ವಿಜಯಪುರ | ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಎಐಯುಟಿಯುಸಿ ಪ್ರತಿಭಟನೆ

Date:

ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ‘ಒಳ್ಳೆಯ ದಿನಗಳು ಬರುತ್ತಿವೆ’ ಎಂದು ಹೇಳಿತ್ತು. ಆದರೆ, ಸರ್ಕಾರ ದುಡಿಯುವವರ ಜೀವನವನ್ನು ಇನ್ನಷ್ಟು ಸಂಕಟಕ್ಕೆ ತಳ್ಳಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ದುಡಿಯುವ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಸರ್ಕಾರ ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಎಐಯುಟಿಯುಸಿ ಆಗ್ರಹಿಸಿದೆ.

- Advertisement -

ವಿಜಯಪುರ ಜಿಲ್ಲೆಯ ಇಂಡಿಯಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ ಕಾರ್ಯಕರ್ತರು ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

“ಕಾರ್ಮಿಕರು ಹೋರಾಟ ಮಾಡಿ ಗಳಿಸಿದ್ದ ಹಕ್ಕುಗಳು ಇಲ್ಲವಾಗುತ್ತಿವೆ. ಖಾಯಂ ಉದ್ಯೋಗಗಳು ತೀವ್ರವಾಗಿ ಕಡಿತವಾಗುತ್ತಿವೆ. ಹೊರ ಗುತ್ತಿಗೆ, ವಿವಿಧ ರೀತಿಯ ಗುತ್ತಿಗೆ ಕೆಲಸಗಳು, ನಿಗದಿತ ಅವಧಿಗೆ ಮಾತ್ರ ಉದ್ಯೋಗ, ಗೀಗ್ ಕೆಲಸ – ಇಂತಹ ಉದ್ಯೋಗಗಳೇ ಹೆಚ್ಚಾಗುತ್ತಿವೆ. ಸಾರ್ವಜನಿಕ ಉದ್ಯಮಗಳನ್ನು ಜನಹಿತಕ್ಕೆ ವಿರುದ್ಧವಾಗಿ ಖಾಸಗೀಕರಿಸಲಾಗುತ್ತಿದೆ. ದುಡಿಯುವ ಜನರ ವೇತನವು ಜೀವನವೆಚ್ಚಕ್ಕೆ ಹೋಲಿಸಿದರೆ ಕ್ಷೀಣಿಸುತ್ತಿದೆ. ಸೇವಾಭದ್ರತೆ ಮಾಯವಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಜನರ ಬೆವರು ರಕ್ತದಿಂದ ನಿರ್ಮಿಸಿದ್ದ ವಿವಿಧ ಸಾರ್ವಜನಿಕ ಕ್ಷೇತ್ರದ ಆಸ್ತಿಯನ್ನು ಯಾವುದೇ ಹೂಡಿಕೆ ಮಾಡದ ದೈತ್ಯ ಕಾರ್ಪೊರೇಟ್ ಕಂಪನಿಗಳಿಗೆ ಹಸ್ತಾಂತರಿಸಲಾಗುತ್ತಿದೆ. ವಿಮಾನ ನಿಲ್ದಾಣಗಳು, ಹೆದ್ದಾರಿಗಳು, ಬಂದರುಗಳು, ರೈಲ್ವೆ ಹಳಿಗಳು- ನಿಲ್ದಾಣಗಳು ಹೀಗೆ ಎಲ್ಲವನ್ನೂ ಮಾಲೀಕರಿಗೆ ಒಪ್ಪಿಸಲಾಗುತ್ತಿದೆ. ಸರ್ಕಾರವು ರಾಷ್ಟ್ರೀಯ ನಗದೀಕರಣ ಪೈಪ್ ಲೈನ್ ಯೋಜನೆ ಜಾರಿ ಮಾಡಿ ದೇಶದ ಅಪಾರ ಸಂಪತ್ತನ್ನು ಸೃಷ್ಟಿಸುವ ಬೃಹತ್ ಉದ್ದಿಮೆಗಳನ್ನು ಅತ್ಯಂತ ಕಡಿಮೆ ಆದಾಯಕ್ಕೆ ಖಾಸಗಿಯವರಿಗೆ ಒತ್ತೆ ಇಡಲಾಗುತ್ತಿದೆ. ಸಾರ್ವಜನಿಕ ಬ್ಯಾಂಕ್‌ಗಳನ್ನು ವಿಲೀನಗೊಳಿಸುತ್ತಾ, ಖಾಸರ್ಗಿಕರಿಸಲು ಸಿದ್ಧತೆ ನಡೆಸಲಾಗುತ್ತಿದೆ. LIC, GIC ಗಳನ್ನು ಖಾಸಗೀಕರಿಸುವ ಪ್ರಯತ್ನ ನಡೆಸಲಾಗುತ್ತಿದೆ. ಇದು ಅತ್ಯಂತ ದುರದೃಷ್ಟಕರ ಬೆಳವಣಿಗೆ, ರಕ್ಷಣಾ ಉಪಕರಣಗಳನ್ನು ತಯಾರಿಸುವ 41 ಸಶಸ್ತ್ರ ಕಾರ್ಖಾನೆಗಳನ್ನು ಖಾಸಗೀಕರಣ ಪೂರ್ವದ ಪ್ರಕ್ರಿಯೆಯಾಗಿ 7 ನಿಗಮಗಳಾಗಿ ಪರಿವರ್ತಿಸಿದೆ. ಇದು ಗಂಭೀರ ಸ್ವರೂಪದ ದೇಶ ವಿರೋಧಿ ನಡೆಯಾಗಿದೆ” ಎಂದು ಕಿಡಿಕಾರಿದ್ದಾರೆ.

“ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ವಿದೇಶಿ ಬಹುರಾಷ್ಟ್ರೀಯ ಕಂಪನಿಗಳ ಮರ್ಜಿಗೆ ಒಳಗಾಗಿ 12 ಗಂಟೆಗಳಿಗೆ ಹೆಚ್ಚಳ ಮಾಡಿವೆ. ಐಎಲ್ಪಿ 144 ನೇ ಸಮಾವೇಶದ ಪ್ರಕಾರ ಸರ್ಕಾರವು, ಕನಿಷ್ಟ ವರ್ಷಕ್ಕೆ ಒಂದು ಬಾರಿಯಾದರೂ ತ್ರಿಪಕ್ಷೀಯ 2015 ರಿಂದಲೂ ನಡೆಸೇ ಇಲ್ಲ. ಯಾವುದೇ ಚರ್ಚೆ, ಸಮಾಲೋಚನೆ ಇಲ್ಲದೇ ಎಲ್ಲಾ ಕಾರ್ಮಿಕ ಕಾಯ್ದೆಗಳನ್ನು ತಿದ್ದುಪಡಿ ಮಾಡಿ ‘ಕಾರ್ಮಿಕ ಸಂಹಿತೆ’ ಗಳನ್ನು ಜಾರಿಗೆ ತಂದಿದೆ. ಕಾರ್ಮಿಕರ ದುಡಿಮೆಯ ಆರೋಗ್ಯ ಹಾಗೂ ಸುರಕ್ಷತೆಯನ್ನು ಖಾತರಿಪಡಿಸುವ ಬದಲಿಗೆ ಸರ್ಕಾರವು ಕೆಲಸದ ಸ್ಥಳಗಳನ್ನು ಪರಿಶೀಲಿಸುವ ಕಾರ್ಯದಿಂದ ದೂರ ಸರಿಯುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಗ್ರಾಮೀಣ ಭಾಗದ ಕೃಷಿ ಕೂಲಿ ಕಾರ್ಮಿಕರ ಪರಿಸ್ಥಿತಿ ಶೋಚನೀಯವಾಗಿದೆ. ವರ್ಷಪೂರ್ತಿ ಕೆಲಸವಿಲ್ಲದೆ, ಆತಂತ್ರ ಬದುಕು ಸಾಗಿಸುತ್ತಿದ್ದಾರೆ. ಲಕ್ಷಾಂತರ ಮಹಿಳೆಯರೇ ಇರುವ ವಿವಿಧ ಯೋಜನೆಗಳಲ್ಲಿ ತೊಡಗಿರುವ ಸ್ಟೀಮ್ ಕಾರ್ಯಕರ್ತೆಯರನ್ನು ಎಲ್ಲಾ ಸರ್ಕಾರಗಳು ನಿರ್ಲಕ್ಷ ಮಾಡುತ್ತಿವೆ. ಪ್ರಸಕ್ತ ಕೇಂದ್ರ ಸರ್ಕಾರವು ಗ್ರಾಮೀಣ ಭಾಗದ ಜನರ ಪಾಲಿಗೆ ಸ್ವಲ್ಪವಾದರೂ ನೆರವಾಗುತ್ತಿದ್ದ ನರೇಗಾ ಯೋಜನೆ, ಐಸಿಡಿಎಸ್, ಎನ್‌ಹೆಚ್ ಎಂ. ಎಸ್‌.ಎಸ್‌.ಎ ಯೋಜನೆಗಳಿಗೆ ಅನುದಾನವನ್ನು ಕಡಿತಗೊಳಿಸುತ್ತ ಯೋಜನೆಗಳನ್ನು, ಇದರಲ್ಲಿ ತೊಡಗಿರುವ ಲಕ್ಷಾಂತರ ಕಾರ್ಯಕರ್ತರನ್ನು ಸೊರಗಿಸುತ್ತಿದೆ” ಎಂದು ಕಿಡಿಕಾರಿದ್ದಾರೆ.

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ವಿದೇಶಿ ಬಹುರಾಷ್ಟ್ರೀಯ ಕಂಪನಿಗಳ ಮರ್ಜಿಗೆ ಒಳಗಾಗಿ 12 ಗಂಟೆಗಳಿಗೆ ಹೆಚ್ಚಳ ಮಾಡಿವೆ. ಐಎಲ್‌ಪಿ 144ನೇ ಸಮಾವೇಶದ ಪ್ರಕಾರ ಸರ್ಕಾರವು, ಕನಿಷ್ಟ ವರ್ಷಕ್ಕೆ ಒಂದು ಬಾರಿಯಾದರೂ ತ್ರಿಪಕ್ಷೀಯ 2015ರಿಂದಲೂ ನಡೆಸೇ ಇಲ್ಲ. ಯಾವುದೇ ಚರ್ಚೆ, ಸಮಾಲೋಚನೆ ಇಲ್ಲದೇ ಎಲ್ಲಾ ಕಾರ್ಮಿಕ ಕಾಯ್ದೆಗಳನ್ನು ತಿದ್ದುಪಡಿ ಮಾಡಿ ‘ಕಾರ್ಮಿಕ ಸಂಹಿತೆ’ ಗಳನ್ನು ಜಾರಿಗೆ ತಂದಿದೆ. ಕಾರ್ಮಿಕರ ದುಡಿಮೆಯ ಆರೋಗ್ಯ ಹಾಗೂ ಸುರಕ್ಷತೆಯನ್ನು ಖಾತರಿಪಡಿಸುವ ಬದಲಿಗೆ ಸರ್ಕಾರವು ಕೆಲಸದ ಸ್ಥಳಗಳನ್ನು ಪರಿಶೀಲಿಸುವ ಕಾರ್ಯದಿಂದ ದೂರ ಸರಿಯುತ್ತಿದೆ. ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಎಐಯುಟಿಯುಸಿ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ್ ಎಚ್.ಟಿ, ಭಾಗ್ಯಶ್ರೀ ಕುರತಹಳ್ಳಿ, ಸತ್ಯಮ್ಮ ಹಡಪದ, ಭಾಗ್ಯಶ್ರೀ ಮೆಂಡೆಗಾರ, ರಿಯಾನ ಬಾಗಲೂರು, ಇತರರು ನಿಯೋಗದಲ್ಲಿ ಉಪಸ್ಥಿತರಿದ್ದರು.

ಹಕ್ಕೊತ್ತಾಯಗಳು

  1. ಎಲ್ಲರಿಗೂ ಖಾಯಂ ಉದ್ಯೋಗವನ್ನು ಒದಗಿಸಿ ಹಾಗೂ ‘ಉದ್ಯೋಗದ ಹಕ್ಕುನ್ನು’ ಸಂವಿಧಾನದ ಮೂಲಭೂತ ಹಕ್ಕನ್ನಾಗಿಸಿ
  2. ವಿದ್ಯುತ್ ತಿದ್ದುಪಡಿ ಕಾಯ್ದೆ 2023ಅನ್ನು ವಾಪಸ್ಸು ತೆಗೆದುಕೊಳ್ಳಿ, ಕೃಷಿ ಪಂಪ್ಸೆ‌ಟ್ ಮೇಲಿನ ಮೀಟರ್ ಅಳವಡಿಕೆ ರದ್ದಾಗಲಿ.
  3. ಹಣವನ್ನು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವುದನ್ನು ನಿಲ್ಲಿಸಿ.
  4. ಬೆಲೆ ಏರಿಕೆಯನ್ನು ನಿಯಂತ್ರಿಸಿ ಮತ್ತು ಆಹಾರದಂತಹ ಅಗತ್ಯ ವಸ್ತುಗಳ ಮೇಲಿನ ಜಿಎಸ್‌ಟಿಯನ್ನು ಹಿಂಪಡೆಯಿರಿ.
  5. ಎಲ್ಲ ಗುತ್ತಿಗೆ ಕಾರ್ಮಿಕರ ಸೇವೆಗಳನ್ನು ಖಾಯಂಗೊಳಿಸಿ. ಸಮಾನ ಕೆಲಸಕ್ಕೆ ಸಮಾನ ವೇತನವನ್ನು ಖಾತ್ರಿಪಡಿಸಿ.
  6. ಹೊಸ ಪಿಂಚಣಿ ವ್ಯವಸ್ಥೆ (NPS) ಹಿಂತೆಗೆದುಕೊಳ್ಳಿ ಮತ್ತು ಪಿಂಚಣಿಯನ್ನು ಮೂಲಭೂತ ಹಕ್ಕು ಎಂದು ಪರಿಗಣಿಸಿ.
  7. ಕಾರ್ಮಿಕ ವಿರೋಧಿ 4 ಲೇಬರ್ ಕೋಡ್ ಗಳನ್ನು ರದ್ದುಗೊಳಿಸಿ, ಲೇಬರ್ ಕೋಡ್‌ ಗಳ ಹೊಸ ನಿಯಮಗಳ ರಚನೆಯನ್ನು ನಿಲ್ಲಿಸಿ.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಾಂಧಿ ಕಂಡ ಕನಸನ್ನ ಸೌಹಾರ್ದಗೊಳಿಸೋಣ: ಬಸವರಾಜ ಪೂಜಾರ

"ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಮಾತ್ರ ಗಾಂಧಿ ಜಯಂತಿ ಅತ್ಯಂತ ವಿಜೃಂಭಣೆಯಿಂದ ಆಚರಣೆ...

SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ...

ಅ.4ರಿಂದ ವಿಜಯಪುರ – ತಿರುಪತಿ ದಸರಾ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

ದಸರಾ ಹಬ್ಬದ ಹಿನ್ನೆಲೆಯಲ್ಲಿ ತಿರುಪತಿ–ವಿಜಯಪುರ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಾಪ್ತಾಹಿಕ ವಿಶೇಷ...

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...