ವಿಜಯಪುರ | ಡಾ.ಬಾಬು ಜಗಜೀವನರಾಮ್‌ ಅವರ 117ನೇ ಜನ್ಮದಿನ ಆಚರಣೆ

Date:

Advertisements

ಡಾ.ಬಾಬು ಜಗಜೀವನರಾಮ್ ಅವರು ಈ ದೇಶಕ್ಕೆ ಅಪಾರವಾದ ಕೊಡುಗೆಯನ್ನು ನೀಡಿದ್ದಾರೆ. ದಲಿತ ಕುಟುಂಬದಲ್ಲಿ ಜನಿಸಿ ಛಲದಿಂದ ಉನ್ನತ ವ್ಯಾಸಂಗ ಪೂರೈಸಿದರು. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಗಾಂಧೀಜಿ ಮತ್ತು ನೆಹರೂ ಅವರ ನಿಕಟವರ್ತಿಗಳಾಗಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ವಿಜಯಪುರ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸುಬಾಷ್ ಕಾಲೇಬಾಗ‌ ತಿಳಿಸಿದರು.

ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಭಾರತದ ಮಾಜಿ ಉಪಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರ ಡಾ ಬಾಬು ಜಗಜೀವನರಾಮ್ ಅವರ 117ನೇ ಜನ್ಮದಿನಾಚರಣೆ ವೇಳೆ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಗೌರವ ನಮನಗಳನ್ನು ಸಲ್ಲಿಸಿ ಮಾತನಾಡಿದರು.

“ಅತ್ಯಂತ ಮೇಧಾವಿಯಾಗಿದ್ದ ಡಾ ಬಾಬು ಜಗಜೀವನರಾಮ್ವಾರು ದೀನದಲಿತರು ಹಾಗೂ ಕಾರ್ಮಿಕ ವರ್ಗದವರ ಒಳಿತಿಗಾಗಿ ಹೋರಾಡಿದವರು. ಸ್ವಾತಂತ್ರ್ಯ ನಂತರದ ಸರ್ಕಾರಗಳಲ್ಲಿ ಪ್ರಮುಖ ಖಾತೆಗಳನ್ನು ನಿಭಾಯಿಸಿ ದೇಶದ ಮೊಟ್ಟಮೊದಲ ಉಪಪ್ರಧಾನಿ ಹುದ್ದೆಗೇರಿದ ಖ್ಯಾತಿ ಡಾ.ಬಾಬು ಜಗಜೀವನರಾಮ ಅವರದು. ದೇಶವು ತೀವ್ರ ಬರಗಾಲಕ್ಕೆ ತುತ್ತಾಗಿ ತುತ್ತು ಅನ್ನಕ್ಕೂ ಕೂಡ ಪರದಾಡುತ್ತಿದ್ದ ಸಂದರ್ಭದಲ್ಲಿ ಆಹಾರ ಖಾತೆ ಸಚಿವರಾಗಿ ಈ ದೇಶದಲ್ಲಿ ಹಸಿರುಕ್ರಾಂತಿಯನ್ನು ಮಾಡಿ ದೇಶವು ಆಹಾರದಲ್ಲಿ ಸ್ವಾವಲಂಬಿಯಾಗುವಂತೆ ಮಾಡಿದರು. ಇವರ ಜೀವನ ಪ್ರತಿಯೊಬ್ಬ ಭಾರತೀಯರಿಗೂ ಸ್ಫೂರ್ತಿದಾಯಕವಾಗಿದೆ. ದೀನದಲಿತರು ಬಾಬೂಜಿಯವರ ಸಾಧನೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಗದಗ | ಗ್ರಾಮೀಣ ಪ್ರದೇಶಗಳಲ್ಲಿ ಮತದಾನ ಪ್ರಮಾಣ ಹೆಚ್ಚಳಕ್ಕೆ ಮಹಿಳಾ ಸ್ವ-ಸಹಾಯ ಸಂಘಗಳು ಶ್ರಮಿಸಬೇಕು: ಸಿ ಬಿ ದೇವರಮನಿ

ಕೆಪಿಸಿಸಿ ಬೀದಿಬದಿ ವ್ಯಾಪಾರಿಗಳ ವಿಭಾಗದ ಅಧ್ಯಕ್ಷ ಡಾ ಸಿ ಇ ರಂಗಸ್ವಾಮಿ,  ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಚಾಂದಸಾಬ ಗಡಗಲಾವ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಸಂತ ಹೊನಮೊಡೆ, ಒಬಿಸಿ ಜಿಲ್ಲಾ ಅಧ್ಯಕ್ಷ ಸಾಹೇಬಗೌಡ ಬಿರಾದಾರ, ಎಂ ಎಂ ಮುಲ್ಲಾ, ಫಿರೋಜ ಶೇಖ, ಸೋಮಣ್ಣ ತಳವಾರ, ಕೃಷ್ಣಾ ಲಮಾಣಿ, ಸಂತೋಷ ಬಾಲಗಾಂವಿ, ಮಹಾದೇವ ಜಾಧವ, ಎ ಆರ್ ಕಂಬಾಗಿ, ಜಯಪ್ರಭು ಕೊಳಮಲಿ, ಭೀಮರಾಯ ಸೀತಿಮನಿ, ಮಹಾಲಿಂಗ ಕೆಂಗಲಗುತ್ತಿ, ರಮೇಶ ಪೂಜಾರಿ, ಶಾಂತವ್ವ ಹೊಸಮನಿ, ಅಬ್ದುಲ್‌ಪೀರಾ ಜಮಖಂಡಿ, ಬಸಪ್ಪ ಕೋಲಕಾರ ಮುಂತಾದವರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X