ಭಾರತದ ಇತಿಹಾಸ ಕಂಡ ಪ್ರಮುಖ ರಾಜಕೀಯ ಪಕ್ಷ ಕಾಂಗ್ರೆಸ್. ಜನಪರತೆಯ ಆಧಾರದ ಮೇಲೆ ಎಲ್ಲ ವರ್ಗಗಳ ಏಳಿಗೆಗಾಗಿ ಶ್ರಮಿಸುತ್ತಿದ್ದು, ಸಮಾನ ಅವಕಾಶಗಳನ್ನು ಸೃಷ್ಟಿಸಿದ ಕಾಂಗ್ರೆಸ್‌ನ 139ನೇ ಸಂಸ್ಥಾಪನಾ ದಿನಾಚರಣೆ ಆಚರಿಸುತ್ತಿದ್ದೇವೆ ಎಂದು ಕೆಪಿಸಿಸಿ ಮುಖಂಡ ಅಬ್ದುಲ್ ಹಮೀದ್ ಮುಷ್ರೀಫ್ ಹೇಳಿದರು.
ವಿಜಯಪುರದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ಮಾಡಿ ಅವರು ಮಾತನಾಡಿದರು. “ಸ್ವಾತಂತ್ರ್ಯ ನಂತರದಲ್ಲಿ ಅತ್ಯಂತ ಆರೋಗ್ಯಪೂರ್ಣವಾಗಿ ದೇಶವನ್ನು ಮುನ್ನಡೆಸಿದ ಶಕ್ತಿ ಕಾಂಗ್ರೆಸ್ ಪಕ್ಷಕ್ಕೆ ಸಲ್ಲಬೇಕು” ಎಂದು ಹೇಳಿದರು. ಇದೇ ವೇಳೆ ಜಿಲ್ಲಾ ಕಾಂಗ್ರೆಸ್ ಸೇವಾದಳದ ವತಿಯಿಂದ ಪ್ರತಿಜ್ಞಾವಿಧಿ ಓದಿ ಸ್ವೀಕರಿಸಿದರು.
ಈ ಸುದ್ದಿ ಓದಿದ್ದೀರಾ? ಕಾಡಿನ ಮೂಲ ನಿವಾಸಿಗಳ ಬದುಕು ಬಿತ್ತರಿಸುವ ಕನ್ನಡದ ‘ಅಡವಿ’ ಚಿತ್ರ; ಹಾಡು ಬಿಡುಗಡೆ ಮಾಡಿದ ಪ ರಂಜಿತ್
ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರುಗಳಾದ ಚಾಂದಸಾಬ ಗಡಗಲಾವ, ವೈಜನಾಥ ಕರ್ಪೂರಮಠ, ಡಾ.ಗಂಗಾಧರ ಸಂಬಣ್ಣಿ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಮೀರ್ ಅಹ್ಮದ ಬಕ್ಷಿ, ಜಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಆರತಿ ಶಹಾಪೂರ, ಅಬ್ದುಲ್‌ರಜಾಕ ಹೊರ್ತಿ, ದಿನೇಶ ಹಳ್ಳಿ, ಕಾಂಗ್ರೆಸ್ ಮುಖಂಡರಾದ ಬಲರಾಮ ನಾಯಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವಸಂತ ಹೊನಮೊಡೆ, ಶರಣಪ್ಪ ಯಕ್ಕುಂಡಿ, ಈರಪ್ಪ ಜಕ್ಕಣ್ಣವರ, ಅಬ್ದುಲ್‌ಪೀರಾ ಜಮಖಂಡಿ, ಜಿಲ್ಲಾ ಕಾಂಗ್ರೆಸ್ ಅಂಗ ಘಟಕಗಳ ಅಧ್ಯಕ್ಷರುಗಳಾದ ನಿಂಗಪ್ಪಾ ಸಂಗಾಪೂರ, ಲಾಲಸಾಬ ಕೊರಬು, ರಾಜೇಶ್ವರಿ ಚೋಳಕೆ, ಸಂತೋಷ ಬಾಲಗಾಂವಿ, ಎಂ.ಎ. ಬಕ್ಷಿ, ಮಲ್ಲಿಕಾರ್ಜುನ ಗಬಸಾವಳಗಿ, ಪ್ರದೀಪ ಸೂರ್ಯವಂಶಿ, ಅಬುಬಕರ ಕಂಬಾಗಿ, ದಸ್ತಗೀರ ಸಾಲೋಟಗಿ, ರಜಾಕ ಕಾಖಂಡಕಿ, ಕಾಶಿಬಾಯಿ ಹಡಪದ, ಮೃತ್ಯುಂಜಯ ಪುರ್ತುಗೇರಿಮಠ ಸೇರಿದಂತೆ ಇತರರು ಇದ್ದರು.