ಕರ್ನಾಟಕ ಹಾಲು ಉತ್ಪಾದಕ ಮಹಾ ಮಂಡಳಿ(ಕೆಎಂಎಫ್)ಯು ನಂದಿನಿ ಹಾಲಿನ ಅರ್ಧ ಲೀಟರ್ ಹಾಗೂ 1 ಲೀಟರ್ ಪ್ಯಾಕೆಟ್‌ಗೆ 50 ಎಂಎಲ್ ಹಾಲನ್ನು ಹೆಚ್ಚುವರಿ ನೀಡುವುದರೊಂದಿಗೆ ಹಾಲಿನ ದರವನ್ನು ₹2ಗೆ ಹೆಚ್ಚಿಸಿರುವುದಾಗಿ ಘೋಷಿಸಿದೆ ಎಂದು ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ ವಿಜಯಪುರ ಜಿಲ್ಲಾ ಕಾರ್ಯದರ್ಶಿ ಬಿ ಭಗವಾನ್ ರೆಡ್ಡಿ ತಿಳಿಸಿದ್ದಾರೆ.
ವಿಜಯಪುರ ನಗರದಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಅವರು, “ರಾಜ್ಯದಲ್ಲಿ ಪ್ರತಿ ದಿನ 1 ಕೋಟಿ ಲೀಟರ್ ಹೆಚ್ಚು ಹಾಲು ಸಂಗ್ರಹವಾಗುತ್ತಿದ್ದು, ಉತ್ಪಾದಕರಿಂದ ಈ ಹಾಲನ್ನು ಖರೀದಿಸಬೇಕಾಗಿದೆ. ಜನರಿಗೆ 50 ಎಂ ಎಲ್ ಹೆಚ್ಚು ತಲುಪಿಸಿ, ಹೆಚ್ಚುವರಿ ₹2 ಸಂಗ್ರಹಿಸಲಾಗುತ್ತಿದೆಯೆಂದು ಕೆಎಂಎಫ್ ಹೇಳುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ಇದನ್ನೇ ಹೇಳುತ್ತಿದ್ದಾರೆ” ಎಂದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಕೈಗಾರಿಕೆಗಳ ಬೇಡಿಕೆ ಈಡೇಸುವಂತೆ ಕಾಟನ್ ಇಂಡಸ್ಟ್ರೀಸ್ ಅಸೋಸಿಯೇಷನ್ ಆಗ್ರಹ
“ರಾಜ್ಯದಲ್ಲಿ ಹಾಲು ಉತ್ಪಾದನೆಯು ಹೆಚ್ಚಾಗಿರುವುದು ಸಂತೋಷದ ವಿಷಯ. ಹಾಗೂ ಹಾಲು ಉತ್ಪಾದಕರಿಗೆ ಆದರ ನ್ಯಾಯಯುತ ಬೆಲೆಯೂ ದೊರಕಬೇಕು. ಆದರೆ ಕೆಎಂಫ್‌ನ ಈ ಪ್ರಸ್ತಾಪವು ಜನರಿಗೆ ‘ಉಗುಳಲೂ ಆಗದ ನುಂಗಲೂ ಆಗದ ಬಿಸಿ ತುಪ್ಪ’ದಂತಾಗಿದೆ. ಪೆಟ್ರೋಲ್ ಡೀಸೆಲ್ ದರ ಹೆಚ್ಚಾಗಿದೆ, ತರಕಾರಿ ಹಾಗೂ ಇನ್ನಿತರ ಅಗತ್ಯ ವಸ್ತುಗಳ ದರ ಕೈಗೆ ನಿಲುಕುತ್ತಿಲ್ಲ, ಈ ಹಿನ್ನೆಲೆಯಲ್ಲಿ ಈ ಹೆಚ್ಚುವರಿ ಖರ್ಚು ಜನರನ್ನು ಮತ್ತಷ್ಟು ಕಷ್ಟಕ್ಕೆ ದೂಡುತ್ತದೆ. ಆದ್ದರಿಂದ, ಸರ್ಕಾರವು ಹಾಲಿನ ದರ ಹೆಚ್ಚಿಸದೆ ಸಂಗ್ರಹವಾದ ಹೆಚ್ಚುವರಿ ₹1 ಕೋಟಿ ಲೀಟರ್ ಹಾಲಿಗೆ ಸಬ್ಸಿಡಿ ನೀಡಬೇಕು ಮತ್ತು ರಿಯಾಯಿತಿ ದರದಲ್ಲಿ ಬಡಜನರಿಗೆ ದೊರಕುವಂತೆ ಕ್ರಮ ಕೈಗೊಳ್ಳಬೇಕೆಂದು ತನ್ಮೂಲಕ ಏಕಕಾಲದಲ್ಲಿ ರಾಜ್ಯದ ಜನತೆಯ ಮತ್ತು ಹೈನುಗಾರರ ಹಿತಾಸಕ್ತಿಯನ್ನು ಕಾಪಾಡಬೇಕು” ಎಂದು ಸರ್ಕಾರಕ್ಕೆ ಆಗ್ರಹಿಸಿದರು.
