ವಿಜಯಪುರ | ಜ.9ರಂದು ಅಕ್ಕಮಹಾದೇವಿ ಮಹಿಳಾ ವಿವಿಯ 16ನೇ ಘಟಿಕೋತ್ಸವ

Date:

Advertisements

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯ ಜ್ಞಾನಶಕ್ತಿ ಆವರಣದ ಕ್ರೀಡಾ ಮೈದಾನದಲ್ಲಿ ವಿಶೇಷವಾಗಿ ನಿರ್ಮಿಸಿರುವ ಸಭಾಂಗಣದಲ್ಲಿ ಜನವರಿ 9ರಂದು ವಿಶ್ವವಿದ್ಯಾಲಯದ 16ನೇ ಘಟಿಕೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಪ್ರೊ ಬಿ ಕೆ ತುಳಸಿಮಾಲಾ ತಿಳಿಸಿದರು.‌

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಗೌರವಾನ್ವಿತ ರಾಜ್ಯಪಾಲರು ಮತ್ತು ಮಹಿಳಾ ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಆಗಿರುವ ಥಾವರ್ ಚಂದ್ ಗೆಹ್ಲೋಟ್ ಅವರು ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿದ್ದು, ನವದೆಹಲಿಯ ರಾಷ್ಟ್ರೀಯ ಶೈಕ್ಷಣಿಕ ಯೋಜನೆ ಮತ್ತು ಆಡಳಿತ ಸಂಸ್ಥೆಯ ಕುಲಪತಿ ಪ್ರೊ.ಶಶಿಕಲಾ ವಂಜಾರಿ ಅವರು ಘಟಿಕೋತ್ಸವದ ಮುಖ್ಯ ಅತಿಥಿ ಭಾಷಣ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್ ಮತ್ತು ಕುಲಪತಿ ಪ್ರೊ.‌ ಬಿ ಕೆ ತುಳಸಿಮಾಲ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್ ಎಂ ಚಂದ್ರಶೇಖರ್ ಅವರು ಉಪಸ್ಥಿತರಿರುವರು” ಎಂದು ಹೇಳಿದರು.

“ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಮೂವರು ಮಹನೀಯರಿಗೆ ಈ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುವುದು. ಕಲಾಕ್ಷೇತ್ರದ ಸಾಧನೆಗಾಗಿ ಶಿಗ್ಗಾಂವಿಯ ಗೋಟಗೋಡಿ ರಾಕ್‌ಗಾರ್ಡ್‌ ವೇದರಾಣಿ ದಾಸನೂರು, ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಕಲಬುರಗಿಯ ವಿಶ್ರಾಂತ ಪ್ರಾಧ್ಯಾಪಕಿ ಡಾ.ಮೀನಾಕ್ಷಿ ಬಾಳಿ ಮತ್ತು ಸಿನಿಮಾ ಕ್ಷೇತ್ರದ ಸಾಧನೆಗಾಗಿ ಬೆಂಗಳೂರಿನ ಖ್ಯಾತ ಚಲನಚಿತ್ರ ನಟಿ ತಾರಾ ಅವರಿಗೆ ರಾಜ್ಯಪಾಲರು ಮತ್ತು ನಮ್ಮ ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಆಗಿರುವ ಥಾವರ್‌ ಚಂದ್ ಗೆಹ್ಲೋಟ್ ಅವರು ಈ ಮೂವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡುವರು. ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಿಂದ ವಿವಿಧ ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಲ್ಲಿ ಗರಿಷ್ಠ ಅಂಕಗಳನ್ನು ಗಳಿಸಿ ತೇರ್ಗಡೆಯಾದ ಒಟ್ಟು 63 ಮಂದಿ ವಿದ್ಯಾರ್ಥಿನಿಯರಿಗೆ 80 ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಗುತ್ತಿದೆ” ಎಂದರು.

Advertisements

“ಘಟಿಕೋತ್ಸವದಲ್ಲಿ ಒಟ್ಟು 13.461 ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಪದವಿ ಪಡೆಯಲು ಅರ್ಹರಾಗಿರುತ್ತಾರೆ. ಈ ಘಟಿಕೋತ್ಸವದಲ್ಲಿ ಒಟ್ಟು 34 ವಿದ್ಯಾರ್ಥಿನಿಯರಿಗೆ ಪಿಎಎಚ್‌ಡಿ ಪದವಿ ಪ್ರದಾನ ಮಾಡಲಾಗುವುದು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಸಾಲ ಕಟ್ಟದ್ದಕ್ಕೆ ಹಸುಗೂಸು-ಬಾಣಂತಿಯನ್ನು ಮನೆಯಿಂದ ಹೊರ ಹಾಕಿದ ಫೈನಾನ್ಸ್ ಕಂಪೆನಿ

“ವಿಶ್ವವಿದ್ಯಾನಿಲಯದ 16ನೆಯ ಘಟಕೋತ್ಸವವನ್ನು ಯಶಸ್ವಿಯಾಗಿ ಸಂಘಟಿಸಲು ಈಗಾಗಲೇ ಹಲವಾರು ಸಮಿತಿಗಳನ್ನು ರಚಿಸಲಾಗಿದ್ದು, ಭರದಿಂದ ಸಿದ್ದತೆಗಳು ನಡೆದಿವೆ.

ಪತ್ರಿಕಾಗೋಷ್ಠಿಯಲ್ಲಿ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್ ಎಂ ಚಂದ್ರಶೇಖರ್, ಘಟಿಕೋತ್ಸವ ಸಂಯೋಜನಾಧಿಕಾರಿ ಪ್ರೊ. ಸಕ್ಸಾಲ್ ಹೂವಣ್ಣ, ಮಾಧ್ಯಮ ಸಮಿತಿ ಅಧ್ಯಕ್ಷ ಪ್ರೊ. ಓಂಕಾರ ಕಾಕಡೆ ಹಾಗೂ ಸಂಯೋಜಕಿ ಡಾ.ತಹಮೀನಾ ಕೋಲಾರ, ಐಸಿಟಿ ಸಂಯೋಜಕ ಸಂದೀಪ್ ನಾಯಕ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X