ವಿಜಯಪುರ | ಆದ್ಯತೆ ಮೇರೆಗೆ ಸೋಮದೇವರಹಟ್ಟಿ ತಾಂಡಾದ ಸಮಗ್ರ ಅಭಿವೃದ್ಧಿಗೆ ಕ್ರಮ: ಎಂ ಬಿ ಪಾಟೀಲ

Date:

ವಿಜಯಪುರದ ಸೋಮದೇವರಹಟ್ಟಿ ತಾಂಡಾದ ದುರ್ಗಾದೇವಿ ಮಂದಿರ ದೇಶದ ಪ್ರಮುಖ ದೇವಸ್ಥಾನಗಳಲ್ಲಿ ಒಂದು ಎಂಬ ಖ್ಯಾತಿ ಗಳಿಸಿದೆ. ಆದ್ಯತೆ ಮೇರೆಗೆ ಈ ತಾಂಡಾದ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಹೇಳಿದರು.

- Advertisement -

ತಾಂಡಾದಲ್ಲಿ ಮಹಾದ್ವಾರದಿಂದ ದೇವಸ್ಥಾನದವರೆಗೆ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ರೂ.50 ಲಕ್ಷ ಅನುದಾನದಲ್ಲಿ ಕೈಗೊಳ್ಳಲಿರುವ ಸಿಸಿ ರಸ್ತೆಯ ನಿರ್ಮಾಣಕ್ಕೆ ಚಾಲನೆ, ಅರವಿಂದ ನಾಯಕರವರ ಮನೆಯಿಂದ ಹೀರು ವೇಣು ರಾಠೋಡರ ಮನೆವರೆಗಿನ ಮಾರ್ಗಕ್ಕೆ ರೂ.20 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ, ದೇವಸ್ಥಾನದ ಸಮೀಪ ಪಿಆರ್ಇಡಿ ನಿಧಿಯಲ್ಲಿ ರೂ.11 ಲಕ್ಷ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ ಯೊಜನೆಗೆ ಚಾಲನೆ ಹಾಗೂ ರೂ. 5 ಲಕ್ಷ ವೆಚ್ಚದ ಹೈಮಾಸ್ಕ್ ದೀಪದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

“ದೇವಸ್ಥಾನದ ಜಗನು ಮಹಾರಾಜರು ಸೋಮದೇವರಹಟ್ಟಿ ತಾಂಡಾದಲ್ಲಿರುವ ದುರ್ಗಾದೇವಿ ದೇವಸ್ಥಾನವನ್ನು ಇಡೀ ದೇಶಕ್ಕೆ ಪರಿಚಯಿಸಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ಏಕಾಂಗಿ ಸೈನಿಕ ಮತ್ತು ಸೇನಾಧಿಕಾರಿ(ಒನ್ ಮ್ಯಾನ್ ಆರ್ಮಿ) ರೀತಿಯಲ್ಲಿ ಶ್ರಮಿಸಿದ್ದಾರೆ. ದೇಶದ ನಾನಾ ಭಾಗಳಿಂದ ಮುಖ್ಯಮಂತ್ರಿಗಳು, ರಾಜ್ಯಪಾಲರು, ಸಚಿವರು, ಶಾಸಕರು, ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳನ್ನು ಆಹ್ವಾನಿಸಿ ದೇವಸ್ಥಾನದ ಮಹಿಮೆಯನ್ನು ಸಾರಿದ್ದಾರೆ. ರೂ. 75 ಲಕ್ಷ ವೆಚ್ಚದ ಅನುದಾನದಲ್ಲಿ ಸುಂದರವಾದ ಮಂಟಪವನ್ನು ಇಲ್ಲಿ ನಿರ್ಮಿಸಿದ್ದಾರೆ. ರಾಮರಾವ ಮಹಾರಾಜರ ಮಾದರಿಯಲ್ಲಿ‌ ಕ್ಷೇತ್ರವನ್ನು ಅಭಿವೃದ್ಶಿ ಮಾಡುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಈ ಕ್ಷೇತ್ರ ಇನ್ನಷ್ಟು ಅಭಿವೃದ್ಧಿಯಾಗಲಿದೆ” ಎಂದು ಹೇಳಿದರು.

ಮುಖಂಡ ಡಾ. ಬಾಬುರಾಜೇಂದ್ರ ನಾಯಕ‌ ಮಾತನಾಡಿ, “ಸಚಿವ ಪಾಟೀಲರ ನೀರಾವರಿ ಮತ್ತಿತರ ಅಭಿವೃದ್ಧಿ ಕೆಲಸಗಳಿಂದ ತಾಂಡಾಗಳ ಜನ ಗುಳೆ ಹೋಗುವುದು ತಪ್ಪಿದೆ. ಜೋಳ ಬೆಳೆಯದ ಹೊಲದಲ್ಲಿ ದ್ರಾಕ್ಷಿ ಬೆಳೆಯುವಂತಾಗಿದೆ. ಜಿಲ್ಲೆಗೆ ಕೈಗಾರಿಕೆಗಳನ್ನು ತರುತ್ತಿದ್ದಾರೆ. ಸಿಎಸ್ಆರ್ ಅನುದಾನ ಬಳಸಿ ಶಾಲೆಗಳ ಅಭಿವೃದ್ಧಿ ಮಾಡುತ್ತಿದ್ದಾರೆ. ಸೋಮದೇವರಹಟ್ಟಿ‌ ತಾಂಡಾಕ್ಕೆ ದ್ವಿಪಥ ರಸ್ತೆ ಮಾಡಿಸುತ್ತಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ವಿಜಯಪುರ | ಪಿಪಿಪಿ ಮಾದರಿಯ ವೈದ್ಯಕೀಯ ಕಾಲೇಜು ವಿರೋಧಿಸಿ ರಂಗೋಲಿ ಚಳವಳಿ

ಈ ಸಂದರ್ಭದಲ್ಲಿ ತಾಂಡಾದ ಮುಖಂಡರಾದ ಜಗನು ಮಹಾರಾಜ, ತಾಲೂಕು ಪಂಚಾಯಿತಿ ಇೊ ಬಸವಂತರಾಯಗೌಡ ಬಿರಾದಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಗೌಡನವರ, ಮುಖಂಡರಾದ ಗುರು ಮಾಳಿ, ಸುರೇಶ ಪವಾರ, ಭೀಮು ರಾಥೋಡ, ಅರವಿಂದ್ ನಾಯಕ ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...

ಹಾಸನ | ಮನೆಯಲ್ಲಿಯೇ ವ್ಯಕ್ತಿ ಹತ್ಯೆ; ಪ್ರಕರಣ ದಾಖಲು 

ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ...