಇಬ್ಬರು ಹೆಣ್ಣು ಮಕ್ಕಳನ್ನು ಮನೆಯಿಂದ ಕರೆದುಕೊಂಡು ಹೋಗಿದ್ದ ಪತಿಯು, ಚಿಕ್ಕ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿ ಪತಿಯ ವಿರುದ್ಧ ಪತ್ನಿಯೇ ದೂರು ನೀಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಿಕೊಳ್ಳಲಾಗುವುದು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಮಾಹಿತಿ ನೀಡಿದ್ದಾರೆ.

“ಈಗಾಗಲೇ ಮಹಿಳಾ ಪೊಲೀಸ್ ಠಾಣೆಯ ಸಿಪಿಐ ಅವರಿಗೆ ದೂರವಾಣಿ ಮೂಲಕ ಮಾತನಾಡಿದ್ದೇನೆ, ಮಗುವಿಗೆ ವೈದ್ಯಕೀಯ ಪರೀಕ್ಷೆ ಸೇರಿದಂತೆ ಎಲ್ಲಾ ಪ್ರತಿಕ್ರಿಯೆಗಳು ವಿಳಂಬ ಮಾಡದೇ, ತ್ವರಿತವಾಗಿ ಮಾಡುವಂತೆ ಸೂಚಿಸಲಾಗಿದೆ. ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯವಾಗಿದೆ” ಎಂದು ಶಶಿಧರ ಕೋಸಂಬೆ ತಿಳಿಸಿದ್ದಾರೆ.

ರಾಜ್ಯದಲ್ಲಿ ಕಳೆದ ನಾಲ್ಕು ದಿನಗಳಲ್ಲಿ ಯಾದಗಿರಿ ಜಿಲ್ಲೆಯ ವಸತಿ ಶಾಲೆಯೊಂದರಲ್ಲಿ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ಹೆರಿಗೆ, ಶಿವಮೊಗ್ಗ ನಗರದ ಸರ್ಕಾರಿ ಪ್ರೌಢ ಶಾಲೆಯೊಂದರಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಗೆ ಮನೆಯಲ್ಲಿ ಹೆರಿಗೆ ಹಾಗೂ ಬಾಗಲಕೋಟೆ ಜಿಲ್ಲೆಯ 8ನೇ ತರಗತಿಯ ವಿದ್ಯಾರ್ಥಿನಿ ಗರ್ಭಿಣಿಯಾದ ಘಟನೆ ನಡೆದಿರುವುದು ಅತ್ಯಂತ ನೋವಿನ ಸಂಗತಿ ಎಂದು ಅವರು ವಿಷಾದಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...