ವಿಜಯಪುರ | ಚಿಕ್ಕ ಚಿಕ್ಕ ಸೇವೆಗಳೂ ದೇಶದ ಪ್ರಗತಿಯಲ್ಲಿ ಮಹತ್ತರ ಪಾತ್ರ ವಹಿಸುತ್ತವೆ: ಡಾ. ಜಾವೀದ್ ಜಮಾದಾರ

Date:

ಭಯೋತ್ಪಾದನೆ ಚಟುವಟಿಕೆ, ಕೋಮು ಮತ್ತು ಜಾತಿ ಭೇದದ ಸಮಸ್ಯೆಗಳಿಂದ ದೇಶದ ಪ್ರಗತಿ ಕುಂಠಿತವಾಗುತ್ತಿರುವ ಪ್ರಸ್ತುತ ಕಾಲಘಟ್ಟದಲ್ಲಿ, ಎನ್‌ಎಸ್ಎಸ್ ತರಬೇತಿ ಕೇವಲ ಒಂದು ಕಾರ್ಯಕ್ರಮವಾಗಿರದೆ ಯುವಜನತೆಯ ಜೀವನದ ಪ್ರಮುಖ ಅಂಗವಾಗಬೇಕು ಎಂದು ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತ ಸಂಘದ ಅಧ್ಯಕ್ಷ ಡಾ. ಜಾವೀದ್ ಜಮಾದಾರ ಹೇಳಿದರು.

- Advertisement -

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಎನ್.ಎಸ್.ಎಸ್ ಸ್ನಾತಕ ‘ಬ’ ಹಾಗೂ ಮುಕ್ತ ಘಟಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ರಾಷ್ಟ್ರೀಯ ಸೇವಾ ಯೋಜನೆ ಬೆಂಗಳೂರು, ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಕೋಶದ ವತಿಯಿಂದ ಮಂಗಳವಾರ ಆಯೋಜಿಸಿದ್ದ ಏಳು ದಿನಗಳ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಚಿಕ್ಕ ಚಿಕ್ಕ ಸೇವೆಗಳೂ ದೇಶದ ಪ್ರಗತಿಯಲ್ಲಿ ಮಹತ್ತರ ಪಾತ್ರ ವಹಿಸುತ್ತವೆ ಎಂಬ ಆರಿವು ಮೂಡಿಸುತ್ತವೆ. ಯುವಕರು ಸಾಮಾಜಿಕ ಜಾಲತಾಣಗಳಲ್ಲಿ ಸಮಯ ವ್ಯರ್ಥ ಮಾಡುವ ಬದಲು ಸ್ವಚ್ಛತೆ, ಸಹಬಾಳ್ವೆ, ಸಮಾನತೆ ಮತ್ತು ಸಾಮಾಜಿಕ ಪ್ರಗತಿಗೆ ತೊಡಗಿಸಿಕೊಳ್ಳಬೇಕು. ಮಹಾತ್ಮ ಗಾಂಧೀಜಿ, ಬಾಬಾ ಸಾಹೇಬ್ ಅಂಬೇಡ್ಕರ್, ಬಸವೇಶ್ವರ, ಏಸು ಕ್ರಿಸ್ತ, ಪೈಗಂಬರ್, ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಪಾಲಿಸುವ ಮೂಲಕ ಸಮಾಜದ ಒಗ್ಗಟ್ಟಿಗೆ ಶ್ರಮಿಸಬೇಕು” ಎಂದರು.

ಈ ಏಳು ದಿನಗಳ ಶಿಬಿರದ ಉದ್ದೇಶಗಳು ಸೇವಾ ಮನೋಭಾವನೆ ಬೆಳೆಸುವುದು, ಪರಿಸರ ಸಂರಕ್ಷಣೆಯ ಅರಿವು ಮೂಡಿಸುವುದು. ನೈರ್ಮಲ್ಯ ಮತ್ತು ರಸ್ತೆ ಸ್ವಚ್ಛತೆಯನ್ನು ಉತ್ತೇಜಿಸುವುದು, ಮಹಿಳಾ ಮತ್ತು ಮಕ್ಕಳ ಜಾಗೃತಿ, ಸ್ತ್ರೀ ಸಬಲೀಕರಣ, ಮತದಾರರ ಜಾಗೃತಿ ಮತ್ತು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಮಾರ್ಗದರ್ಶನ ನೀಡುವುದಾಗಿದೆ. ಇದರ ಮೂಲಕ ವಿದ್ಯಾರ್ಥಿಗಳು ಪರಿಪೂರ್ಣ ವ್ಯಕ್ತಿಗಳಾಗಿ ಸಮಾಜದ ಉಜ್ವಲ ಭವಿಷ್ಯ ಕಟ್ಟುವತ್ತ ಶ್ರಮಿಸಬೇಕಾಗಿದೆ ಎಂದು ಹೇಳಿ. ಮಹಿಳಾ ವಿವಿಗೆ 500 ಗಿಡಗಳನ್ನು ಕೊಡುವ ಭರವಸೆ ನೀಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿಯ ಎನ್.ಎಸ್.ಎಸ್. ಕೋಶದ ಸಂಯೋಜನಾಧಿಕಾರಿ ಪ್ರೊ. ಅಶೋಕ್ ಕುಮಾರ ಸುರಪುರ ಮಾತನಾಡಿ, ಏಳು ದಿನಗಳ ಶಿಬಿರ ಕೇವಲ ತಾತ್ಕಾಲಿಕವಾಗಿರದೇ ಜೀವನದುದ್ದಕ್ಕೂ ಶಿಸ್ತು, ಮಾತುಗಾರಿಕೆ, ಬೆಳವಣಿಗೆ, ಸೇವಾ ಮನೋಭಾವನೆಯನ್ನು ಆಳವಡಿಸಿಕೊಳ್ಳಬೇಕು. ಹಾಗೆಯೇ ಓದುವುದು ಅಷ್ಟೇ ಅಲ್ಲ ಸಾಮಾಜಿಕ ಕಾರ್ಯಗಳಲ್ಲಿ ಬೆಳೆಯಬೇಕು. ಮೊದಲು ನಿಮ್ಮ ಮನದಿಂದ ನಂತರ ಮನೆಯಿಂದ ಸೇವೆ ಪ್ರಾರಂಭವಾಗಬೇಕು. ಕೇವಲ ಸುಂದರ ಮಹತ್ವವಲ್ಲ ಆನಂದವಾಗಿರುವುದು ಮುಖ್ಯ ಎಂದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಬಾಸಾಹೇಬರು ಮನುಸ್ಮೃತಿಯನ್ನು ಸುಟ್ಟ ದಿನ

ಸಮಾರಂಭದಲ್ಲಿ ಮಹಿಳಾ ವಿವಿಯ ಡಾ. ಕಲಾವತಿ ಕಾಂಬಳೆ, ಡಾ ಅಶ್ವಿನಿ ಕೆ. ಎನ್. ಡಾ. ಅಮರನಾಥ ಪ್ರಜಾಪತಿ, ವಿವಿಧ ವಿಭಾಗದ ಪ್ರಾಧ್ಯಾಪಕರು, ಮತ್ತು ಎನ್.ಎಸ್.ಎಸ್ ಸ್ನಾತಕ ಹಾಗೂ ಮುಕ್ತ ಘಟಕಗಳ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

ಸಮಾರೋಪ ಸಮಾರಂಭದಲ್ಲಿ ಋತುಚಾ ಏಳು ದಿನದ ವಾರ್ಷಿಕ ವಿಶೇಷ ಶಿಬಿರದ ವರದಿ ವಾಚಿಸಿದರು. ಲಕ್ಷ್ಮೀ ಮ್ಯಾಗೇರಿ ಸ್ವಾಗತಿಸಿದರು. ಮಂಜುಳಾ ಚವ್ಹಾಣ ನಿರೂಪಿಸಿದರು. ಮಾಯಾವತಿ ವಂದಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...