ನಿನ್ನೆ(ಜ.30) ಸಂಜೆ ಸ್ನೇಹಿತರೊಂದಿಗೆ ಕಾಲುವೆಗೆ ಈಜಲು ಹೋಗಿದ್ದ ಯುವಕನೊಬ್ಬ ಇಂದು ಬೆಳಗ್ಗೆ ಶವವಾಗಿ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಪಟ್ಟಣದ ಹೊರವಲಯದ ಹಡಲಗೇರಿಯಲ್ಲಿ ನಡೆದಿದೆ.
ಮೃತನನ್ನು ಯುವಕನನ್ನು ಪಟ್ಟಣದ ವಿದ್ಯಾನಗರ ನಿವಾಸಿ ಕಾರ್ತಿಕ್ ಚೆನ್ನಯ್ಯ ಹಿರೇಮಠ(18) ಎಂದು ಗುರುತಿಸಲಾಗಿದೆ. ಕಾರ್ತಿಕ್ ಪಟ್ಟಣದ ಖಾಸಗಿ ಟ್ರಾವೆಲ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಎಂದು ಮೂಲಗಳು ತಿಳಿಸಿವೆ.
ಈ ಸುದ್ದಿ ಓದಿದ್ದೀರಾ?: ವಿಜಯಪುರ | ಕೌದಿ ಭಾರತದ ಬಹುಸಂಸ್ಕೃತಿಯನ್ನು ಪ್ರತಿಬಿಂಬಿಸುವ ಬಟ್ಟೆ: ರಂಗಕಲಾವಿದೆ ಬಿ ಜಯಶ್ರೀ
ಗುರುವಾರ ಸಂಜೆ ಅಗ್ನಿಶಾಮಕ ದಳ ಶವಕ್ಕಾಗಿ ಹುಡುಕಾಡಿದ್ದರೂ ಪತ್ತೆಯಾಗಿರಲಿಲ್ಲ. ಕಾಲುವೆಯಲ್ಲಿ ನೀರು ಹರಿಯುವಿಕೆ ನಿಲ್ಲಿಸಿದ ಮೇಲೆ ಶವ ಪತ್ತೆಯಾಗಿದೆ. ಈ ಕುರಿತು ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ತಿಕ್ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಆತ್ಮಹತ್ಯೆಯೋ, ಹತ್ಯೆಯೋ ಅಥವಾ ಆಕಸ್ಮಿಕ ಸಾವೋ ಎನ್ನುವ ಆಯಾಮಗಳಲ್ಲಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
