ವಿಜಯಪುರ | ಲೆಕ್ಕಾಚಾರದ ವಿಚಾರ: ಗ್ರಾ.ಪಂ. ಸಿಬ್ಬಂದಿಗೆ ಚಪ್ಪಲಿಯಿಂದ ಹಲ್ಲೆ ನಡೆಸಿದ ಉಪಾಧ್ಯಕ್ಷೆ!

Date:

Advertisements

ವಿಜಯಪುರ ತಾಲೂಕಿನಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಗ್ರಾಮ ಪಂಚಾಯಿತಿ ಲೆಕ್ಕ ಪರಿಶೋಧನೆ ವೇಳೆ ಗಲಾಟೆ ಉಂಟಾಗಿ, ಗ್ರಾಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.

ಕೆರೂಟಗಿ ಗ್ರಾಮದಲ್ಲಿ ಸೆಪ್ಟೆಂಬರ್ 14ರಂದು ಈ ಘಟನೆ ಜರುಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಶರಣಮ್ಮ ಸಂದಿಮನಿ ಎಂಬುವವರೇ ದಾಳಿ ಮಾಡಿದ ಉಪಾಧ್ಯಕ್ಷೆ. ಗ್ರಾಪಂ ಕಾಯಕಮಿತ್ರ ಸಿಬ್ಬಂದಿ ದ್ರೌಪದಿ ಹಿರೇಮಠ ಥಳಿತಕ್ಕೆ ಒಳಗಾದವರು. ಚಪ್ಪಲಿಯಲ್ಲಿ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.

Advertisements

ಗ್ರಾಪಂ ಲೆಕ್ಕ ಪರಿಶೋಧ ನಡೆಸುವುದಕ್ಕೆ ಉಪಾಧ್ಯಕ್ಷೆ ಶರಣಮ್ಮ ಪತಿ ರಾಜಶೇಖರ್ ಸಂದಿಮನಿ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ, ಜಿಲ್ಲಾ ಪಂಚಾಯಿತಿಯಿಂದ ಆಗಮಿಸಿದ್ದ ಲೆಕ್ಕ ಪರಿಶೋಧಕರಿಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ ಮತ್ತು ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ.

ಗಲಾಟೆ ಕಾರಣದಿಂದ ಗ್ರಾಮ ಕಾಯಕ ಮಿತ್ರ ದ್ರೌಪದಿ ಹಿರೇಮಠ ಮನೆಗೆ ಬಂದಿದ್ದರು. ಆದರೂ, ದ್ರೌಪದಿಯ ಮನೆಗೆ ತೆರಳಿ ಉಪಾಧ್ಯಕ್ಷೆ ಶರಣಮ್ಮ ಚಪ್ಪಲಿಯಿಂದ ಹಲ್ಲೆ ಮಾಡಿದ್ದಾರೆ. ಅಲ್ಲದೇ, ಕತ್ತಿನಲ್ಲಿದ್ದ ಮಾಂಗಲ್ಯ ಸರವನ್ನು ಕಿತ್ತು ಹಾಕಲಾಗಿದೆ. ಇದಕ್ಕೆ ಪತ್ನಿಗೆ ಪತಿ ಕುಮ್ಮಕ್ಕು ನೀಡಿದ್ದಾನೆ ಎನ್ನಲಾಗಿದೆ.

ಬಳಿಕ ಹಲ್ಲೆಗೆ ಒಳಗಾದ ಮಹಿಳೆ ಕಲಕೇರಿ ಪೊಲೀಸ್ ಠಾಣೆಗೆ ತೆರಳಿ ರಕ್ಷಣೆ ಕೋರಿದರೂ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪ ಕೂಡ ಕೇಳಿಬಂದಿದೆ. ಶರಣಮ್ಮ ಹಾಗೂ ರಾಜಶೇಖರ್ ಅವರನ್ನು ಠಾಣೆಗೆ ಕರೆಯಿಸಿ ಕೇವಲ ಎಚ್ಚರಿಕೆ ಕೊಟ್ಟು ಪೊಲೀಸರು ಕಳುಹಿಸಿದ್ದರು ಎಂದು ತಿಳಿದುಬಂದಿದೆ.

ಇದಲ್ಲದೆ, ಮತ್ತೆ ಸೆ.17ರಂದು ದ್ರೌಪದಿ ಹಿರೇಮಠ ಮೇಲೆ ಉಪಾಧ್ಯಕ್ಷೆಯ ಪತಿ ರಾಜಶೇಖರ ಎರಡನೇ ಬಾರಿ ಹಲ್ಲೆ ಮಾಡಿದ್ದಾನೆ. ಇದರಿಂದ ಎಚ್ಚೆತ್ತ ಗ್ರಾಪಂ ಪಿಡಿಒ ಎ.ಟಿ.ಅಂಗಡಿ ಹಾಗೂ ಕಾರ್ಯದರ್ಶಿ ಎ.ಎಸ್. ಮುಜಾವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದರ ಪ್ರಕಾರ ರಾಜಶೇಖರ ಸಂದಿಮನಿ ವಿರುದ್ಧ ಸರ್ಕಾರಿ ಸೇವೆಗೆ ಅಡ್ಡಿ ಆರೋಪದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದೇ ವೇಳೆ, ದ್ರೌಪತಿ ಹಿರೇಮಠ ನೀಡಿದ ದೂರು ಸ್ವೀಕರಿಸಬೇಕು ಮತ್ತು ಹಲ್ಲೆ ಮಾಡಿರುವ ಗ್ರಾಪಂ ಉಪಾಧ್ಯಕ್ಷೆಯ ವಿರುದ್ಧ ಕ್ರಮ ಜರುಗಿಸಬೇಕು ಎಂಬ ಒತ್ತಾಯವನ್ನು ಸಾರ್ವಜನಿಕರು ಮಾಡಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X