ವಿಜಯಪುರ | ಹಿರಿತನದ ಆಧಾರದ ಮೇಲೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ ನೀಡಿ: ಶಾಸಕ ನಾಡಗೌಡ ಮನವಿ

Date:

ಸುದೀರ್ಘ 45 ವರ್ಷಗಳ ರಾಜಕೀಯ ಅನುಭವ ಹಾಗೂ ಹಿರಿತನದ ಆಧಾರದ ಮೇಲೆ ಸೂಕ್ತವಾದ ಸ್ಥಾನ ಮಾನ ನೀಡಿ ಗೌರವಿಸಬೇಕು ಎಂದು ಶಾಸಕ, ಕರ್ನಾಟಕ ಮಾರ್ಜಕ ಮತ್ತು ಸಾಬೂನು ನಿಗಮದ ಅಧ್ಯಕ್ಷ ಸಿ ಎಸ್ ನಾಡಗೌಡ ಮನವಿ ಮಾಡಿದರು.

- Advertisement -

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಚುನಾವಣಾ ಪ್ರಚಾರದಲ್ಲಿ ನಮ್ಮ ಮತಕ್ಷೇತ್ರದ ಜನರಿಗೆ ಕಾಂಗ್ರೆಸ್ ವರಿಷ್ಠರು ಹಾಗೂ ಸಿಎಂ ಸಿದ್ದರಾಮಯ್ಯ ಮಾತು ಕೊಟ್ಟಿದ್ದರು. ಪ್ರಾರಂಭದಲ್ಲೂ ಅವಕಾಶ ಕೊಡಲಿಲ್ಲ. ಸದ್ಯ ಈ ಎರಡನೇ ಅವಧಿಯ ಸಂಪುಟ ವಿಸ್ತರಣೆಯಲ್ಲಿ ಅವಕಾಶ ನೀಡಬೇಕೆಂದು ಮತಕ್ಷೇತ್ರದ ಜನರ ಒತ್ತಾಯದ ಕೂಗೂ ಕೇಳಿ ಬರುತ್ತಿದೆ. ಇಲ್ಲದಿದ್ದರೆ ಪಕ್ಷದ ಮೇಲೆ ನಮ್ಮ ಕಾರ್ಯಕರ್ತರು ಹಾಗೂ ಮುಖಂಡರು ವಿಶ್ವಾಸ ಕಳೆದುಕೊಳ್ಳುತ್ತಾರೆ. ಆಗ ಪಕ್ಷವು ಮುಜುಗರಕ್ಕೀಡಾಗಬೇಕಾಗುತ್ತದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ನಮ್ಮ ಮತ ಕ್ಷೇತ್ರದಲ್ಲಿ ನೀರಾವರಿ ಸೇರಿದಂತೆ ಹಲವು ಅಭಿವೃದ್ಧಿ ಪೂರಕ ಕಾಮಗಾರಿಗಳು ಬಾಕಿ ಉಳಿದಿದ್ದು, ನಮ್ಮ ಸರ್ಕಾರ ಬಂದರೆ ಈಡೇರಿಸುವುದಾಗಿ ಜನರಲ್ಲಿ ಭರವಸೆ ನೀಡಿದ್ದೇವೆ. ಸದ್ಯ ಅದು ಸಾಧ್ಯವಾಗುತ್ತಿಲ್ಲ. ಒಂದು ಮತಕ್ಷೇತ್ರ ಅಭಿವೃದ್ದಿ ಆಗಬೇಕೆಂದರೆ ಮಂತ್ರಿಯಾಗಿದ್ದರೆ ಮಾತ್ರ ಸಾಧ್ಯ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಸಚಿವ ಸ್ಥಾನದ
ಆಕಾಂಕ್ಷಿಯಾಗಿದ್ದೇನೆ. ಜಾತಿ ಸಮೀಕ್ಷೆ ಆಧಾರದ ಮೇಲೆ ಲಿಂಗಾಯತ ರೆಡ್ಡಿ ಹಾಗೂ ಲಿಂಗಾಯತ ಕೋಟಾದಡಿಯಲ್ಲಿ ನನ್ನನ್ನು ಮಂತ್ರಿ ಮಾಡಬೇಕೆಂದು ಒತ್ತಾಯಿಸುತ್ತೇನೆ” ಎಂದರು.

ಇದನ್ನೂ ಓದಿ: ವಿಜಯಪುರ | ಕರ್ನಾಟಕ ರಾಜ್ಯೋತ್ಸವ: ಸಚಿವ ಎಂ ಬಿ ಪಾಟೀಲರಿಂದ ಧ್ವಜಾರೋಹಣ

ಕೈಯಾಗ ಕಂಕಣ ಕಟ್ಟಿಕೊಂಡ ಮೇಲೆ ಏತಕ್ಕಾಗಿ ಕಟ್ಟಿಕೊಂಡಿದ್ದಾರೆ ಅಂತ ಎಲ್ಲರಿಗೂ ಗೊತ್ತಾಗುತ್ತದೆ. ಈಗಾಗಲೇ ನಾವು ಕೈಯಾಗ ಕಂಕಣ ಕಟ್ಟಿಕೊಂಡಿದ್ದೇವೆ. ಯಾರಿಗಾದರೂ ಉನ್ನತ ಮಟ್ಟದ ಭವಿಷ್ಯ ಬೇಕೆನ್ನುವುದು ಮನಸ್ಸಿನಲ್ಲಿರುತ್ತದೆ. ನಾನು ಲಿಂಗಾಯತರಲ್ಲಿರುವಂತಹ ಒಳಪಂಗಡದ ಕೋಟಾದಲ್ಲಿ ಕೇಳುತ್ತೇನೆ. ವಿಜಯಪುರ ಜಿಲ್ಲೆಯಲ್ಲಿಯೇ ಅತ್ಯಂತ ಹಿರಿಯ ಶಾಸಕನಾಗಿದ್ದು, ಈ ಬಾರಿ ನನಗೊಂದು ಅವಕಾಶ ಕೊಡಬೇಕೆಂದು ಕೇಳುತ್ತೇನೆ, ನಾಳೆಯೂ ಕೇಳುತ್ತೇನೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಚೇತನ್ ಗೊಡ್ಲುಮನೆ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ 

ಗೊಡ್ಲುಮನೆ ಹೆಚ್.ಹೆಚ್. ರಮೇಶ್ ಗೌಡ ಹಾಗೂ ಹೆಚ್.ಆರ್. ಜಯಲಕ್ಷ್ಮಿ ದಂಪತಿಯ ಹಿರಿಯ...

ಹಾವೇರಿ | ಪಿಎಫ್ ಹೊಸ ನೀತಿ: ವಿರೋಧಿಸಿ ಮಹಿಳಾ ಉದ್ಯೋಗಿಗಳು ದಿಡೀರ್ ಹೆದ್ದಾರಿ ತಡೆದು ಪ್ರತಿಭಟನೆ

"ಕೇಂದ್ರ ಸರ್ಕಾರವು ಭವಿಷ್ಯನಿಧಿ (ಪಿಎಫ್) ಸೌಲಭ್ಯದಲ್ಲಿ ಹೊಸ ಆದೇಶ ಮಾಡಿರುವುದು ಗಾರ್ಮೆಂಟ್ಸ್...

ಚಿಕ್ಕಮಗಳೂರು | ರಾಷ್ಟ್ರೀಯ ಹೆದ್ದಾರಿ: ಮರಗಳ ಕಟಾವು ತನಿಖೆಗೆ ಒತ್ತಾಯ

ಮೂಡಿಗೆರೆ ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಕೆಳಗೂರು ಸಮೀಪದ ಸಾಲು ಮರ...

ಬಾಗಲಕೋಟೆ | ಸರ್ಕಾರಿ ನೌಕರರ ಸೇವಾ ಪ್ರಶಸ್ತಿಗೆ ನಾಮನಿರ್ದೇಶನ ಆಹ್ವಾನ

ರಾಜ್ಯ ಸರ್ಕಾರದ ವಿವಿಧ ಇಲಾಖೆಯಲ್ಲಿ ಕರ್ತವ್ಯನಿಷ್ಠೆ, ಪ್ರಾಮಾಣಿಕತೆ ಹಾಗೂ ಗಮನಾರ್ಹ ಸೇವೆ...