ಆಕಸ್ಮಿಕವಾಗಿ ಕಾರಿನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ವಿಜಯಪುರ ನಗರದ ಹೊನ್ನುಟಗಿ ಬಳಿ ನಡೆದಿದೆ.
ಸಿಂಧಗಿಯಿಂದ ವಿಜಯಪುರಕ್ಕೆ ಬರುತ್ತಿದ್ದ ವೇಳೆ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಕಾರಿನಲ್ಲಿದ ಇಬ್ಬರು ಇಳಿದುಕೊಂಡು ಪ್ರಾಣ ರಕ್ಷಣೆ ಮಾಡಿಕೊಂಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ತಾಯಿ ರಕ್ಷಿಸಲು ಹೋದ ಮಕ್ಕಳು ಸೇರಿ ಮೂವರು ನೀರುಪಾಲು
ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಭೇಟಿ ನೀಡಿ ಬೆಂಕಿ ನಂದಿಸಿದರು. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
