ವಿಜಯಪುರ | ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿದ ಪ್ರಕರಣ: ಐವರ ಮೃತದೇಹ ಪತ್ತೆ; ಕಾರ್ಯಾಚರಣೆ ಅಂತ್ಯ

Date:

ವಿಜಯಪುರದ ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ ಐವರು ಜಲಸಮಾಧಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗ್ನಿಶಾಮಕ ದಳ ಸಿಬ್ಬಂದಿ ಐವರ ಮೃತದೇಹವನ್ನೂ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದು, ಕಾರ್ಯಾಚರಣೆ ನಿಲ್ಲಿಸಿದ್ದಾರೆ.

- Advertisement -

ಜಲ ಸಮಾಧಿಯಾಗಿದ್ದ ಐವರ ಪೈಕಿ ಮೂವರ ಶವಗಳ್ನು ಬುಧವಾರ ಹೊರ ತೆಗೆಯಲಾಗಿದೆ. ಪುಂಡಲಿಕ ಯಂಕಂಚಿ, ತಯ್ಯಬ್ ಚೌಧರಿ ಹಾಗೂ ದಶರಥ ಗೌಡರ್ ಶವಗಳನ್ನು ಈಗಾಗಲೇ ಹೊರ ತೆಗೆಯಲಾಗಿತ್ತು. ಇನ್ನುಳಿದ ಇಬ್ಬರಿಗಾಗಿ ಶೋಧಕಾರ್ಯ ಮುಂದುವರೆದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಗುರುವಾರ 30 ಜನ ಸಿಬ್ಬಂದಿ ಹಾಗೂ ಐದು ಬೋಟ್‌ಗಳ ಸಹಾಯದಿಂದ ಶೋಧಕಾರ್ಯ ಪ್ರಾರಂಭಿಸಿದ್ದು, ರಫೀಕ್ ಆಲಮೇಲ (40) ಹಾಗೂ ಮೆಹಬೂಬ್ ವಾಲಿಕಾರ್ (35) ಮೃತದೇಹವನ್ನು ಪತ್ತೆಹಚ್ಚಿ ನೀರಿನಿಂದ ಹೊರತೆಗೆದಿದ್ದಾರೆ.

ತೆಪ್ಪ ಘಟನೆ

ಜುಲೈ 2ರ ಮಂಗಳವಾರ ಸಂಜೆ 4:30ರ ಸುಮಾರಿಗೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಬಳೂತಿ ಜಾಕವೆಲ್ ಬಳಿ ಘಟನೆ ನಡೆದಿತ್ತು. ಇಸ್ಪೀಟ್ ಆಡುತ್ತಿದ್ದ ವೇಳೆ ಪೊಲೀಸರ ದಾಳಿಯ ಮಾಹಿತಿಯನ್ನರಿತು ತಪ್ಪಿಸಿಕೊಳ್ಳಲು ನದಿಗೆ ತೆಪ್ಪದ ಮೂಲಕ ಜಿಗಿದಿದ್ದು, ಏಳು ಜನ ನೀರುಪಾಲಾಗಿದ್ದರು.

ಇದನ್ನು ಓದಿದ್ದೀರಾ? ವಿಜಯಪುರ | ಇಸ್ಪೀಟ್ ಆಟ; ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಆರು ಜನ ನೀರುಪಾಲು

ಈ ಪೈಕಿ ಓರ್ವ ಈಜಿ ದಡ ಸೇರಿದ್ದರೆ, ಮತ್ತೊರ್ವನನ್ನು ರಕ್ಷಣೆ ಮಾಡಲಾಗಿತ್ತು. ಇನ್ನು ಘಟನೆಯಲ್ಲಿ ಸಾವನ್ನಪ್ಪಿದವರ ಐವರ ಮೃತದೇಹಗಳನ್ನು ಪತ್ತೆ ಹಚ್ಚಿದ್ದು, ಅಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...

ವಿಜಯಪುರ | ಸಾಧಕ ಗಣ್ಯರಿಗೆ ರಾಜ್ಯೋತ್ಸವ ಸನ್ಮಾನದ ಗೌರವ; ಅರ್ಜಿ ಆಹ್ವಾನ

2026 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ. 1ರಂದು ವಿಜಯಪುರ...