ವಿಜಯಪುರ | ಯುವಜನರಿಗೆ ತರಬೇತಿ ನೀಡುವ ಹೆಸರಿನಲ್ಲಿ ವಂಚನೆ ಆರೋಪ; ಡಿವಿಪಿ ಪ್ರತಿಭಟನೆ

Date:

ಸರ್ಕಾರಿ ಉದ್ಯೋಗಗಳ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗೆ ತರಬೇತಿ ನೀಡುವ ಹೆಸರಿನಲ್ಲಿ ವಿದ್ಯಾರ್ಥಿ ಯುವಜನರಿಗೆ ‘ಟಾರ್ಗೆಟ್ ಕೋಚಿಂಗ್ ಸೆಂಟರ್’ ವಂಚಿಸಿದೆ. ಮಾತ್ರವಲ್ಲದೆ, ಸರ್ಕಾರದ ಹಣವನ್ನೂ ದುರ್ಬಳಕೆ ಮಾಡಿಕೊಂಡಿದೆ. ಆ ಸಂಸ್ಥೆಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ (ಡಿವಿಪಿ) ಪ್ರತಿಭಟನೆ ನಡೆಸಿದೆ.

ವಿಜಯಪುರಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಡಿವಿಪಿ ಮುಖಂಡ ಅಕ್ಷಯ್ ಕುಮಾರ್. “ಸರ್ಕಾರಿ ಇಲಾಖೆಗಳ ಹುದ್ದೆಗಳು, ಯುಪಿಎಸ್‌ಸಿ, ಕೆಪಿಎಸ್‌ಸಿ ಪರೀಕ್ಷೆಗಳಿಗೆ ತರಬೇತಿ ನೀಡಲು ಟಾರ್ಗೆಟ್ ಕೋಚಿಂಗ್ ಸೆಂಟರ್ ಸರ್ಕಾರದ ಅನುದಾನ ಪಡೆದುಕೊಂಡಿದೆ. ಆದರೆ, ಸರ್ಕಾರದ ನಿಯಮಾವಳಿ ಪ್ರಕಾರ ತರಬೇತಿ ನೀಡದೆ, ವಂಚಿಸುತ್ತಿದೆ” ಎಂದು ಆರೋಪಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಸುಳ್ಳು ದಾಖಲಾತಿಗಳನ್ನು ಸೃಷ್ಟಿಸಿ ಸರ್ಕಾರಿ ಅನುದಾನವನ್ನು ಸಂಸ್ಥೆ ದುರುಪಯೋಗ ಪಡಿಸಿಕೊಳ್ಳುತ್ತಿದೆ. ಸರ್ಕಾರ ನೀಡುವ ಉಚಿತ ತರಬೇತಿಗೆ ಹಲವಾರು ವಿದ್ಯಾರ್ಥಿ, ಯುವಜನರು ಆಯ್ಕೆಯಾಗಿದ್ದು, ಅವರೆಲ್ಲರೂ ಸರ್ಕಾರಿ ಉದ್ಯೋಗ ಪಡೆಯುವ ಕನಸು ಹೊತ್ತಿದ್ದಾರೆ. ಆದರೆ, ಸಂಸ್ಥೆಯು ತರಬೇತಿ ನೀಡದೆ, ಅವರ ಕನಸಿನ್ನು ನಾಶ ಮಾಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸಂಸ್ಥೆಯ ವಿರುದ್ಧ ಕ್ರಮ ಕೈಗೊಳ್ಳಬೇಕು.ತಪ್ಪಿತಸ್ಥರಿಗೆ ಶಿಕ್ಷ ವಿಧಿಸಬೇಕು. ವಿದ್ಯಾರ್ಥಿ ಯುವಜನರ ಜೀವನದ ಜೊತೆ ಆಟವಾಡುತ್ತಿರುವ ಸಂಸ್ಥೆಗೆ ಸರ್ಕಾರ ನೀಡಿರುವ ಯೋಜನೆಯನ್ನು ರದ್ದುಗೊಳಿಸಿ, ಸಂಸ್ಥೆಯನ್ನು ಕಪ್ಪು ಪಟ್ಟಿಗೆ ಸೇರಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲಿ ಆನಂದ ಮುದೂರ, ಸದಾಶಿವ ಛಲವಾದಿ, ದರ್ಶನ ಸಾಲೋಟಗಿ, ಸತೀಶ್ ಅಂಜುಟಗಿ, ಸೋಮನಾಥ ಮಾದರ, ಶ್ರೀಧರ್ ಛಲವಾದಿ, ಸಚಿನ್, ಪ್ರಜ್ವಲ್, ದಾವೂದ್ ಮುಲ್ಲಾ, ದಯಾನಂದ್ ಸಾಲೋಟಗಿ ಸುರೇಶ್ ಕಾಂಬಳೆ ಹಾಗೂ ವಿದ್ಯಾರ್ಥಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ‘ಸೊಳ್ಳೆ ಉತ್ಪಾದನಾ ಕೇಂದ್ರ’ವಾದ ವೈದ್ಯಕೀಯ ಕಾಲೇಜು; ಕಣ್ಮುಚ್ಚಿ ಕುಳಿತ ಅಧಿಕಾರಿಗಳು!

ಇಡೀ ರಾಜ್ಯದಲ್ಲಿ ಡೆಂಘೀ ಜ್ವರ ಹರಡುತ್ತಾ ಇರುವಾಗ ನೈರ್ಮಲ್ಯ ಕಾಪಾಡಿ, ನೀರು...

ವಿಜಯಪುರ | ಎನ್‌ಎಸ್‌ಎಸ್ ಸ್ವಯಂ ಸೇವಕರಲ್ಲಿ ತಾಳ್ಮೆ, ಶಿಸ್ತಿನ ಜೊತೆಗೆ ಧೈರ್ಯ ತುಂಬುತ್ತದೆ: ಡಾ.ಪ್ರತಾಪ್ ಲಿಂಗಯ್ಯ

"ಎನ್‌ಎಸ್‌ಎಸ್ ಎಂಬುದು ಮನುಷ್ಯನಲ್ಲಿ ಸಹನೆ, ತಾಳ್ಮೆ ಹಾಗೂ ಶಿಸ್ತಿನ ಜೊತೆಗೆ ಧೈರ್ಯವನ್ನು...

ವಿಜಯಪುರ | ನೂತನ ವಸತಿ ನಿಲಯ ಮಂಜೂರು ಮಾಡುವಂತೆ ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹ

ವಿಜಯಪುರ ನಗರದಲ್ಲಿರುವ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದಲ್ಲಿ ಹಿಂದುಳಿದ ವರ್ಗಗಳ ಮತ್ತು...

ಚಿಕ್ಕಬಳ್ಳಾಪುರ | ಶಾಶ್ವತ ನೀರಾವರಿ ಯೋಜನೆಗಾಗಿ ಪ್ರಧಾನಿ ಭೇಟಿ : ಶಾಸಕ ಸಮೃದ್ಧಿ ಮಂಜುನಾಥ್‌ ವಾಗ್ದಾನ

"ಬರಪೀಡಿತ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ತರುವ ಕುರಿತು ಪ್ರಧಾನಿ ಮೋದಿ ಭೇಟಿಗೆ...