ವಿಜಯಪುರ | ಮರ್ಯಾದೆಗೇಡು ಹತ್ಯೆ: ಗರ್ಭಿಣಿಯನ್ನು ಕೊಂದಿದ್ದ ಇಬ್ಬರಿಗೆ ಮರಣದಂಡನೆ

Date:

ಅಂತರ್‌ಜಾತಿ ವಿವಾಹವಾಗಿದ್ದರು ಎಂಬ ಕಾರಣಕ್ಕೆ 9 ತಿಂಗಳ ಗರ್ಭಿಣಿಯನ್ನು ಹತ್ಯೆಗೈದಿದ್ದ ಆಕೆಯ ಕುಟುಂಬದ ಇಬ್ಬರಿಗೆ ಮರಣದಂಡನೆ ಮತ್ತು ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಪ್ರಕರಣದಲ್ಲಿ ವಿಜಯಪುರ ಜಿಲ್ಲಾ ನ್ಯಾಯಾಲಯ ನೀಡಿದ್ದ ತೀರ್ಪುನ್ನು ಹೈಕೋರ್ಟ್‌ನ ಕಲಬುರಗಿ ಪೀಠ ಎತ್ತಿಹಿಡಿದಿದೆ.

- Advertisement -

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಗುಂಡಕಲ್ ಗ್ರಾಮದಲ್ಲಿ ಮೃತ ಭಾನು ಬೇಗಂ ಮತ್ತು ಎಸ್‌ಟಿ ಸಮುದಾಯದ ಸಾಯಿಬಣ್ಣ ಇಬ್ಬರೂ ಪರಸ್ಪರ ಪ್ರೀತಿ 2017ರಲ್ಲಿ ವಿವಾಹವಾಗಿದ್ದರು. ದಂಪತಿಗಳು ಅದೇ ಗ್ರಾಮದಲ್ಲಿ ವಾಸವಾಗಿದ್ದರು. ಭಾನು ಬೇಗಂ 9 ತಿಂಗಳ ಗರ್ಭಿಣಿಯಾಗಿದ್ದಾಗ ಆಕೆಯನ್ನು ಆಕೆಯ ತಾಯಿ, ಸಹೋದರರು ಹಾಗೂ ಸಂಬಂಧಿಗಳು ಬೆಂಕಿ ಹಚ್ಚಿ ಕೊಂದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಪ್ರಕರಣ ದಾಖಲಿಸಿಕೊಂಡಿದ್ದ ಬಸವನಬಾಗೇವಾಡಿ ಪೊಲೀಸರು, ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ವಿಜಯಪುರ ಜಿಲ್ಲಾ ನ್ಯಾಯಾಲಯವು ಭಾನು ಬೇಗಂ ಅವರ ಅವರ ಸಹೋದರರಾದ ಇಬ್ರಾಹಿಂ ಸಾಬ್ ಮಹಮ್ಮದ್‌ಸಾಬ್ ಅತ್ತರ್ (31) ಮತ್ತು ಅಕ್ಬರ್ ಮಹಮ್ಮದ್‌ಸಾಬ್ ಅತ್ತರ್‌ಗೆ (28) ಮರಣದಂಡನೆ ಹಾಗೂ ತಾಯಿ ರಂಜಾನ್‌ಬಿ ಅತ್ತರ್, ಸಂಬಂಧಿಕರಾದ ದಾವಲ್‌ಬಿ ಬಂದೇನವಾಝ್ ಜಮಾದಾರ್, ಅಜ್ಮಾ ಜೀಲಾನಿ ದಖನಿ, ಅಬ್ದುಲ್ ಖಾದರ್ ದಖನಿ ಮತ್ತು ದಾವಲ್‌ಬಿ ಸುಬ್ಹಾನ್ ದಣ್ಣೂರ್ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಈ ಲೇಖನ ಓದಿದ್ದೀರಾ?: ಅಲೆಮಾರಿಗಳ ಆರ್ತನಾದಕ್ಕೆ ಹೃದಯ ತೆರೆಯಲಿ ದೆಹಲಿ

ನ್ಯಾಯಾಲಯದ ತೀರ್ಪುನ್ನು ಪ್ರಶ್ನಿಸಿ ಅಪರಾಧಿಗಳು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಅವರ ಮನವಿಯನ್ನು ಆಲಿಸಿದ ನ್ಯಾಯಮೂರ್ತಿಗಳಾದ ಹೆಚ್‌.ಪಿ ಸಂದೇಶ್ ಮತ್ತು ಟಿ.ಎಂ ನದಾಫ್ ಅವರ ದ್ವಿಸದಸ್ಯ ಪೀಠವು ವಿಜಯಪುರ ನ್ಯಾಯಾಲಯ ತೀರ್ಪನ್ನು ಎತ್ತಿಹಿಡಿದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವರದಕ್ಷಿಣೆ ಕಿರುಕುಳ ಆರೋಪ; ಮಹಿಳೆ ಅನುಮಾನಾಸ್ಪದ ಸಾವು!

ವರದಕ್ಷಿಣೆ ಕಿರುಕುಳದ ಆರೋಪದ ನಡುವೆ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಗರದ...

ಕೊಡಗಿನಲ್ಲಿ ‘SIR’ ಪಬ್ಲಿಕ್ ಹಿಯರಿಂಗ್: ‘ಮತದಾನದ ಹಕ್ಕು ಕಸಿಯುವುದು ಅಷ್ಟು ಸುಲಭವಲ್ಲ’ -ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಎದುರಾಗುತ್ತಿರುವ ಸಮಸ್ಯೆಗಳು,...

ದಿಂಡವಾರ ಬಳಿ ಭೂಕಂಪ; ಸ್ಥಳೀಯರು ಆತಂಕಪಡುವ ಅಗತ್ಯವಿಲ್ಲ: KSNDMC ಅಧಿಕಾರಿಗಳು

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನಲ್ಲಿ 3.5 ತೀವ್ರತೆಯ ಭೂಕಂಪ ಉಂಟಾಗಿರುವುದಾಗಿ ಕರ್ನಾಟಕ...

ಯಾದಗಿರಿ | ಬರದ ಹೊಡೆತಕ್ಕೆ ಬೆಳೆ ನಷ್ಟ, ಸಾಲದ ಹೊರೆ; ರೈತ ಆತ್ಮಹತ್ಯೆ

ಮಳೆ ಕೈಕೊಟ್ಟು ಬೆಳೆ ನಿರೀಕ್ಷಿತ ಪ್ರಮಾಣದಲ್ಲಿ ಬಾರದ ಹಿನ್ನೆಲೆಯಲ್ಲಿ ಸಾಲದ ಹೊರೆ...