ಕೇಂದ್ರ ಸರ್ಕಾರದ ನಬಾರ್ಡ್ ಯೋಜನೆಯಡಿ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ, ಇಂಡಿ, ಸಿಂದಗಿ ತಾಲೂಕುಗಳಲ್ಲಿ ಪಿಯು ಕಾಲೇಜು ಕಟ್ಟಡ, ಸರ್ಕಾರಿ ಪ್ರಾಥಮಿಕ ಶಾಲಾ ಕೋಣೆಗಳು ಹಾಗೂ ವಸತಿ ನಿಲಯ ಸೇರಿ ವಿವಿಧ ಕಾಮಗಾರಿಗೆ ₹12.96 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಸವನ ಬಾಗೇವಾಡಿ ತಾಲೂಕಿನ ಸರ್ಕಾರಿ ಪಿಯು ಕಾಲೇಜು ಕಟ್ಟಡಕ್ಕಾಗಿ ₹1.34 ಕೋಟಿ, ಇಂಡಿ ತಾಲೂಕಿನ ಸರ್ಕಾರಿ ಪಿಯು ಕಾಲೇಜು ಕಟ್ಟಡಕ್ಕೆ ₹1.34 ಕೋಟಿ ಹಾಗೂ ತಾಂಬಾ ಗ್ರಾಮದಲ್ಲಿ ಮೆಟ್ರಿಕ್ ನಂತರದ ಹೆಣ್ಣುಮಕ್ಕಳ ಹಾಸ್ಟೆಲ್ ನಿರ್ಮಾಣಕ್ಕೆ ₹4.25 ಕೋಟಿ, ಸಿಂದಗಿ ತಾಲೂಕಿನ ಗಣಿಹಾರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡ ನಿರ್ಮಾಣಕ್ಕೆ ₹1.47 ಕೋಟಿ ಹಾಗೂ ಕೊಕಟನೂರ ಸರ್ಕಾರಿ ಪ್ರಾಥಮಿಕ ಶಾಲೆ ನಿರ್ಮಾಣಕ್ಕೆ ₹1.47 ಕೋಟಿ, ಸುರಗಿಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಕಟ್ಟಡಕ್ಕೆ ₹1.47 ಕೋಟಿ, ಸೋಮಜಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡಕ್ಕೆ ₹1.52 ಕೋಟಿ ಅನುದಾನ ಮಂಜೂರು ಆಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: ವಿಜಯಪುರ | ಸ್ತ್ರೀವಾದವನ್ನು ಪ್ರತಿಯೊಬ್ಬರೂ ಸರಿಯಾಗಿ ಅರ್ಥ ಮಾಡಿಕೊಳ್ಳುವುದು ಅಗತ್ಯ: ಪ್ರೊ. ಶುಭಾ ಮರೆವಂತೆ