ವಿಜಯಪುರ | ʼದೇಶಭಕ್ತಿಯ ಜೊತೆ ಪಾಲಕರಿಗೆ ಗೌರವ ಕೊಡುವ ಗುಣ ಬೆಳೆಸಿಕೊಳ್ಳಬೇಕುʼ

Date:

ವಿದ್ಯಾರ್ಥಿಗಳು ದೇಶಭಕ್ತಿಯ ಜೊತೆಗೆ ಪಾಲಕರಿಗೆ ಸದಾ ಗೌರವ ನೀಡುವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಎನ್ಎಸ್ಎಸ್ ಸಲಹಾ ಸಮಿತಿಯ ಸದಸ್ಯ ಡಾ. ಜಾವಿದ್ ಜಮಾದಾರ ಹೇಳಿದರು.

- Advertisement -

ವಿಜಯಪುರ ನಗರದ ರಾಜ್ಯ ಎನ್‌ಎಸ್‌ಎಸ್ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಎನ್‌ಎಸ್‌ಎಸ್ ಪ್ರಾದೇಶಿಕ ನಿರ್ದೇಶನಾಲಯ, ಬೆಂಗಳೂರು ಭಾರತ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಆಯೋಸಿದ್ದ ‘ರಾಷ್ಟ್ರೀಯ ಭಾವೈಕ್ಯತಾ ಶಿಬಿರ-2025’ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, “ರಾಷ್ಟ್ರೀಯ ಸೇವಾ ಯೋಜನೆ ಸೇವೆ ಹಾಗೂ ಶ್ರಮದ ಮಹತ್ವವನ್ನು ಸಾರುವಂಥದ್ದಾಗಿದೆ. ಆತಿಥ್ಯಕ್ಕೆ ಹೆಸರಾದ ವಿಜಯಪುರ ಜಿಲ್ಲೆಗೆ ವಿವಿಧ ರಾಜ್ಯಗಳಿಂದ ಯುವ ಪ್ರತಿನಿಧಿಗಳು ಆಗಮಿಸಿದ್ದು ಸಂತೋಷದ ಸಂಗತಿ. ಅವರಿಗಾಗಿ ಒಳ್ಳೆಯ ಪರಿಸರವನ್ನು ಒದಗಿಸುವುದು ನಮ್ಮ ಕರ್ತವ್ಯವಾಗಿದ್ದು, ನಮ್ಮ ಸಂಸ್ಕೃತಿಯನ್ನು ಅವರಿಗೂ ಪರಿಚಯಿಸುವ ಅವಕಾಶ ಈ ಕಾರ್ಯಕ್ರಮದ ಮೂಲಕ ಸಿಕ್ಕಿದೆ. ವಿದ್ಯಾರ್ಥಿಗಳು ಶ್ರಮದ ಮಹತ್ವವನ್ನು ಅರ್ಥಮಾಡಿಕೊಂಡು, ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು” ಎಂದರು.

ಸಂದರ್ಭದಲ್ಲಿ ಎನ್‌ಎಸ್ಎಸ್ ಕೋಶದ ಸಂಯೋಜನಾಧಿಕಾರಿ ಡಾ.ಅಶೋಕ ಕುಮಾರ ಸುರಪುರ ಮಾತನಾಡಿ, ಕಳೆದ ಏಳು ದಿನಗಳಿಂದ ನಡೆದ ಭಾವೈಕ್ಯತಾ ಶಿಬಿರದ ಕಾರ್ಯ ಚಟುವಟಿಕೆಗಳ ಕುರಿತು ವಿವರಣೆ ನೀಡಿದರು. ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ವರ್ಣರಂಜಿತ ತೆರೆ ಬಿದ್ದಿತು. ಮಹಾರಾಷ್ಟ್ರ, ತಮಿಳ್ನಾಡು, ಕನ್ನಡ ಸೇರಿ ವಿವಿಧ ಭಾಷೆ ಮೂಲಕ ಸಂಭಾಷಣೆ ಮೂಲಕ ಭಾವೈಕ್ಯತೆ ಸಂದೇಶ ಸಾರಿದರು. ಆಯಾ ರಾಜ್ಯದ ಉಡುಗೆ ಸಂಸ್ಕೃತಿಯನ್ನು ಸಾರುವ ವೇಷದಲ್ಲಿ ಯುವ ಸ್ವಯಂ ಸೇವಕರು ಗಮನ ಸೆಳೆದು ತಮ್ಮ ರಾಜ್ಯದ ಸಾಂಸ್ಕೃತಿಕ ಸಿರಿವಂತಿಕೆಯನ್ನು ಪರಿಚಯಿಸುವಲ್ಲಿ ಯಶಸ್ವಿಯಾದರು.

ಇದನ್ನೂ ಓದಿ: ವಿಜಯಪುರ | ಹರನಾಳ ಗ್ರಾಪಂ ಅವ್ಯವಹಾರ ಖಂಡಿಸಿ ದಸಂಸ ಪ್ರತಿಭಟನೆ

ಸಮಾರಂಭದಲ್ಲಿ ಕೇರಳ, ತಮಿಳುನಾಡು, ಮಹಾರಾಷ್ಟ್ರ ಸೇರಿದಂತೆ ಏಳು ರಾಜ್ಯಗಳಿಂದ 65 ವಿಶ್ವವಿದ್ಯಾಲಯಗಳಿಂದ 200 ಕ್ಕೂ ಹೆಚ್ಚು ಎನ್ಎಸ್‌ಎಸ್ ಸ್ವಯಂ ಸೇವಕರು, ಶಿಕ್ಷಣ ಆಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ. ವಿಷ್ಣು ಶಿಂದೆ, ಮಲ್ಲಮ್ಮ ವಾಜಪ್ಪನ್ನವರ, ವಿವಿಧ ವಿಭಾಗಗಳ ವಿದ್ಯಾರ್ಥಿನಿಯರು, ಮುಖ್ಯಸ್ಥರು, ಬೋಧಕ ವರ್ಗದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...